ಬಳ್ಳಾರಿಯ ವಿಮ್ಸ್​ನಲ್ಲಿ ಕೊರೊನಾ ಬ್ಲಾಸ್ಟ್​: ಒಂದೇ ದಿನ 8 ವೈದ್ಯಕೀಯ ವಿದ್ಯಾರ್ಥಿಗಳಿಗೆ ವಕ್ಕರಿಸಿದ ವೈರಸ್​

ಜಿಲ್ಲೆಯ ವಿಮ್ಸ್​ ಆಸ್ಪತ್ರೆಯಲ್ಲಿ 8 ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ. ವೈದ್ಯಕೀಯ ಕಾಲೇಜು ಸಹ ಆಗಿರುವ ವಿಮ್ಸ್​ನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಅಂದ ಹಾಗೆ, ಈ ಹಿಂದೆ, ವಸತಿ ನಿಲಯದಲ್ಲಿ 88 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. 88 ವಿದ್ಯಾರ್ಥಿಗಳ ಪೈಕಿ 8 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.

ಬಳ್ಳಾರಿಯ ವಿಮ್ಸ್​ನಲ್ಲಿ ಕೊರೊನಾ ಬ್ಲಾಸ್ಟ್​: ಒಂದೇ ದಿನ 8 ವೈದ್ಯಕೀಯ ವಿದ್ಯಾರ್ಥಿಗಳಿಗೆ ವಕ್ಕರಿಸಿದ ವೈರಸ್​
ವಿಮ್ಸ್​ ಆಸ್ಪತ್ರೆ
Follow us
KUSHAL V
|

Updated on:Mar 23, 2021 | 11:16 PM

ಬಳ್ಳಾರಿ: ಜಿಲ್ಲೆಯ ವಿಮ್ಸ್​ ಆಸ್ಪತ್ರೆಯಲ್ಲಿ 8 ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ. ವೈದ್ಯಕೀಯ ಕಾಲೇಜು ಸಹ ಆಗಿರುವ ವಿಮ್ಸ್​ನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಅಂದ ಹಾಗೆ, ಈ ಹಿಂದೆ, ವಸತಿ ನಿಲಯದಲ್ಲಿ 88 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. 88 ವಿದ್ಯಾರ್ಥಿಗಳ ಪೈಕಿ 8 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ವಿಮ್ಸ್​ ಆಸ್ಪತ್ರೆಯಲ್ಲಿ ಈವರೆಗೆ 21 ವಿದ್ಯಾರ್ಥಿಗಳಿಗೆ ವೈರಸ್ ವಕ್ಕರಿಸಿದೆ ಎಂದು ವಿಮ್ಸ್ ನಿರ್ದೇಶಕ ಡಾ.ಗಂಗಾಧರ್ ಗೌಡ ಮಾಹಿತಿ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಒಂದೇ ಕುಟುಂಬದ ಐವರಿಗೆ ಕೊರೊನಾ ಬಾಗಲಕೋಟೆಯಲ್ಲಿ ಒಂದೇ ಕುಟುಂಬದ ಐವರಿಗೆ ಕೊರೊನಾ ದೃಢವಾಗಿದೆ. ವಾರದ ಹಿಂದೆ ಕುಟುಂಬದ ಓರ್ವ ಸಾಂಗ್ಲಿಗೆ ಹೋಗಿ ಬಂದಿದ್ದರು. ಹಾಗಾಗಿ ಕುಟುಂಬಸ್ಥರಿಗೆಲ್ಲಾ ಕೊರೊನಾ ಟೆಸ್ಟ್​ ಮಾಡಲಾಗಿತ್ತು. ಇದೀಗ, ಟೆಸ್ಟ್​ ವರದಿಯಲ್ಲಿ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ, ಸೋಂಕಿತನ ಸಂಪರ್ಕದಲ್ಲಿರುವವರಿಗೆ ಜಿಲ್ಲಾಡಳಿತ ಹುಡುಕಾಟ ನಡೆಸುತ್ತಿದೆ. ಸೋಂಕಿತನ ಮನೆ ಅಕ್ಕಪಕ್ಕದ ಪ್ರದೇಶದಲ್ಲಿ ಱಂಡಮ್ ಟೆಸ್ಟ್ ಸಹ ಮಾಡಲಾಗುತ್ತಿದೆ ಎಂದು ಟಿವಿ9ಗೆ ಬಾಗಲಕೋಟೆ DHO ಅನಂತ ದೇಸಾಯಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಇಂದು ಹೊಸದಾಗಿ 2,010 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಇದೀಗ, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,73,657ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಐವರು ಸಾವನ್ನಪ್ಪಿದ್ದಾರೆ. ಇದುವರೆಗೆ ಕೊರೊನಾಗೆ 12,449 ಜನರು ಬಲಿಯಾಗಿದ್ದಾರೆ. ಸೋಂಕಿತರ ಪೈಕಿ 9,45,594 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 15,595 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 1,280 ಜನರಿಗೆ ಸೋಂಕು ದೃಢವಾಗಿದೆ. ನಗರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,19,838ಕ್ಕೇರಿದೆ. ಇಂದು ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾಗೆ ಇದುವರೆಗೆ 4,556 ಜನರು ಅಸುನೀಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.

ರಾಯಚೂರು ಜಿಲ್ಲೆಯಲ್ಲಿಂದು 13 ಜನರಿಗೆ ಕೊರೊನಾ ದೃಢವಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 14,378ಕ್ಕೇರಿದೆ. ಜಿಲ್ಲೆಯಲ್ಲಿ ಇದುವರೆಗೆ 14,168 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೊರೊನಾದಿಂದ 158 ಜನರ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತದಿಂದ ಹೆಲ್ತ್​ ಬುಲೆಟಿನ್ ಬಿಡುಗಡೆ ಆಗಿದೆ.

ಇತ್ತ, ಮೈಸೂರು ಜಿಲ್ಲೆಯಲ್ಲಿಂದು ಬರೋಬ್ಬರಿಗೆ 100 ಕೇಸ್ ಪತ್ತೆಯಾಗಿದೆ. ಸೋಂಕಿತರ ಸಂಪರ್ಕದಿಂದ 78 ಜನರಿಗೆ ಕೊರೊನಾ ದೃಢವಾಗಿದೆ. ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ 17 ಜನರಿಗೆ ಕೊವಿಡ್​ ದೃಢಪಟ್ಟಿದೆ. ಉಸಿರಾಟದ ಸಮಸ್ಯೆಯಿದ್ದ ಐವರಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಸದ್ಯ, ಜಿಲ್ಲೆಯಲ್ಲಿ ಸಕ್ರಿಯ ಕೇಸ್​ ಸಂಖ್ಯೆ 450ಕ್ಕೂ ಹೆಚ್ಚಾಗಿದೆ.

ಇದನ್ನೂ ಓದಿ:ಕಳ್ಳತನ ಮಾಡಿದ್ದಾನೆಂದು ಬಾಲಕನನ್ನ ಹತ್ಯೆಗೈದ ಆರೋಪ: ಅಂಗಡಿ ಮುಂದೆ ಶವವಿಟ್ಟು ಕುಟುಂಬಸ್ಥರ ಧರಣಿ

Published On - 7:27 pm, Tue, 23 March 21

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!