ಜುಲೈ1 ರಿಂದ ಅನ್ವಯವಾಗುವಂತೆ 7ನೇ ವೇತನ ಆಯೋಗ ಜಾರಿ: ವೇತನ, ಪಿಂಚಣಿ ಹೆಚ್ಚಳದ ಸಂಪೂರ್ಣ ಲೆಕ್ಕ ಕೊಟ್ಟ ಸಿಎಂ

ಕರ್ನಾಟಕ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿ ಸುದ್ದಿ ನೀಡಿದ್ದಾರೆ. ಜುಲೈ 1ರಿಂದ ಅನ್ವಯವಾಗುವಂತೆ 7ನೇ ವೇತನ ಆಯೋಗದ ಶಿಫಾರಸು ಆಗಸ್ಟ್ 1ರಂದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ವೇತನ ಮತ್ತಷ್ಟು ಹೆಚ್ಚಳವಾಗಲಿದೆ.

ಜುಲೈ1 ರಿಂದ ಅನ್ವಯವಾಗುವಂತೆ 7ನೇ ವೇತನ ಆಯೋಗ ಜಾರಿ: ವೇತನ, ಪಿಂಚಣಿ ಹೆಚ್ಚಳದ ಸಂಪೂರ್ಣ ಲೆಕ್ಕ ಕೊಟ್ಟ ಸಿಎಂ
7ನೇ ವೇತನ ಆಯೋಗ
Follow us
ವಿವೇಕ ಬಿರಾದಾರ
| Updated By: ರಮೇಶ್ ಬಿ. ಜವಳಗೇರಾ

Updated on:Jul 16, 2024 | 4:10 PM

ಬೆಂಗಳೂರು, ಜುಲೈ 16: ಜುಲೈ 1ರಿಂದ ಅನ್ವಯವಾಗುವಂತೆ 7ನೇ ವೇತನ ಆಯೋಗದ (7th Pay Commission) ಶಿಫಾರಸು ಆಗಸ್ಟ್ 1ರಂದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದ್ದಾರೆ. ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ 58.50 ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ.

ನೌಕರರ ಕನಿಷ್ಟ ಮೂಲವೇತನವು 17 ಸಾವಿರ ರೂ. ರಿಂದ 27 ಸಾವಿರ ರೂ.ಗೆ ಹಾಗೂ ಗರಿಷ್ಟ ವೇತನವು 150,600 ರೂ. ರಿಂದ 2,41,200 ರೂ. ಗಳಿಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8.500 ರೂ. ರಿಂದ 13,500 ರೂ. ಕ್ಕೆ ಮತ್ತು ಗರಿಷ್ಠ ಪಿಂಚಣಿಯು 75300 ರೂ. ರಿಂದ 1,20,600 ರೂ.  ಪರಿಷ್ಕರಣೆಗೊಳ್ಳುತ್ತದೆ. ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ.

ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ರೂ. ಕೋಟಿಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ.

ಇದನ್ನೂ ಓದಿ: 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಬಗ್ಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿಚ್ಚಿಟ್ಟ ಮಾಹಿತಿ

ಈ ಹಿಂದಿನ ಬಿಜೆಪಿ ಸರ್ಕಾರ ನೌಕರರ ವೇತನ ಪರಿಷ್ಕರಣೆಗೆ 2022ರ ನವೆಂಬರ್​ ತಿಂಗಳಲ್ಲಿ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್​ ರಾವ್​ ಅಧ್ಯಕ್ಷತೆಯಲ್ಲಿ ವೇತನ ಆಯೋಗ ರಚನೆ ಮಾಡಿ, ಆರು ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಿತ್ತು. ಆಯೋಗ ಸರ್ಕಾರಿ ನೌಕರರ ವೇತನವನ್ನು ಶೇ 27.5ರಷ್ಟು ಹೆಚ್ಚಳ ಮಾಡುವಂತೆ 244 ಪುಟಗಳ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

ಆಯೋಗದ ಶಿಫಾರಸ್ಸಿನಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ 2023ರ ಏಪ್ರಿಲ್​ 1ರಿಂದ ಅನ್ವಯವಾಗುವಂತೆ ಶೇ17ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದರು. ಬಾಕಿ ಉಳಿದಿರುವ ಶೇ10.5 ರಷ್ಟು ವೇತನವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದಾರೆ. ಇದು ಆಗಸ್ಟ್​ 1ರಿಂದ ಜಾರಿಯಾಗಲಿದೆ. ಈ ಮೂಲಕ ಶೇ 17 ಮತ್ತು ಶೇ 10.5 ರಷ್ಟು ಸೇರಿ ಒಟ್ಟು ಶೇ 27ರಷ್ಟು ವೇತನ ಹೆಚ್ಚಿಸಲಾಗುತ್ತದೆ. ಇದರಿಂದ ಆರಂಭಿಕ ನೌಕರರ ಕನಿಷ್ಠ ವೇತನ 17 ಸಾವಿರದಿಂದ 27 ಸಾವಿರಕ್ಕೆ ಏರಿಕೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Tue, 16 July 24