Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 8 ಯೋಜನೆಗಳು ಜಾರಿ: ಯಾವುವು? ಜಮೀರ್ ಅಹ್ಮದ್ ಹೇಳಿದ್ದಿಷ್ಟು

ಗ್ಯಾರಂಟಿಗಳಿಗೆ ಅನುದಾನ ಕ್ರೂಢೀಕರಣಕ್ಕೆ ರಾಜ್ಯ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದರ ಮಧ್ಯೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 8 ಯೋಜನೆಗಳು ಜಾರಿ ತರಲು ಚಿಂತನೆಗಳು ನಡೆದಿವೆ, ಈ ಬಗ್ಗೆ ಸ್ವತಃ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮಾಹಿತಿ ನೀಡಿದ್ದಾರೆ. ಹಾಗಾದ್ರೆ, ಯಾವವು ಆ 8 ಯೋಜನೆಗಳು? ಈ ಬಗ್ಗೆ ಸಚಿವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 8 ಯೋಜನೆಗಳು ಜಾರಿ: ಯಾವುವು? ಜಮೀರ್ ಅಹ್ಮದ್ ಹೇಳಿದ್ದಿಷ್ಟು
ಜಮೀರ್ ಅಹಮದ್ ಖಾನ್
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Aug 22, 2023 | 2:54 PM

ಬೆಂಗಳೂರು, (ಆಗಸ್ಟ್ 22): ವಿಧಾನಸಭೆ ಚುನಾವಣೆ (Karnataka Assembly Elections 2023) ಸಂದರ್ಭದಲ್ಲಿ ಕಾಂಗ್ರೆಸ್(Congress)​ ನೀಡಿದ್ದ ಐದು ಪ್ರಮುಖ ಗ್ಯಾರಂಟಿ ಭರವಸೆಗಳನ್ನು ಒಂದೊಂದಾಗಿಯೇ ಜಾರಿ ಮಾಡುತ್ತಿದೆ. ಗೃಹ ಜ್ಯೋತಿ, ಗೃಹಲಕ್ಷ್ಮೀ, ಶಕ್ತಿ ಯೋಜನೆಗಳಿಗೆ ಅನುದಾನ ಕ್ರೂಢೀಕರಣಕ್ಕೆ ಇನ್ನಿಲ್ಲದ ಕಸರತ್ತು ನಡೆಸಿದೆ. ಇದರ ಮಧ್ಯೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 8 ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ಈ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್  (Zameer Ahmed Khan)ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಂದು (ಆಗಸ್ಟ್ 22) ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ(Karnataka Minorities Development Corporation)  8 ಯೋಜನೆಗಳು ಜಾರಿ ಮಾಡುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರ ತಡೆಹಿಡಿದಿದ್ದ ಯೋಜನೆಗಳಿಗೆ ಮರು ಚಾಲನೆ ನೀಡಲಾಗುತ್ತದೆ. ಬಡವರಿಗೆ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಅವಕಾಶ ಇರಲಿಲ್ಲ. ಹೀಗಾಗಿ ವಿದೇಶಿ ವಿದ್ಯಾಭ್ಯಾಸಕ್ಕೆ ಸಾಲ ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ ಜಾರಿ ಮಾಡುತ್ತಿದ್ದೇವೆ. ಹಾಗೇ ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಯೋಜನೆ, ಗಂಗಾ ಕಲ್ಯಾಣ ಸೇರಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಒಟ್ಟು ಎಂಟು ನೂತನ ಯೋಜನೆ ಪ್ರಾರಂಭ ಮಾಡುತ್ತೇವೆ. ಬಿಜೆಪಿಯವರು ಯಾಕೆ ಕೆಲವು ಯೋಜನೆ ತಡೆಹಿಡಿದಿದ್ದರು ಎನ್ನುವುದು ಗೊತ್ತಿಲ್ಲ. ಎಲ್ಲ ಕಡೆ ತನಿಖೆ ಮಾಡುವ ಅವಶ್ಯಕತೆ ಇದೆ ಎಂದರು.

ಇದನ್ನೂ ಓದಿ: ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಸಚಿವ, ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್

ಇನ್ನು ಕುಮಾರಸ್ವಾಮಿ ಸರ್ಕಾರದ ವಿರುದ್ಧ ಸರಣಿ ಆರೋಪಗಳಿಗೆ ಪ್ರತಿಕ್ರಿಯಿಸಿ, ಮಾಜಿ ಸಿಎಂ ಕುಮಾರ ಸ್ವಾಮಿ ಕಿಂಗ್ ಮೇಕರ್ ಆಗುತ್ತೇನೆ ಎಂದು ಏನೆನೋ ಕನಸುಗಳನ್ನು ಇಟ್ಟುಕೊಂಡಿದ್ದರು. ಆದರೆ, ಅದ್ಯಾವುದೂ ನಡೆಯಲಿಲ್ಲ ಎಂದು ವ್ಯಂಗ್ಯವಾಡಿದರು.

ಚಲುವರಾಯಸ್ವಾಮಿ ಮತ್ತು ಜಮೀರ್ ಅಹ್ಮದ್ ಖಾನ್ ಮಧ್ಯೆ ಎನೂ ಮಾತುಕತೆಯಿಲ್ಲ ಎನ್ನುವ ಸುದ್ದಿ ಬಗ್ಗೆ ಮಾತನಾಡಿ, ಇದೆಲ್ಲಾ ಸುಳ್ಳು ನಾವು ಜೊತೆಗೆ ಇದ್ದೇವೆ, ನಿನ್ನೆ ಚಲುವರಾಯಸ್ವಾಮಿ ಸಿಕ್ಕಿದ್ದರು ಒಟ್ಟಿಗೆ ಊಟ ಮಾಡಿದ್ದೇವೆ, ಅಷ್ಟೇ ಏಕೆ ಭೈರತಿ ಸುರೇಶ್ ಮನೆಯಲ್ಲಿ ಒಟ್ಟಿಗೆ ಊಟಕ್ಕೆ ಸೇರಿದ್ದೇವು ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ