ಹೆಚ್ಚುತ್ತಲೇ ಇದೆ ಸೋಂಕಿತರ ಸಂಖ್ಯೆ, ಇಂದು 8 ಹೊಸಾ ಪ್ರಕರಣ, ಒಂದು ಸಾವು
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 8 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ. ಹಾಗೂ ದಾವಣಗೆರೆಯಲ್ಲಿ 55 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆ 3, ಕಲಬುರಗಿ 3, ಬೆಳಗಾವಿ 1, ಬೆಂಗಳೂರು 1 ಸೇರಿದಂತೆ ಇಂದು ರಾಜ್ಯದಲ್ಲಿ 8 ಹೊಸ ಪ್ರಕರಣಗಳು ದಾಖಲಾಗಿವೆ. 701 ಕೊರೊನಾ ಸೋಂಕಿತರ ಪೈಕಿ 363 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೊರೊನಾಗೆ […]
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 8 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕರ್ನಾಟಕದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ. ಹಾಗೂ ದಾವಣಗೆರೆಯಲ್ಲಿ 55 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದಾವಣಗೆರೆ 3, ಕಲಬುರಗಿ 3, ಬೆಳಗಾವಿ 1, ಬೆಂಗಳೂರು 1 ಸೇರಿದಂತೆ ಇಂದು ರಾಜ್ಯದಲ್ಲಿ 8 ಹೊಸ ಪ್ರಕರಣಗಳು ದಾಖಲಾಗಿವೆ. 701 ಕೊರೊನಾ ಸೋಂಕಿತರ ಪೈಕಿ 363 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ದಾವಣಗೆರೆಯಲ್ಲಿ ಕೊರೊನಾಗೆ ಮೃತಪಟ್ಟ P-694 55 ವರ್ಷದವರಾಗಿದ್ದು, ಬಿಪಿ ಶುಗರ್ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ರು. ಕೊರೊನಾ ಅಟ್ಯಾಕ್ ಆಗಿ ರೋಗ ಉಲ್ಬಣಗೊಂಡು ಮೃತಪಟ್ಟಿದ್ದಾರೆ.
Published On - 12:44 pm, Thu, 7 May 20