ಕರ್ನಾಟಕದಲ್ಲಿ ಇಂದು ಕೊವಿಡ್-19 ಸೋಂಕಿಗೆ 87 ಬಲಿ
ಕರ್ನಾಟಕ ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಸಾಯಂಕಾಲ ಬಿಡುಗಡೆ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 87 ಜನ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 8,191 ಜನರಿಗೆ ಸೋಂಕು ದೃಡಪಟ್ಟಿದೆ. ಕರ್ನಾಟಕದಲ್ಲಿ ಇದುವರೆಗೆ ಮಹಾಮಾರಿಯಿಂದ ಮರಣಿಸಿದವರ ಸಂಖ್ಯೆ 10,123 ಕ್ಕೇರಿದೆ ಮತ್ತು ಒಟ್ಟು ಸೋಂಕಿತರ ಸಂಖ್ಯೆ 7,15,964ರಷ್ಟಾಗಿದೆ. ಅವರ ಪೈಕಿ 6,02,505 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 1,13,459 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ […]

ಕರ್ನಾಟಕ ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಸಾಯಂಕಾಲ ಬಿಡುಗಡೆ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 87 ಜನ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 8,191 ಜನರಿಗೆ ಸೋಂಕು ದೃಡಪಟ್ಟಿದೆ. ಕರ್ನಾಟಕದಲ್ಲಿ ಇದುವರೆಗೆ ಮಹಾಮಾರಿಯಿಂದ ಮರಣಿಸಿದವರ ಸಂಖ್ಯೆ 10,123 ಕ್ಕೇರಿದೆ ಮತ್ತು ಒಟ್ಟು ಸೋಂಕಿತರ ಸಂಖ್ಯೆ 7,15,964ರಷ್ಟಾಗಿದೆ. ಅವರ ಪೈಕಿ 6,02,505 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 1,13,459 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 28 ಜನ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 3,776 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ನಗರದಲ್ಲ್ಲಿ ಕೊರೊನಾದಿಂದ ಈವರೆಗೆ 3,390 ಜನ ಮರಣಿಸಿದ್ದು ಒಟ್ಟು ಕೊರೊನಾ ಪೀಡಿತರ ಸಂಖ್ಯೆ 2,88,831ಕ್ಕೇರಿದೆ. ಸೋಂಕಿತರ ಪೈಕಿ 2,26,151 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ 63,789 ಜನರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.




