7ನೇ ವೇತನ ಆಯೋಗ, OPS ಜಾರಿಗೆ ನೌಕರರ ಆಗ್ರಹ: ಜು. 29ರಿಂದ ಮುಷ್ಕರದ ಎಚ್ಚರಿಕೆ
7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಲಾಗಿದೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸಿದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ ಎಂದು ನೌಕರರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ಜುಲೈ 12: 7ನೇ ವೇತನ ಆಯೋಗ (Seventh Pay Commission) ವರದಿ ಹಾಗೂ ಹಳೆಯ ಪಿಂಚಣಿ ಯೋಜನೆ (OPS) ಜಾರಿಗೆ ಆಗ್ರಹಿಸಿ ವಿಧಾನಸೌಧದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ ಮಾಡಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದು, ಒಂದು ವೇಳೆ ಹಳೆಯ ಪಿಂಚಣಿ ಯೋಜನೆ ಜಾರಿಯಾಗದಿದ್ದರೆ ಜುಲೈ 29ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಬೇಡಿಕೆ ಈಡೇರಿಸಿದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಕೆಲಸ ಮಾಡದೇ ಮನೆಯಲ್ಲಿರುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರ ಸಂಘದಿಂದ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ರಾಜ್ಯ ನೌಕರರಿಗೆ ಗುಡ್ ನ್ಯೂಸ್, 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಮುಂದಾದ ಸರ್ಕಾರ
ಜೂನ್ 20 ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಅಧಿಕಾರವನ್ನು ಸಿದ್ದರಾಮಯ್ಯಗೆ ನೀಡಲಾಗಿತ್ತು. ಈ ಮೂಲಕ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಗೆ ಕಾಲ ಸನ್ನಿಹಿತವಾದಂತಾಗಿತ್ತು.
ಏಳನೇ ವೇತನ ಆಯೋಗ ಮಾರ್ಚ್ 16ರಂದು ಅಂತಿಮ ವರದಿ ಸಲ್ಲಿಸಲಾಗಿತ್ತು. ಸಿಎಂ ಸಿದ್ದರಾಮಯ್ಯಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು.
ಇದನ್ನೂ ಓದಿ: OPS: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಹಳೆ ಪಿಂಚಣಿ ಜಾರಿ ಮಾಡಿ ಗೆಜೆಟ್ ಪ್ರಕಟ
7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘ ಈ ಹಿಂದೆ ಕೂಡ ಕರೆಕೊಟ್ಟಿತ್ತು. ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಬಾರದು. ಸಾರ್ವಜನಿಕರಿಗೆ ತೊಂದರೆಯಾಗಬಾರದು ಸರ್ಕಾರ ಕಸರತ್ತು ನಡೆಸಿತ್ತು. ಸರ್ಕಾರದ ಮುಖ್ಯಕಾರ್ಯದರ್ಶಿ ಸಭೆ ನಡೆಸಿದ್ರೂ ಸಕ್ಸಸ್ ಆಗಿರಲಿಲ್ಲ.
ಸಿಎಂ ಸಿದ್ದರಾಮಯ್ಯ ಈ ವಿಚಾರ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಮಾಡಿದ್ದರು. ಸಚಿವರು ಸೇರಿದಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಮೊದಲಿಗೆ 7ನೇ ಆಯೋಗದ ಮಧ್ಯಂತರ ವರದಿ ಕುರಿತಂತೆ ಚರ್ಚೆ ನಡೆಸಿ, ಇದರ ಅನುಷ್ಠಾನದ ಸಾಧಕ ಬಾಧಕಗಳ ಪರಾಮರ್ಶೆ ಮಾಡಿದ್ದರು. ಇದಾದ ಬಳಿಕ ಸರ್ಕಾರಿ ನೌಕರರ ಸಂಘದ ಮುಖಂಡರ ಜತೆ ಸಭೆ ನಡೆಸಿದ ಸಿಎಂ ಬೇಡಿಕೆ ಈಡೇರಿಸೋದಾಗಿ ಭರವಸೆ ನೀಡಿ ಮುಷ್ಕರ ಕೈಬಿಡುವಂತೆ ಮನವಿ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.