ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕದ 70 ರೈತರು ಭೋಪಾಲ್​ನಲ್ಲಿ ಪೊಲೀಸ್ ವಶಕ್ಕೆ

ಕರ್ನಾಟಕದಿಂದ ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಸುಮಾರು 70 ಮಂದಿ ರೈತರನ್ನು ಮಧ್ಯ ಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು ಸಂಯುಕ್ತ ಕಿಸಾನ್ ಮೋರ್ಚಾ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತೆರಳುತ್ತಿದ್ದರು.

ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕದ 70 ರೈತರು ಭೋಪಾಲ್​ನಲ್ಲಿ ಪೊಲೀಸ್ ವಶಕ್ಕೆ
ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು
Follow us
| Updated By: ಗಣಪತಿ ಶರ್ಮ

Updated on:Feb 12, 2024 | 10:46 AM

ಮೈಸೂರು / ಹುಬ್ಬಳ್ಳಿ: ಫೆಬ್ರವರಿ 12: ದೆಹಲಿಯ ಕಿಸಾನ್ ಮೋರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಕರ್ನಾಟಕದ 70 ಮಂದಿ ರೈತರನ್ನು (Karnataka Farmers) ಮಧ್ಯ ಪ್ರದೇಶದ ಭೋಪಾಲ್​ನಲ್ಲಿ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಧಾರವಾಡ ಜಿಲ್ಲೆಯ 16 ರೈತರು ಕೂಡ ಇದರಲ್ಲಿ ಸೇರಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ (Kurubur Shanthakumar) ನೇತೃತ್ವದಲ್ಲಿ ರೈತರು ದೆಹಲಿಗೆ ತೆರಳುತ್ತಿದ್ದರು.

ದೆಹಲಿಯ‌ ಜಂತರ್​ ಮಂತರ್​​ನಲ್ಲಿ ಮಂಗಳವಾರ ಕಿಸಾನ್ ಮೋರ್ಚಾ ವತಿಯಿಂದ ಕಾರ್ಯಕ್ರಮ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯದ ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ತೆರಳುತ್ತಿದ್ದರು.

ಸದ್ಯ ವಶಕ್ಕೆ ಪಡೆಯಲಾಗಿರುವ ರೈತರನ್ನು ಕಲ್ಯಾಣ ಮಂಟಪವೊಂದರಲ್ಲಿ ಇರಿಸಿಕೊಳ್ಳಲಾಗಿದೆ. ಅಲ್ಲಿಯೇ ‘ರೈತ ವಿರೋಧಿ ಮಧ್ಯಪ್ರದೇಶ ಪೊಲೀಸರಿಗೆ ಧಿಕ್ಕಾರ’ ಎಂದು ಘೋಷಣೆ ಕೂಗಿ ರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರೈತರ ಪ್ರತಿಭಟನೆ ಹಮ್ಮಿಕೊಂಡಿದೆ.

ಪ್ರತಿಭಟನೆಗೆ 200ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು

ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ರೈತರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಪಿಂಚಣಿ ಮತ್ತು ವಿಮಾ ಯೋಜನೆಗಳಿಗೆ ಖಾತರಿ ನೀಡುವ ಕಾನೂನನ್ನು ರೂಪಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಮುನ್ನಚ್ಚರಿಕಾ ಕ್ರಮವಾಗಿ ಹರಿಯಾಣ ಸರ್ಕಾರ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಮಂಗಳವಾರ ರಾತ್ರಿಯವರೆಗೆ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎ​​ಪಿಎಫ್​ ಹುದ್ದೆ ನೇಮಕಾತಿ ಪರೀಕ್ಷೆಗೆ ಅವಕಾಶ

ಏತನ್ಮಧ್ಯೆ, ದೆಹಲಿಗೆ ತೆರಳುವ ಮೊದಲು ರೈತರು ನೆರೆಯ ರಾಜ್ಯ ರೈತರು ಹರಿಯಾಣವನ್ನು ಪ್ರವೇಶಿಸದಂತೆ ಖಚಿತಪಡಿಸಿಕೊಳ್ಳಲು ಹರಿಯಾಣ-ಪಂಜಾಬ್ ಗಡಿಗಳನ್ನು ಮುಚ್ಚಲು ಪೊಲೀಸರು ಯೋಜಿಸಿದ್ದಾರೆ. ಈ ಕ್ರಮವು ಚಂಡೀಗಢ ಮತ್ತು ದೆಹಲಿ ನಡುವೆ ಪ್ರಯಾಣಿಸುವವರಿಗೆ ಅನಾನುಕೂಲತೆಯನ್ನು ಉಂಟುಮಾಡಲಿದೆ. ಈ ನಿಟ್ಟಿನಲ್ಲಿ ಪೊಲೀಸರು ಪರ್ಯಾಯ ಮಾರ್ಗಗಳನ್ನು ಉಲ್ಲೇಖಿಸಿ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 am, Mon, 12 February 24

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ