Dengue Cases in Karnataka: ಒಂದೇ ದಿನ ಬೆಂಗಳೂರಿನಲ್ಲಿ 91 ಡೆಂಗ್ಯೂ ಪ್ರಕರಣ ಪತ್ತೆ; ಶಿವಮೊಗ್ಗದಲ್ಲಿ ಮಹಿಳೆ ಸಾವು

ಕರ್ನಾಟಕದಾದ್ಯಂತ ಮಳೆ ಹೆಚ್ಚಾಗಿರುವುದರ ಜೊತೆಗೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ದಿನ ಒಂದರಲ್ಲೇ 91 ಪ್ರಕರಣಗಳು ವರದಿಯಾಗಿದ್ದರೆ, ಶಿವಮೊಗ್ಗದಲ್ಲಿ ಸೋಂಕಿನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹಾಸನದಲ್ಲಿ ಹಲವರನ್ನು ಡೆಂಗ್ಯೂ ಬಲಿ ಪಡೆದಿದ್ದು, ಇದೀಗ ಶಿವಮೊಗ್ಗದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ರಾಜ್ಯದ ಒಟ್ಟಾರೆ ಪರಿಸ್ಥಿತಿಯ ವಿವರ ಇಲ್ಲಿದೆ.

Dengue Cases in Karnataka: ಒಂದೇ ದಿನ ಬೆಂಗಳೂರಿನಲ್ಲಿ 91 ಡೆಂಗ್ಯೂ ಪ್ರಕರಣ ಪತ್ತೆ; ಶಿವಮೊಗ್ಗದಲ್ಲಿ ಮಹಿಳೆ ಸಾವು
ಒಂದೇ ದಿನ ಬೆಂಗಳೂರಿನಲ್ಲಿ 91 ಡೆಂಗ್ಯೂ ಪ್ರಕರಣ ಪತ್ತೆ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on:Jul 10, 2024 | 9:25 AM

ಬೆಂಗಳೂರು, ಜುಲೈ 10: ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ ಬೆಂಗಳೂರು ನಗರವೊಂದರಲ್ಲೇ 91 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ನಗರದಲ್ಲಿ ಡೆಂಘೀ ಪಾಸಿಟಿವ್ ಸಂಖ್ಯೆ 2,174ಕ್ಕೆ ಏರಿಕೆ ಆಗಿದೆ. ಆತಂಕದ ವಿಷಯವೆಂದರೆ, 24 ಗಂಟೆಯಲ್ಲಿ 82 ಮಕ್ಕಳು ಡೆಂಗ್ಯೂ ಸೋಂಕಿಗೆ ತುತ್ತಾಗಿದ್ದಾರೆ.

ಡೆಂಘೀ ಮಹಾಮಾರಿ ಶಿವಮೊಗ್ಗದಲ್ಲಿಯೂ ದಿಗಿಲು ಹುಟ್ಟಿಸಿದೆ. ನಿತ್ಯ ನೂರಾರು ಕೇಸ್​ಗಳು ದಾಖಲಾಗುತ್ತಿದ್ದು, ಪುಟಾಣಿಗಳನ್ನೇ ಬಲಿ ಪಡೆಯುತ್ತಿದೆ. ಹಾಸನ ಜಿಲ್ಲೆ ಬಳಿಕ ಶಿವಮೊಗ್ಗದಲ್ಲಿ ಇಸೀಗ ಮಹಿಳೆಯೊಬ್ಬರು ಡೆಂಘೀಯಿಂದ ಸಾವಿಗೀಡಾಗಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ರಶ್ಮಿ ಮೃತ ದುರ್ದೈವಿ. ಕಳೆದ 15 ದಿನದಿಂದ ತೀವ್ರ ಜ್ವರದಿಂದ ನರಳುತ್ತಿದ್ದರು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಡೆಂಗ್ಯೂ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್

ಡೆಂಗ್ಯೂ ಇದೀಗ ಸರ್ಕಾರವನ್ನೂ ನಡುಗುವಂತೆ ಮಾಡಿದೆ. ಐಎಎಸ್​​ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ್ದ ಸಿಎಂ ಸಿದ್ದರಾಮಯ್ಯ, ಮಂಗಳವಾರ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

ಡೆಂಘೀ ವಿರುದ್ಧ ಸಮರ

ಮಳೆಗಾಲದಲ್ಲೇ ಡೆಂಘೀ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಹೀಗಾಗಿ ನೀರು ನಿಲ್ಲದಂತೆ ಸ್ವಚ್ಛತೆಗೆ ಆದ್ಯತೆ ನೀಡುವುದು, ಸೊಳ್ಳೆಗಳ ನಾಶಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ 10 ಪ್ರತ್ಯೇಕ ಡೆಂಘೀ ವಾರ್ಡ್ ತೆರೆಯಬೇಕು. ಡೆಂಘೀ ಕಂಟ್ರೋಲ್​ಗೆ ಟಾಸ್ಕ್​ಫೋರ್ಸ್ ರಚನೆ ಮಾಡಬೇಕು. ಕೊಳಗೇರಿ ಪ್ರದೇಶದಲ್ಲೇ ಹೆಚ್ಚು ಡೆಂಘೀ ವ್ಯಾಪಿಸಿದೆ. ಹೀಗಾಗಿ ಸ್ಲಂ ನಿವಾಸಿಗಳಿಗೆ ಉಚಿತವಾಗಿ ಸೊಳ್ಳೆ ಪರದೆ ವಿತರಣೆ ಮಾಡುವಂತೆ ಸೂಚಿಸಿದ್ದೇವೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ ಸೊಳ್ಳೆಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹರಡಿಸ್ತಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

ಹಾಸನದ ಹಿಮ್ಸ್​ನಲ್ಲಿ ಸೋಮವಾರ ಅರಸೀಕೆರೆಯ ನಿವಾಸಿ ಸುಚಿತ್ರಾ ಎಂಬ ಯುವತಿ ಡೆಂಗ್ಯೂವಿನಿಂ ಮೃತಪಟ್ಟಿದ್ದರು. ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಯುವತಿ ಕುಟುಂಬ ಆರೋಪಿಸಿತ್ತು. ಹಿಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಶಿವಲಿಂಗೇಗೌಡ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿ, ಕಾಂಗ್ರೆಸ್ ವಾಕ್ಸಮರ

ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಡೆಂಘೀ ಡಂಗುರ ಬಾರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಶ್ರೀಮಾನ್‌ ಸಿದ್ದರಾಮಯ್ಯನವರ ಸರ್ಕಾರ‌ ಗಾಢ ನಿದ್ರೆಯಲ್ಲಿದೆ ಎಂದು ಬಿಜೆಪಿ ಟೀಕಿಸಿದೆ. ಬಿಜೆಪಿ ಟೀಕೆ​​ಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು ಸುಳ್ಳು ಹೇಳಿ ಅಪಪ್ರಚಾರ ಮಾಡುತ್ತಾರೆ. ಅವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೆ ಏನು ಗೊತ್ತು ಎಂದು ತಿರುಗೇಟು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:06 am, Wed, 10 July 24

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ