ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​

76ನೇ ಗಣರಾಜ್ಯೋತ್ಸವದಂದು ಕರ್ನಾಟಕದ ಬೆಂಗಳೂರಿನಲ್ಲಿ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿದರು. ಅವರು ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ ಕುರಿತು ಮಾತನಾಡಿದರು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಬಗ್ಗೆ ವಿವರಿಸಿ, ರಾಜ್ಯದ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಯನ್ನು ಎತ್ತಿ ಹಿಡಿದರು.

ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​
ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್
Follow us
ವಿವೇಕ ಬಿರಾದಾರ
|

Updated on: Jan 26, 2025 | 10:56 AM

ಬೆಂಗಳೂರು, ಜನವರಿ 26: ಕರ್ನಾಟಕದಲ್ಲಿ 76ನೇ ಗಣರಾಜ್ಯೋತ್ಸವ (Republic Day) ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು, ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಧ್ವಾಜರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಬಳಿಕ ಪೊಲೀಸ್​ ಬ್ಯಾಂಡ್​ ತಂಡದಿಂದ ರಾಷ್ಟ್ರಗೀತೆ ನುಡಿಸಲಾಯಿತು.​

ಇದೇ ವೇಳೆ ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಇಂದು ದೇಶಕ್ಕೆ ಐತಿಹಾಸಿಕ ದಿನವಾಗಿದೆ. ಕಾನೂನಿನ ಮುಂದೆ ಎಲ್ಲರೂ ಒಂದೇ. ನಾವು ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತೆ ಎಂದರು.

ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಲಾಗಿದೆ. ಗ್ಯಾರಂಟಿಗಳ ಮೂಲಕ ದೇಶದಲ್ಲಿ ಹೊಸ ಸಂದೇಶ ನೀಡಿದೆ. ಗ್ಯಾರಂಟಿಗಳನ್ನು ಟೀಕೆ ಮಾಡುವವರಿಗೆ ಸಂದೇಶವನ್ನು ನೀಡಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಜಾರಿ ಮಾಡಲಾಗಿದೆ. ಪ್ರತಿ ಮಹಿಳೆಗೆ ತಿಂಗಳಿಗೆ 2 ಸಾವಿರ ಹಣ ನೀಡಲಾಗುತ್ತಿದೆ. ಕೋಟ್ಯಂತರ ಮಹಿಳೆಯರು ಇದರ ಲಾಭವನ್ನ ಪಡೆದಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ 35,180 ಕೋಟಿ ಮೀಸಲಿಟ್ಟಿದ್ದೇವೆ. ಅಷ್ಟೇ ಅಲ್ಲದೇ ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ. ರಾಜ್ಯದ 1.62 ಕೋಟಿ ಜನ ಇದರ ಲಾಭ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಅದೇ ರೀತಿ ಶಕ್ತಿ ಯೋಜನೆ ಮತ್ತು ಯುವನಿಧಿ ಯೋಜನೆ ಜಾರಿ ಮಾಡಲಾಗಿದೆ. ಒಟ್ಟು 35180.20 ಕೋಟಿ ಹಣ ಗೃಹಲಕ್ಷ್ಮೀ ಯೋಜನೆಗಾಗಿ ನೆರವು ನೀಡಲಾಗಿದೆ. 1. ಕೋಟಿ ಜನ ಇದರ ಲಾಭ ಪಡೀತಿದ್ದಾರೆ.ಅದೇ ರೀತಿ ಶಕ್ತಿ ಯೋಜನೆ ಮತ್ತು ಯುವನಿಧಿ ಯೋಜನೆ ಜಾರಿಯಾಗಿದೆ ಎಂದರು.

ಜನರ ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗಿದೆ. ತಲಾ 259 ವಿದ್ಯಾರ್ಥಿಗಳ ಸಾಮರ್ಥ್ಯ ಇರುವ 25 ಮೂರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಪ್ರಾಥಮಿಕ ಮತ್ತು ಉನ್ನತ ಶಿಕ್ಷಣಕ್ಕಾಗಿ ಬಲಪಡಿಸಲು ರಾಜ್ಯದಾದ್ಯಂತ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ. ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ ಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡದ ಕಾರ್ಯವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Republic Day: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಗಣರಾಜ್ಯೋತ್ಸವ ಸಂಭ್ರಮದ ಲೈವ್​

2024-25ರ ಸಾಲಿನಲ್ಲಿ 2491ಕಿಮೀ ರಾಜ್ಯ ಹೆದ್ದಾರಿ ಮತ್ತು 3103 ಕಿಮೀ ಪ್ರಮುಖ ಜಿಲ್ಲೆ ರಸ್ತೆಯ ಸಾಧಾರಣ ಮಾಡಲಾಗಿದೆ. ರಾಜ್ಯದಿಂದ ರಫ್ತು ಪ್ರಮಾಣ ಹೆಚ್ಚಾಗಿದೆ. ಶೇ. 11.17 ರಷ್ಟು ಬೆಳವಣಿಗೆ ಕಂಡಿದೆ. ಕುಡಿಯುವ ನೀರಿದ ಮೂಲಗಳ ಗುಣಮಟ್ಟ ಕಾಪಾಡಿಕೊಳ್ಳಲು ೭೯ ಪ್ರಯೋಗಾಲಯ ನಿರ್ಮಾಣ ಮಾಡಲಾಗಿದೆ. ರಾಜ್ಯದ ಸಮತೋಲಿತ ಮತ್ತು ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಡಾ. ಡಿ.ಎಂ ನಂಜುಂಡಪ್ಪ ವರದಿ ಅನುಷ್ಠಾನ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಕ್ರಮ, ಕಲಬುರಗಿ ಯಲ್ಲಿ ಸಂಪುಟ ಸಭೆ ನಡೆಸಲಾಯಿತು. ಸುಮಾರು 11 ಸಾವಿರ ಕೋಟಿಗೂ ಹೆಚ್ಚಿನ ಯೋಜನೆ ಮತ್ತು ಕಾರ್ಯಕ್ರಮ ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಮೆಟ್ರೋ ಹಂತ-2ಎ ತಮ್ಮ ಸೆಂಟ್ರಲ್ ಸಿಲ್ಕ್ ಬೋರ್ಡ್​ನಿಂದ ಕೃಷ್ಣ ರಾಜಪುರದವರೆಗೆ 19.75 ಕಿಮೀ ಮತ್ತು ಹಂತ 2ಬಿ ರಲ್ಲಿ ಕೆ.ಆರ್ ಪುರಂದಿಂದ ವಿಮಾನ ನಿಲ್ದಾಣದವರೆಗೆ 38.44 ಕಿಮೀ ಮೆಟ್ರೋ, ಅಂದಾಜು 14788 ಕೋಟಿ ವರ್ಷದ ವೆಚ್ಚದ ಕಾಮಗಾರಿ ನಡೆಯುತ್ತಿದೆ. ಡಾ. ಕೆ ಶಿವರಾಮ ಕಾರಂತ ಹಂತ 1 ಬಡಾವಣೆ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಕೆಎಸ್​ಆರ್​ಟಿಸಿ ನೌಕರರಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮಾ ಯೋಜನೆ ಒದಗಿಸಲಾಗಿದೆ. ಬೆಂಗಳೂರಲ್ಲಿ 2519 ರಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸ್ ಮಾರ್ಷಲ್‌ ಆಗಿ ನೇಮಕವಾಗಿದೆ. ಸೈಬರ್ ಹಾವಳಿ ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲ ಶಾಲಾ ಮಕ್ಕಳಿಗೆ ವಾರದ ಆರು ದಿನದಲ್ಲಿ ಮೊಟ್ಟೆ ವಿತರಣೆ ಮಾಡಲಾಗಿದೆ. ಗಾಂಧಿ ಭಾರತ್ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಬೆಳೆ ಸಾಲ ನೀಡಲಾಗುತ್ತಿದೆ ಎಂದರು.

ಮತ್ಸ್ಯ ಆಶಾಕಿರಣ ಯೋಜನೆ ಅಡಿ ಮೀನುಗಾರರಿಗೆ ನೀಡಲಾಗುವ ಪರಿಹಾರ ಮೊತ್ತ 3 ಸಾವಿರಕ್ಕೆ ಏರಿಸಲಾಗಿದೆ. ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ 1124 ಕೋಟಿ ಪ್ರೊತ್ಸಾಹ ಧನ ನೀಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ