ಅಯೋಧ್ಯೆಗೆ ಉಡುಪಿಯ ರಥ: ಶ್ರೀರಾಮನ ಹೊತ್ತು ಮೆರೆಯುವ ರಥ ಉಡುಪಿಯಲ್ಲೇ ನಿರ್ಮಾಣ! ವಿವರ ಇಲ್ಲಿದೆ

ರಥ ನಿರ್ಮಾಣಕ್ಕೆ ಸುಮಾರು 2 ವರ್ಷ ಸಮಯ ತಗಲುತ್ತದೆ. ರಥ ನಿರ್ಮಾಣ ಆರಂಭಿಸುವುದಕ್ಕೂ ಮುನ್ನ ಶಿಲ್ಪಿಗಳು ಪೇಜಾವರ ಶ್ರೀಗಳನ್ನು ಭೇಟಿಯಾಗಿದ್ದು, ಶ್ರೀಗಳಿಂದ ಆಶೀರ್ವಾದ ಪಡೆದು ಯೋಜನೆ ಕೈಗೆತ್ತಿಕೊಳ್ಳುವುದಾಗಿ ರಥ ಶಿಲ್ಪಿ ಲಕ್ಷ್ಮೀ ನಾರಾಯಣ ಆಚಾರ್ಯ ತಿಳಿಸಿದ್ದಾರೆ.

ಅಯೋಧ್ಯೆಗೆ ಉಡುಪಿಯ ರಥ: ಶ್ರೀರಾಮನ ಹೊತ್ತು ಮೆರೆಯುವ ರಥ ಉಡುಪಿಯಲ್ಲೇ ನಿರ್ಮಾಣ! ವಿವರ ಇಲ್ಲಿದೆ
ರಥ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯರು ನಿರ್ಮಿಸಿರುವ ರಥದ ಚಿತ್ರಣ
Follow us
preethi shettigar
|

Updated on:Feb 12, 2021 | 11:29 AM

ಉಡುಪಿ: ಅಯೋಧ್ಯೆಯಲ್ಲಿ ರಾಮದೇವರನ್ನು ಹೊತ್ತು ಮೆರೆಯುವ ರಥ ಉಡುಪಿಯಲ್ಲಿ ನಿರ್ಮಾಣವಾಗುವುದು ಬಹುತೇಕ ಖಚಿತವಾಗಿದ್ದು, ಹಂಪಿ ಸಮೀಪದ ಕಿಷ್ಕಿಂದೆಯ ಅಂಜನಾದ್ರಿ ಸ್ವಾಮೀಜಿಗಳ ಇಚ್ಛೆಯಂತೆ ಕುಂದಾಪುರದ ಪ್ರಖ್ಯಾತ ರಥ ಶಿಲ್ಪಿಗಳು ರಾಮರಥ ಸಿದ್ಧತೆಗೆ ತಯಾರಿ ನಡೆಸಿದ್ದಾರೆ. ದೇವಾಲಯಗಳ ನಗರಿ ಉಡುಪಿಗೂ ರಾಮದೇವರ ತವರು ಅಯೋಧ್ಯೆಗೂ ಅವಿನಾಭಾವ ಸಂಬಂಧವಿದ್ದು, ಇದೀಗ ಅಯೋಧ್ಯೆಯೊಂದಿಗಿನ ಉಡುಪಿಯ ಸಂಬಂಧವನ್ನು ಮರುಸ್ಥಾಪಿಸುವ ಅವಕಾಶವೊಂದು ಒದಗಿಬಂದಿದೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಚುರುಕುಗೊಂಡಿದ್ದು, ರಾಮದೇವರ ರಥೋತ್ಸವಕ್ಕೆ ಉಡುಪಿಯಲ್ಲೇ ರಥ ನಿರ್ಮಾಣವಾಗಲಿದೆ.

ಈ ವಿಚಾರವನ್ನು ಕುಂದಾಪುರದ ಪ್ರಖ್ಯಾತ ರಥ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ ಖಚಿತಪಡಿಸಿದ್ದಾರೆ. ರಾಮಮಂದಿರ ನಿರ್ಮಾಣ ಟ್ರಸ್ಟ್​ಗೂ ಈ ರಥ ನಿರ್ಮಾಣಕ್ಕೂ ನೇರ ಸಂಬಂಧ ಇಲ್ಲವಾದರೂ, ಕರ್ನಾಟಕ ರಾಜ್ಯದ ಕೊಡುಗೆಯಾಗಿ ಈ ರಥವನ್ನು ಅಯೋಧ್ಯೆಗೆ ಸಮರ್ಪಿಸಲು ಅಂಜನಾದ್ರಿಯ ಸ್ವಾಮೀಜಿ ತೀರ್ಮಾನಿಸಿದ್ದಾರೆ. ಕುಂದಾಪುರದ ರಥ ಶಿಲ್ಪಿಗಳನ್ನು ಸಂಪರ್ಕಿಸಿ ಬೃಹದಾಕಾರದ ರಥ ನಿರ್ಮಿಸಿಕೊಡುವಂತೆ ಕೋರಿದ್ದಾರೆ.

udupi ratha

ಅಂಜನಾದ್ರಿಯ ಸ್ವಾಮೀಜಿ

ಹನುಮನ ನಾಡಾದ ಕಿಷ್ಕಿಂದೆಯಿಂದ ಅಯೋಧ್ಯೆಗೆ ರಥವನ್ನು ಕೊಡುಗೆಯಾಗಿ ನೀಡಬೇಕು ಎನ್ನುವುದು ಯೋಜನೆಯ ಹಿಂದಿನ ಆಶಯ. ಬೃಹದಾಕಾರದ ಈ ರಥದ ರೂಪುರೇಷೆಯನ್ನು ಈಗಾಗಲೇ ರಥ ಶಿಲ್ಪಿಗಳು ಸಿದ್ಧಪಡಿಸಿಕೊಂಡಿದ್ದಾರೆ. ಲಕ್ಷ್ಮೀನಾರಾಯಣ ಆಚಾರ್ಯರು ದಕ್ಷಿಣ ಭಾರತೀಯ ಅದರಲ್ಲೂ ಮುಖ್ಯವಾಗಿ ಉಡುಪಿ ಶೈಲಿಯ ರಥವನ್ನು ತಯಾರಿಸುವುದರಲ್ಲಿ ಸಿದ್ಧಹಸ್ತರು. ಈ ಬಗೆಯ ರಥ ಅಯೋಧ್ಯೆಯ ಪೂಜಾ ಪದ್ಧತಿ ಸೂಕ್ತ ವಾಗುತ್ತದೋ ಇಲ್ಲವೋ, ಎನ್ನುವ ಜಿಜ್ಞಾಸೆಯೂ ಇದೆ. ಆದರೆ ಅಂಜನಾದ್ರಿಯ ಶ್ರೀಗಳು ಅಯೋಧ್ಯೆಯಲ್ಲಿ ಈ ಕುರಿತು ಚರ್ಚಿಸಿಯೇ ರಥ ನಿರ್ಮಾಣಕ್ಕೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

udupi ratha

ನಿರ್ಮಾಣದ ಹಂತದಲ್ಲಿರುವ ರಥದ ದೃಶ್ಯ

ರಥ ನಿರ್ಮಾಣಕ್ಕೆ ಸುಮಾರು 2 ವರ್ಷ ಸಮಯ ತಗಲುತ್ತದೆ. ರಥ ನಿರ್ಮಾಣ ಆರಂಭಿಸುವುದಕ್ಕೂ ಮುನ್ನ ಶಿಲ್ಪಿಗಳು ಪೇಜಾವರ ಶ್ರೀಗಳನ್ನು ಭೇಟಿಯಾಗಿದ್ದು, ಶ್ರೀಗಳಿಂದ ಆಶೀರ್ವಾದ ಪಡೆದು ಯೋಜನೆ ಕೈಗೆತ್ತಿಕೊಳ್ಳುವುದಾಗಿ ರಥ ಶಿಲ್ಪಿ ಲಕ್ಷ್ಮೀ ನಾರಾಯಣ ಆಚಾರ್ಯ ತಿಳಿಸಿದ್ದಾರೆ.

udupi ratha

ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ

ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಮುಂತಾದ ಪ್ರಸಿದ್ಧ ದೇವಾಲಯಗಳಿಗೆ ಇದೇ ತಂಡ ರಥ ನಿರ್ಮಿಸಿಕೊಟ್ಟಿದೆ. ಶತಮಾನಗಳ ಕಾಲ ದೇಶದ ಜನತೆ ರಾಮದೇವರನ್ನು ತಮ್ಮ ಹೃದಯದಲ್ಲಿ ಹೊತ್ತು ತಿರುಗಿದರೆ, ಇನ್ನು ಮುಂದೆ ಉಡುಪಿಯ ರಥದಲ್ಲಿ ರಾಮದೇವರ ಮೆರವಣಿಗೆ ನಡೆಯುವ ದಿನ ದೂರವಿಲ್ಲ ಎನ್ನುವುದು ಮಾತ್ರ ನಿಜ.

udupi ratha

ರಾಮ ರಥ ನಿರ್ಮಾಣಕ್ಕೆ ಉಡುಪಿಯಲ್ಲಿ ಸಿದ್ಧತೆ

ಇದನ್ನೂ ಓದಿ: ಮಂದಿರ ನಿರ್ಮಾಣಕ್ಕೆ VHPಗೆ ಎಷ್ಟು ದೇಣಿಗೆ ಬಂದಿದೆ ಬಹಿರಂಗಪಡಿಸಿ: ದಿಗ್ವಿಜಯ್ ಸಿಂಗ್

Published On - 10:58 am, Fri, 12 February 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್