ಕರ್ನಾಟಕದಲ್ಲಿ 5 ವರ್ಷಗಳಲ್ಲಿ 92 ವಸತಿ ಶಾಲೆಯ ವಿದ್ಯಾರ್ಥಿಗಳು ಆತ್ಮಹತ್ಯೆ
students suicide In Karnataka: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ (KREIS) ವಸತಿ ಶಾಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಳಗಾವಿ ಚಳಿಗಾಲದ ವಿಧಾನಮಂಡಲದ ಉಭಯ ಸದನದಲ್ಲಿ ಮಂಡನೆಯಾದ ಸಮಿತಿಯ ಮಧ್ಯಂತರ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಾಗಿದೆ.
ಬೆಳಗಾವಿ, (ಡಿಸೆಂಬರ್ 08): ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ (KREIS) ವಸತಿ ಶಾಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು (residential school students) ಆತ್ಮಹತ್ಯೆ (suicide) ಮಾಡಿಕೊಂಡು ಸಾವನ್ನಪ್ಪಿರುವ ಪ್ರಕರಣಗಳು ವರದಿಯಾಗಿದ್ದು, ಈ ಬಗ್ಗೆ ನಾಗರಿಕ ಹಕ್ಕು ನಿರ್ದೇಶನಾಲಯದಿಂದ ಸಮಗ್ರ ತನಿಖೆ ನಡೆಸುವಂತೆ ಸರ್ಕಾರಕ್ಕೆ ಕರ್ನಾಟಕ ವಿಧಾನಮಂಡಲುದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಒಂಗಡಗಳ ಕಲ್ಯಾಣ ಸಮಿತಿ ಶಿಪಾರಸು ಮಾಡಿದೆ.
ವಿಧಾನಮಂಡಲದ ಉಭಯ ಸದನದಲ್ಲಿ ಬುಧವಾರ ಮಂಡನೆಯಾದ ಸಮಿತಿಯ ಮಧ್ಯಂತರ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಾಗಿದ್ದು, ಕಳೆದ 5 ವರ್ಷಗಳಲ್ಲಿ 92 ಮಕ್ಕಳು ಸಾವನ್ನಪ್ಪಿದ್ದಾರೆ. ಈ ಪೈಕಿ 29 ಮಕ್ಕಳು ಮನೆಗೆ ಹೋಗುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಈ ಪ್ರಕರಣಗಳು ಏಕೆ ಸಂಭವಿಸಿವೆ? ಹೇಗೆ ಸಂಭವಿಸಿವೆ? ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ ನಾಗರಿಕ ಹಕ್ಕ ನಿರ್ದೇಶನಾಯಲದಿಂದ ಸಮಗ್ರ ತನಿಖೆ ನಡೆಸಬೇಕು. ಜತಗೆ ವಸತಿ ಶಾಲೆಗಳಲ್ಲಿನ ಮಕ್ಕಳು, ಅವರ ಪೋಷಕರು ಹಾಗೂ ಶಿಕ್ಷಕರಿಗೆ ಇಲಾಖೆ ಹಂತದಲ್ಲೇ ಕೌನ್ಸಿಲಿಂಗ್ ಮಾಡಿಸಬೇಕು ಎಂದು ಸೂಚಿಸಲಾಗಿದೆ.
ಅಲ್ಲದೇ ಬಹಳಷ್ಟು ಕಡೆಗಳಲ್ಲಿ ಟೆಂಡರ್ಗೂ ಮೊದಲು ನೀಡುವ ಮಾದರಿಯಂತೆ ಆಹಾರವನ್ನು ಪೂರೈಸುತ್ತಿಲ್ಲ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ಪದಾರ್ಥಗಳನ್ನು ಅಧಿಕಾರಿಗಳು ಪರಿಶೀಲಿದಾಗ ಪ್ಲಾಸ್ಟಿಕ್ ಫೋಮ್ ಪತ್ತೆಯಾಗಿದೆ. ಇಂತಹ ಪ್ರಕರಣಗಳ ಹಿಂದೆ ಪ್ರಭಾವಿಗಳಿದ್ದಾರೆ. ಇದರಿಂದ ಆಹಾರ ಗುಣಮಟ್ಟ ಪರಿಶೀಲನೆಗೆ ಮಾರ್ಗಸೂಚಿ ಹೊರಡಿಸಿ ಜಿಲ್ಲಾ ಮಟ್ಟದಲ್ಲಿ ಹಿರಿಯ ಅಧಿಕಾರಿಗಳಿಂದ ಪರಿಶೀಲಿಸಬೇಕು ನಿರ್ದೇಶಿಸಲಾಗಿದೆ.
ಕ್ರೈಸ್ ಸಂಸ್ಥೆಯಿಂದ ಬಡಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದನ್ನು ಬಿಟ್ಟು ಸಾವಿರಾರು ಕೋಟಿ ರೂ.ಗಳ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಲಾಗಿದೆ. ಸುಮಾರು 9 ಸಾವಿರ ಕೋಟಿ ರೂ. ಮೊತ್ತದ 52 ಕಾಮಗಾರಿಗಳು ಪ್ರಗತಿಯಲ್ಲಿವೆ. 1100 ಕೋಟಿ ರೂ. ಮೌಲ್ಯದ ಬಿಲ್ಗಳು ಬಾಕಿ ಇದೆ. ಇನ್ನು ಮುಂದೆ ಕ್ರೈಸ್ ಶಾಲೆಗಳ ನಿರ್ಮಾಣಕ್ಕೆ ಲೋಕೋಪಯೋಗಿ, ಪಿಆರ್ಡಿಯಂತಹ ಸರ್ಕಾರಿ ಸಂಸ್ಥೆಗಳಿಮದ ಮಾಡಿಸಬೇಕು. ಹೊಸ ಕಟ್ಟಡ ನಿರ್ಮಾಣಕ್ಕೂ ಮೊದಲೇ ಶಿಕ್ಷಕರ ನೇಮಕ, ಮೂಲಸೌಕರ್ಯದ ಅಂದಾಜು ಪಟ್ಟಿ ತಯಾರಿಸಿ ಅನುಮೋದನೆ ಪಡೆಯಬೇಕು ಎಂದು ಶಿಫಾರಸು ಮಾಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ