87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಿ 20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ

ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರ ವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಮಂಡ್ಯ ಜಿಲ್ಲಾಡಳಿತವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಡಿ.20 ಮತ್ತು 21 ರಂದು ರಜೆ ಘೋಷಿಸಿದೆ. ಸಾಹಿತ್ಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಉಪನ್ಯಾಸಕರು ಭಾಗವಹಿಸುವ ಉದ್ದೇಶದಿಂದ ರಜೆ ನೀಡಲಾಗಿದೆ.

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಿ 20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ
87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಿ 20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on:Dec 18, 2024 | 10:04 PM

ಮಂಡ್ಯ, ಡಿಸೆಂಬರ್​ 18: ಮೂವತ್ತು ವರ್ಷಗಳ ಬಳಿಕ ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಮಂಡ್ಯದಲ್ಲಿ ನಡೆಯಲಿದೆ. ಈ ನುಡಿಜಾತ್ರೆಯನ್ನು ಸಾಕಷ್ಟು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಡಿ.20 ಮತ್ತು 21ರಂದು ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಡಿ.20ರಿಂದ 22ರವರೆಗೂ 3 ದಿನ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನಲೆ ಗಣ್ಯರು ಮತ್ತು ನೊಂದಾಯಿತ ಪ್ರತಿನಿಧಿಗಳು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಅವರಿಗೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತೆ.

ಇದನ್ನೂ ಓದಿ: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಈ ಬಾರಿ ಹೊಸ ಗೋಷ್ಠಿಗಳ ಹಬ್ಬ: ಪ್ರಕೃತಿ ವಿಕೋಪ, ಸಾಹಿತ್ಯದಲ್ಲಿ ರಾಜಕೀಯದ ಚರ್ಚೆ

ಅಲ್ಲದೇ ನಾಡು-ನುಡಿ ಬಗ್ಗೆ ಅಭಿಮಾನ ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಭಾಗಿಯಾಗಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಡಿ.20, 21 ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಈ ನುಡಿಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ತಯಾರಿ ಮಾಡಲಾಗಿದೆ.

ಇದನ್ನೂ ಓದಿ: ಎಸ್‌ಎಂ ಕೃಷ್ಣ ಬರೆದ ಕೊನೆಯ ಪತ್ರ ಲಭ್ಯ: ಮಂಡ್ಯ ಸಾಹಿತ್ಯ ಸಮ್ಮೇಳನದ ಬಗ್ಗೆ ಏನು ಬರೆದಿದ್ದರು ನೋಡಿ

ಅಲ್ಲದೇ ಈಗಾಗಲೇ ಸಮ್ಮೇಳನದ ಗೌರವಾಧ್ಯಕ್ಷರಾಗಿ ಗೊರಾ ಚನ್ನಬಸವ ಅವರನ್ನ ಕೂಡ ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಅಂಗವಾಗಿ ‌ಮನೆ ಮನೆಗೆ ಬಾವುಟ ನೀಡುವ ಕಾರ್ಯಕ್ರಮವನ್ನು ಇತ್ತೀಚೆಗೆ ಮಾಡಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪ್ರತಿ ಮನೆಗಳ ಮೇಲೆ ಬಾವುಟ ಹಾರಿಸಲು ಕರೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:03 pm, Wed, 18 December 24

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?