ಶ್ರೀರಂಗಪಟ್ಟಣ: ಹೆದ್ದಾರಿಯಲ್ಲಿ ಭೀಕರ ಅಪಘಾತ, ಮೃತರ ಸಂಖ್ಯೆ 8ಕ್ಕೆ ಏರಿಕೆ

|

Updated on: Nov 22, 2019 | 12:02 PM

ಮಂಡ್ಯ: ನಿನ್ನೆ ರಾತ್ರಿ ಟಾಟಾ ಸುಮೋ ಮತ್ತು ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿದೆ. ರಾಮದೇವನಹಳ್ಳಿ ಶ್ರೀರಂಗಪಟ್ಟಣ- ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ನಿನ್ನೆ ಆರು ಮಂದಿ ಸಾವನ್ನಪ್ಪಿದ್ದರು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮತ್ತಿಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಕರಣ ಬೆಳ್ಳೂರು ಠಾಣೆಯಲ್ಲಿ ದಾಖಲಾಗಿದೆ. ಮೃತಪಟ್ಟ ದುರ್ದೈವಿಗಳು: ಬಾಕರ್ […]

ಶ್ರೀರಂಗಪಟ್ಟಣ: ಹೆದ್ದಾರಿಯಲ್ಲಿ ಭೀಕರ ಅಪಘಾತ, ಮೃತರ ಸಂಖ್ಯೆ 8ಕ್ಕೆ ಏರಿಕೆ
Follow us on

ಮಂಡ್ಯ: ನಿನ್ನೆ ರಾತ್ರಿ ಟಾಟಾ ಸುಮೋ ಮತ್ತು ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿದೆ. ರಾಮದೇವನಹಳ್ಳಿ ಶ್ರೀರಂಗಪಟ್ಟಣ- ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ನಿನ್ನೆ ಆರು ಮಂದಿ ಸಾವನ್ನಪ್ಪಿದ್ದರು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ರು.

ಇಂದು ಚಿಕಿತ್ಸೆ ಫಲಕಾರಿಯಾಗದೇ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮತ್ತಿಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಕರಣ ಬೆಳ್ಳೂರು ಠಾಣೆಯಲ್ಲಿ ದಾಖಲಾಗಿದೆ.

ಮೃತಪಟ್ಟ ದುರ್ದೈವಿಗಳು:
ಬಾಕರ್ ಷರೀಫ್ ಬಿನ್ ಇಸ್ಮಾಯಿಲ್ ಷರೀಫ್ (50), ತಾಹೀರ್ ಬಿನ್ ಸುಲ್ತಾನ್ ಷರೀಫ್(30), ನೌಷದ್ ಬಿನ್ ಮಕ್ಬೂಲ್ ಪಾಷ(45), ಹಸೀನ್ ತಾಜ್ ಕೋಂ ಖಲೀಂ(50), ಮೆಹಬೂಬ್ ಜಾನ್ ಬಿನ್ ದಸ್ತರ್ ಖಾನ್(50), ಮಕ್ಸೂದ್ ಬಿನ್ ಮಹಮ್ಮದ್ (25), ಸಾಯದಾ(35) ಮತ್ತು‌ ಅಕ್ಬರ್ ಆಲಿ(40).



Published On - 9:21 am, Fri, 22 November 19