7ನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.50 ವೇತನ ಹೆಚ್ಚಳಕ್ಕೆ ಶಿಫಾರಸ್ಸು; ಸಿದ್ದರಾಮಯ್ಯ ಹೇಳಿದ್ದೇನು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆರ್ಥಿಕ ಇಲಾಖೆ ಪರಿಶೀಲನೆ ನಂತರ ಜಾರಿ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಸಿದ್ದರಾಮಯ್ಯ ಅವರ ಹೇಳಿದ್ದಾರೆ. ಇನ್ನು, ವರದಿ ಸ್ವೀಕರಿಸಿದ ಕುರಿತು ಹರ್ಷ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ, 27.50% ವೇತನ ಹೆಚ್ಚಳಕ್ಕೆ ಆಯೋಗ ವರದಿ ಕೊಟ್ಟಿದೆ ಎಂದರು.

7ನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.50 ವೇತನ ಹೆಚ್ಚಳಕ್ಕೆ ಶಿಫಾರಸ್ಸು; ಸಿದ್ದರಾಮಯ್ಯ ಹೇಳಿದ್ದೇನು
7ನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.50 ವೇತನ ಹೆಚ್ಚಳಕ್ಕೆ ಶಿಫಾರಸ್ಸು
Follow us
Anil Kalkere
| Updated By: Rakesh Nayak Manchi

Updated on:Mar 16, 2024 | 12:41 PM

ಬೆಂಗಳೂರು, ಮಾ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ 7ನೇ ವೇತನ ಆಯೋಗದ ವರದಿಯನ್ನು (7th Pay Commission report) ಸಲ್ಲಿಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷತೆ ಸುಧಾಕರ ರಾವ್ ನೇತೃತ್ವದಲ್ಲಿ ವರದಿ ಸಲ್ಲಿಕೆ ಮಾಡಲಾಗಿದ್ದು, ಈ ವೇಳೆ ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ ಸ್ವೀಕರಿಸಿದ ನಂತರ ಮಾತನಾಡಿದ ಸಿದ್ದರಾಮಯ್ಯ, 7ನೇ‌ ವೇತನ‌ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ವರದಿ ಸಲ್ಲಿಸಿದ್ದಾರೆ. ವರದಿ ನೀಡಲು‌ ಸರ್ಕಾರ ಸಮಿತಿ‌ ರಚಿಸಿತ್ತು. ಶೇ.17 % ಅವರ ಬೇಸಿಕ್ ಪೇ ಮೇಲೆ ಹೆಚ್ಚಳ ಮಾಡಿ‌ ಆದೇಶ ಹೊರಡಿಸಿತ್ತು. ವರದಿ ನೀಡಲು ಸರ್ಕಾರ ಮೂರು‌ ತಿಂಗಳ ಅವಧಿ ಹೆಚ್ಚಳ ಮಾಡಿತ್ತು ಎಂದರು.

ನಿನ್ನೆ ಮೈಸೂರು ‌ಪ್ರವಾಸದಲ್ಲಿದ್ದ ಕಾರಣ ವರದಿ ಸ್ವೀಕಾರ ಮಾಡಲು ಆಗಿರಲಿಲ್ಲ. ಇಂದು‌ ಅಂತಿಮವಾದ ವರದಿ ಕೊಟ್ಟಿದ್ದಾರೆ. ಬೇಸಿಕ್ ಪೇ ಮೇಲೆ ಶೇ.27.5 ರಷ್ಟು ಹೆಚ್ಚಳ ಕೊಡಬೇಕೆಂದು ವರದಿ ಕೊಟ್ಟಿದ್ದಾರೆ. ಶಿಫಾರಸ್ಸಿನ ಪ್ರಕಾರ, ಕನಿಷ್ಠ ಮೂಲವೇತನವನ್ನು 17 ಸಾವಿರದಿಂದ 27 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಶಿಫಾರಸ್ಸು ಮಾಡಲಾಗಿದೆ. ಹೀಗೆ ಬೇರೆ ಶಿಫಾರಸ್ಸು ಇದೆ, ನಾನು ಅದನ್ನೆಲ್ಲ ಹೇಳಲು ಹೋಗುವುದಿಲ್ಲ. ವರದಿಯನ್ನು ಆರ್ಥಿಕ ಇಲಾಖೆ ಪರಿಶೀಲನೆ ಮಾಡಬೇಕು. ಶಿಫಾರಸ್ಸು ಪರಿಶೀಲನೆ ಮಾಡಿ ನಂತರ ಸರ್ಕಾರ ಸಲಹೆಗಳನ್ನು ಪಡೆದು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಇದನ್ನೂ ಓದಿ: ಬ್ಯಾಡಗಿ ಮೆಣಸಿನಕಾಯಿ ದರ ಹಠಾತ್ ಕುಸಿತಕ್ಕೆ ಕಾರಣವೇನು? ವರದಿ ಸಲ್ಲಿಸವಂತೆ ಸಿದ್ದರಾಮಯ್ಯ ಸೂಚನೆ

ವರದಿ ಸ್ವೀಕರಿಸಿದ ಬಗ್ಗೆ ಹರ್ಷ ವ್ಯಕ್ತಪಡಿಸಿದ ಸಂಘದ ಅಧ್ಯಕ್ಷ ಷಡಕ್ಷರಿ, ಸರ್ಕಾರ ವರದಿ ಸ್ವೀಕಾರ ಮಾಡಿರುವುದಕ್ಕೆ ಖುಷಿ ಇದೆ. ಈ ಹಿಂದೆ ಸಿದ್ದರಾಮಯ್ಯ ನವರು 30% ಕೊಟ್ಟಿದ್ದರು. ಈಗ ಸರ್ಕಾರಕ್ಕೆ 27.50% ವೇತನ ಹೆಚ್ಚಳಕ್ಕೆ ಆಯೋಗ ವರದಿ ಕೊಟ್ಟಿದೆ. ಮತ್ತಷ್ಟು ಹೆಚ್ಚಳ ಮಾಡಲು ಮನವಿ ಮಾಡುತ್ತೇವೆ. ಸರ್ಕಾರ ಕೂಡಲೇ ವರದಿಯನ್ನ ಜಾರಿಗೊಳಿಸಬೇಕು. ಇದರಿಂದ 12 ಲಕ್ಷ ಸರ್ಕಾರಿ ನೌಕಕರಿಗೆ ಸಹಕಾರ ಆಗಲಿದೆ. ನಿವೃತ್ತ ನೌಕಕರ ಕುಟುಂಬಗಳಿಗೂ ಸಹಾಯ ಆಗಲಿದೆ ಎಂದರು.

ತಡವಾಗಲಿದೆ 7ನೇ ವೇತನ ಆಯೋಗದ ವರದಿ ಜಾರಿ

ಭಾರತದ ಚುನಾವಣಾ ಆಯೋಗವು ಇಂದು 3 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದು, ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ಬಳಿಕ ನೀತಿ ಸಂಹಿತೆ ಜಾರಿಯಾಗಲಿರುವುದರಿಂದ ಸರ್ಕಾರಗಳು ಯಾವುದೇ ಯೋಜನೆಗಳನ್ನು ಘೋಷಣೆ ಅಥವಾ ಜಾರಿ ಮಾಡುವಂತಿಲ್ಲ. ಅಲ್ಲದೆ, ಕಾಮಗಾರಿಗಳಿಗೆ ಚಾಲನೆ ಅಥವಾ ಉದ್ಘಾಟಿಸುವಂತಿಲ್ಲ. ಹೀಗಾಗಿ 7ನೇ ಆಯೋಗದ ವರದಿ ಜಾರಿ ತಡವಾಗಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Sat, 16 March 24

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು