ದಾವಣಗೆರೆ ಕಾಶೀಪುರ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಜಿಲೆಟಿನ್ ಕಡ್ಡಿ, ಎಲೆಕ್ಟ್ರಾನಿಕ್ ಡಿಟೋನೇಟರ್ ವಶ

ಕಾಶೀಪುರ ಗ್ರಾಮದ ಜಮೀನಿನೊಂದರಲ್ಲಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಗೆ ಪರವಾನಗಿ ಇಲ್ಲದೆ ಸ್ಫೋಟಕ ಸಂಗ್ರಹ ಮಾಡಿಕೊಳ್ಳಲಾಗಿತ್ತು. ಹೀಗೆ ಅಕ್ರಮವಾಗಿ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟ ಸ್ಟೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ ಕಾಶೀಪುರ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಜಿಲೆಟಿನ್ ಕಡ್ಡಿ, ಎಲೆಕ್ಟ್ರಾನಿಕ್ ಡಿಟೋನೇಟರ್ ವಶ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 05, 2022 | 1:01 PM

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಶೀಪುರ ಗ್ರಾಮದ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸ್ಫೋಟಕವನ್ನು ಸಂತೆಬೆನ್ನೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಂತೆಬೆನ್ನೂರು ಪೊಲೀಸರು ಅಕ್ರಮ ಸ್ಫೋಟಕ ದಾಸ್ತಾನು ಮೇಲೆ ದಾಳಿ ಮಾಡಿದ್ದಾರೆ. 8 ಜಿಲೆಟಿನ್ ಕಡ್ಡಿ, ಎಲೆಕ್ಟ್ರಾನಿಕ್ ಡಿಟೋನೇಟರ್ ಸೇರಿದಂತೆ ಹಲವು ಸ್ಟೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಪರ್ವೇಜ್ ಎಂಬಾತನನ್ನು ಬಂಧಿಸಿದ್ದು ಮತ್ತೊಬ್ಬ ಆರೋಪಿ ಗಿರೀಶ್ ಪರಾರಿಯಾಗಿದ್ದಾನೆ.

ಕಾಶೀಪುರ ಗ್ರಾಮದ ಜಮೀನಿನೊಂದರಲ್ಲಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಗೆ ಪರವಾನಗಿ ಇಲ್ಲದೆ ಸ್ಫೋಟಕ ಸಂಗ್ರಹ ಮಾಡಿಕೊಳ್ಳಲಾಗಿತ್ತು. ಹೀಗೆ ಅಕ್ರಮವಾಗಿ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟ ಸ್ಟೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮೊದಲು ಕೂಡ ಇಂಥ ಘಟನೆ ನಡೆದಿತ್ತು ಪೊಲೀಸರು ಕಲ್ಲು ಕ್ವಾರಿ ಮೇಲೆ ದಾಳಿ ನಡೆಸಿ ಸ್ಫೋಟಕ ವಸ್ತುಗಳನ್ನು ಜಪ್ತಿ ಮಾಡಿ ವಶಕ್ಕೆ ಪಡೆದಿರುವ ಘಟನೆ ದಾವಣಗೆರೆ ತಾಲೂಕಿನ ಈಚಘಟ್ಟ ಗ್ರಾಮದ ಬಳಿ ನಡೆದಿತ್ತು. ಓರ್ವ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು 30 ಜಿಲೆಟಿನ್ ಕಡ್ಡಿ, ಎರಡು ಎಲೆಕ್ಟ್ರಾನಿಕ್ ಡಿಟೋನೇಟರ್​ ಹಾಗೂ ಗನ್​ ಪೌಡರ್​ಗಳನ್ನು ವಶಪಡಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ದಾವಣಗೆರೆ ನಗರದ ಕಾಡಜ್ಜಿಯ ಬಳಿ ವಶಕ್ಕೆ ಪಡೆಯಲಾಗಿತ್ತು. DySP ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದು ಸ್ಫೋಟಕ ಸಾಗಿಸುತ್ತಿದ್ದ ವಿಕ್ರಮ್, ನಾಗರಾಜ್, ಮಂಜುನಾಥ್, ವಿಜಯ್‌ಕುಮಾರ್‌ನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದರು.

ಬಂಧಿತರಿಂದ ಚೀಲಗಳಲ್ಲಿ ಸಂಗ್ರಹಿಸಿದ್ದ 10,000 ಜಿಲೆಟಿನ್ ಕಡ್ಡಿ, 7,400 ಎಲೆಕ್ಟ್ರಿಕ್ ಡಿಟೋನೇಟರ್, 50 ಕೆಜಿ ಅಮೋನಿಯಂ ನೈಟ್ರೇಟ್ ಪೌಡರ್ ಸೇರಿ ಸುಮಾರು ಒಟ್ಟು 3 ಲಕ್ಷ 62 ಸಾವಿರ ಮೌಲ್ಯದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿತ್ತು. ಹಾಗೂ ಮ್ಯಾಗಜಿನ್ ಮಾಲೀಕ ಮುಜಿಬ್ ಷಣ್ಮುಖಪ್ಪರ ಮೇಲೆ ಪ್ರಕರಣ ದಾಖಲಾಗಿದೆ. ದಾವಣಗೆರೆ ಡಿವೈಎಸ್ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿತ್ತು.

ಇದನ್ನೂ ಓದಿ: ದಾವಣಗೆರೆಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ಜಪ್ತಿ, ನಾಲ್ವರ ಬಂಧನ

ಇದನ್ನೂ ಓದಿ: ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ಸಿಡಿ ಯುವತಿಗೆ ನೋಟಿಸ್

Published On - 8:53 pm, Wed, 31 March 21