
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾದ ರುದ್ರ ನರ್ತನ ಮುಂದುವರಿದಿದ್ದು, ರಾಜ್ಯದಲ್ಲಿಂದು ಹೊಸದಾಗಿ 8,324 ಜನರಿಗೆ ಸೋಂಕು ತಗಲಿರೋದು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,27,076 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕೂಡಾ ಇಂದು ಒಂದೇ ದಿನ 2,993 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.
ಜೊತೆಗೆ, ಸೋಂಕಿನಿಂದ ರಾಜ್ಯದಲ್ಲಿ ಇವತ್ತು 115 ಜನರು ಸಾವನ್ನಪ್ಪಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ 25 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಈಗ 5,483 ಕ್ಕೆ ಏರಿದೆ.
ಈ ನಡುವೆ 2,35,128 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 86,446ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Published On - 7:09 pm, Sat, 29 August 20