ಅಂಗಲಾಚಿದರೂ ಕೇಳದ ಕೋರ್ಟ್: ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್, ಶಾಸಕ ಸ್ಥಾನಕ್ಕೂ ಕುತ್ತು!

Janardhan Reddy Obulapuram mining case:: ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಅಕ್ರಮ ಗಣಿಗಾರಿಕೆಯ ಅಪರಾಧಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗಾದ್ರೆ, ರೆಡ್ಡಿ ಮತ್ತೆ ಜೈಲಿಗೆ ಹೋಗುತ್ತಾರಾ? ಅವರ ಶಾಸಕ ಸ್ಥಾನದ ಗತಿ ಏನು? ಹಾಗೇ ಅವರ ಮುಂದಿರುವ ಆಯ್ಕೆಗಳೇನು ಎನ್ನುವ ಮಾಹಿತಿ ಇಲ್ಲಿದೆ.

ಅಂಗಲಾಚಿದರೂ ಕೇಳದ ಕೋರ್ಟ್: ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್, ಶಾಸಕ ಸ್ಥಾನಕ್ಕೂ ಕುತ್ತು!
Janardhan Reddy
Updated By: ರಮೇಶ್ ಬಿ. ಜವಳಗೇರಾ

Updated on: May 06, 2025 | 5:27 PM

ಬೆಂಗಳೂರು, (ಮೇ 06): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram mining case) ಬರೋಬ್ಬರಿ 884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್‌ , ಮಾಜಿ ಸಚಿವ, ಹಾಲಿ ಶಾಸಕ ಜನಾರ್ಧನ ರೆಡ್ಡಿಯನ್ನು (Gali Janardhan Reddy )ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ (CBI Special Court)​ ತೀರ್ಪು ನೀಡಿದೆ. ಜೊತೆಹೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಸಾಬೀತಾಗಿದ್ದು,ಈಗಾಗಲೇ ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆಯನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ಮನವಿ ಮಾಡಿದ್ದಾರೆ. ಆದ್ರೆ, ಸಿಬಿಐ ವಿಶೇಷ ಕೋರ್ಟ್ , ರೆಡ್ಡಿ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್ ಆದಂತಾಗಿದೆ.

ನೀವು ಜೀವಾವಧಿ ಶಿಕ್ಷೆಗೆ ಅರ್ಹರು ಎಂದ ಕೋರ್ಟ್​

ನ್ಯಾಯಾಲಯದ ವಿಚಾರಣೆ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ಇಂದು (ಮೇ 06) ಬೆಳಗ್ಗೆ ಹೈದರಾಬಾದ್ ಗೆ ತೆರಳಿದ್ದರು. ಇನ್ನು ಏಳು ವರ್ಷ ನೀಡಿರುವ ಶಿಕ್ಷೆಯಲ್ಲಿ ಕಡಿಮೆ ಮಾಡಿ ಎಂದು ಜನಾರ್ದನ ರೆಡ್ಡಿ ಅವರು ಕೋರ್ಟ್​ಗೆ ಮನವಿ ಮಾಡಿದ್ದಾರೆ. ನಾನು ಈಗಾಗಲೇ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಕಳೆದಿದ್ದೇನೆ. ನನ್ನ ವಯಸ್ಸು ಮತ್ತು ನಾನು ಮಾಡಿದ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ. ಬಳ್ಳಾರಿ ಮತ್ತು ಗಂಗಾವತಿಯ ಜನರು ನನ್ನನ್ನು ಭಾರಿ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ನಾನು ಸಾರ್ವಜನಿಕ ಸೇವೆಗೆ ಸಮರ್ಪಿತನಾಗಿದ್ದೇನೆ . ಸಾರ್ವಜನಿಕರಿಂದ ನನಗೆ ಸಿಗುವ ಬೆಂಬಲವು ಆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ದಯವಿಟ್ಟು ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ಗೆ ಅಂಗಲಾಚಿದ್ದಾರೆ. ಆದ್ರೆ, ಕೋರ್ಟ್ ನಿರಾಕರಿಸಿದೆ. ನಿಮಗೆ 10 ವರ್ಷಗಳ ಶಿಕ್ಷೆಯನ್ನು ಏಕೆ ನೀಡಬಾರದು? ನೀವು ಜೀವಾವಧಿ ಶಿಕ್ಷೆಗೆ ಅರ್ಹರು ಎಂದು ತಪರಾಕಿ ಹಾಕಿ ರೆಡ್ಡಿ ಮನವಿಯನ್ನು ತಿರಸ್ಕರಿಸಿದೆ.

ಇದನ್ನೂ ಓದಿ: ಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ: ಸಿಬಿಐ ಕೋರ್ಟ್ ತೀರ್ಪು

ಜನಾರ್ದನ ರೆಡ್ಡಿಗೆ ಮುಂದಿರುವ ಆಯ್ಕೆಗಳೇನು?

3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗಿರುವುದರಿಂದ ಶಾಸಕ ಜನಾರ್ದನ ರೆಡ್ಡಿ ಜೈಲು ಖಚಿತವಾಗಿದೆ. ಇನ್ನು ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಹಾಗೇ ಒಂದು ತಿಂಗಳೊಳಗೆ ರೆಡ್ಡಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಹೈಕೋರ್ಟ್​​ನಿಂದ ತಡೆ ಸಿಕ್ಕರಷ್ಟೇ ರೆಡ್ಡಿ ಬಚಾವ್​ ಆಗಲಿದ್ದಾರೆ.

ಇದನ್ನೂ ಓದಿ
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
ಸತೀಶ್ ಸೈಲ್​ಗೆ ಜೈಲು ಶಿಕ್ಷೆ: ಯಾವ ಪ್ರಕರಣದಲ್ಲಿ ಎಷ್ಟು ಶಿಕ್ಷೆ?
ಬೇಲೆಕೇರಿ ಅದಿರು ಅಕ್ರಮ ಸಾಗಾಟ: ಸತೀಶ್​​ ಸೈಲ್​ಗೆ 7 ವರ್ಷ ಜೈಲು
ಬೇಲೆಕೇರಿ ಅದಿರು ಅಕ್ರಮ: ಸತೀಶ್ ಸೈಲ್ ಪಾತ್ರವೇನು? ಸಮಗ್ರ ಮಾಹಿತಿ ಇಲ್ಲಿದೆ

ಹೀಗಾಗಿ ರೆಡ್ಡಿ ಜಾಮೀನಿಗಾಗಿ ಹೈದರಾಬಾದ್​ನ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಬೇಕು. ಆದರೆ, ಹೈಕೋರ್ಟ್ ಜಾಮೀನು ನೀಡುವವರೆಗೆ ಜೈಲಿನಲ್ಲಿರಬೇಕು. ಇನ್ನು ಶಿಕ್ಷೆಗೆ ತಡೆಯಾಜ್ಞೆ ಸಿಗದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿಯೂ ಇದೆ.

ಏನಿದು ಪ್ರಕರಣ?

ಆಂಧ್ರ ಪ್ರದೇಶದಲ್ಲಿ ವೈ.ಎಸ್‌ ರಾಜಶೇಖರರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಗಣಿ‌ಗಾರಿಕೆ ಮಂಜೂರಾತಿ ವೇಳೆ ಇಲಾಖೆಗಳಿಂದ ಅಕ್ರಮವಾಗಿದೆ. ಅರಣ್ಯ ಇಲಾಖೆ, ಗಣಿ‌ ಇಲಾಖೆಯಿಂದ ಅಕ್ರಮ‌ ಆಗಿದೆ ಎಂದು ಆರೋಪಿಸಲಾಗಿತ್ತು. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಇವರ ಮೇಲಿದೆ. ಈಗಾಗಲೇ ಇದೇ ಪ್ರಕರಣದಲ್ಲಿ ಮೂರುವರೇ ವರ್ಷ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಆಚೆ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:00 pm, Tue, 6 May 25