9 Years Of PM Modi: ಇಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನರೇಂದ್ರ ಮೋದಿಯವರು ಪ್ರಧಾನಿಯಾಗಿ 9 ವರ್ಷ ಪೂರೈಸಿದ ಹಿನ್ನೆಲೆ ಇಂದು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಬೆಳಗ್ಗೆ 10.30ಕ್ಕೆ ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ.

9 Years Of PM Modi: ಇಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಪ್ರಧಾನಿ ನರೇಂದ್ರ ಮೋದಿ
Follow us
ವಿವೇಕ ಬಿರಾದಾರ
|

Updated on: Jun 27, 2023 | 6:58 AM

ಬೆಂಗಳೂರು: ನರೇಂದ್ರ ಮೋದಿಯವರು (Narendra Modi) ಪ್ರಧಾನಿಯಾಗಿ (Prime Minister) 9 ವರ್ಷ ಪೂರೈಸಿದ ಹಿನ್ನೆಲೆ ಇಂದು (ಜೂ.27) ಬಿಜೆಪಿ (BJP) ಕಾರ್ಯಕರ್ತರನ್ನು ಉದ್ದೇಶಿಸಿ ಬೆಳಗ್ಗೆ 10.30ಕ್ಕೆ ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ. ರಾಜ್ಯದ ಎಲ್ಲಾ ಬಿಜೆಪಿ ಕಾರ್ಯಕರ್ತರು ಎಲ್ಲಾ ಬೂತ್​, ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಸೇರಲು ಸೂಚನೆ ನೀಡಲಾಗಿದೆ. ನಾಳೆ (ಜೂ.28) ರಿಂದ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಒಂದು ವಾರ ಕಾಲ ಬಿಜೆಪಿ ಸಂಪರ್ಕ ಅಭಿಯಾನ ನಡೆಯುತ್ತದೆ.

ಜೂನ್​​ 28ರಿಂದ ಜುಲೈ 5ರವರೆಗೆ ಕರಪತ್ರ ವಿತರಣೆ ಅಭಿಯಾನ

ಜೂನ್​​ 28ರಿಂದ ಜುಲೈ 5ರವರೆಗೆ ಕರಪತ್ರ ವಿತರಣೆ ಅಭಿಯಾನ ನಡೆಯುತ್ತದೆ. ಪ್ರತಿ ಮನೆಗೆ ಕೇಂದ್ರದ ಸಾಧನೆಗಳ ಕರಪತ್ರ ವಿತರಿಸಲು ನಿರ್ಧರಿಸಲಾಗಿದೆ. ಮನೆ ಮನೆಗೆ ಪ್ರಧಾನಿ ಮೋದಿ ಹೆಸರಿನಲ್ಲಿ ಕರಪತ್ರ ವಿತರಣೆ ಮಾಡಲಾಗುತ್ತದೆ. ಸುಮಾರು 50 ಲಕ್ಷ ಮನೆಗಳಿಗೆ ಕರಪತ್ರ ವಿತರಣೆ ಮಾಡುವ ಗುರಿ ರಾಜ್ಯ ಬಿಜೆಪಿ ಘಟಕ ಹೊಂದಿದೆ.

ಇದನ್ನೂ ಓದಿ: ಬಿಜೆಪಿ ಸಭೆಯಲ್ಲಿ ಯತ್ನಾಳ್ – ನಿರಾಣಿ ಪರೋಕ್ಷ ವಾಗ್ದಾಳಿ, ಕಾರ್ಯಕರ್ತರ ಜಟಾಪಟಿ

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿ. ಅವರು 2014ರಲ್ಲಿ ಮೊದಲ ಸಲ ಪ್ರಧಾನಮಂತ್ರಿಯಾಗಿದ್ದರು. ನರೇಂದ್ರ ಮೋದಿಯವರು 2019ರ ಮೇ 30 ರಂದು ಎರಡನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಭಾಜನರು.

ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ

ಅಲ್ಲದೇ ಇಂದು ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಭೋಪಾಲ್‌ನ ರಾಣಿ ಕಮಲಾಪಥಿ ರೈಲ್ವೆ ನಿಲ್ದಾಣದಿಂದ ಚಾಲನೆ ನೀಡಲಿದ್ದಾರೆ. ಚಾಲನೆ ಬಳಿಕ ಧಾರವಾಡದ ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯುತ್ತದೆ. ಬಳಿಕ ಧಾರವಾಡದಿಂದ ರೈಲು ಹೊರಡಲಿದೆ.

ಧಾರವಾಡದಿಂದ ಬೆಳಗ್ಗೆ 10.30ಕ್ಕೆ ಹೊರಡುವ ರೈಲು ಸಂಜೆ 6.40ಕ್ಕೆ ಬೆಂಗಳೂರಿಗೆ ಆಗಮಿಸುತ್ತದೆ. ಪ್ರಧಾನಿ ಮೋದಿ ಇಂದು ಒಟ್ಟು 5 ವಂದೇ ಭಾರತ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ