ಮೈಸೂರಿನಲ್ಲಿ 98.56 ಕೋಟಿ ರೂ. ಮೌಲ್ಯದ ಬಿಯರ್, ಕಚ್ಚಾ ವಸ್ತು ವಶಕ್ಕೆ, ಇದು ಇತಿಹಾಸದಲ್ಲೇ ಮೊದಲು

ಮೈಸೂರು ಜಿಲ್ಲೆಯ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡಿನ ಯುಬಿ ತಯಾರಿಕಾ ಘಟಕದಲ್ಲಿ 98.56 ಕೋಟಿ ರೂ. ಮೌಲ್ಯದ ಬಿಯರ್ ಹಾಗೂ ಕಚ್ಚಾ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಅಧಿಕಾರಿಗಳ ಭರ್ಜರಿ‌ ಕಾರ್ಯಾಚರಣೆ ಮಾಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಕೋಟಿ ಕೋಟಿ ಮೊತ್ತದ ಮದ್ಯ ವಶಕ್ಕೆ ಪಡೆಯಲಾಗಿದೆ.

ಮೈಸೂರಿನಲ್ಲಿ 98.56 ಕೋಟಿ ರೂ. ಮೌಲ್ಯದ ಬಿಯರ್, ಕಚ್ಚಾ ವಸ್ತು ವಶಕ್ಕೆ, ಇದು ಇತಿಹಾಸದಲ್ಲೇ ಮೊದಲು
ವಶಕ್ಕೆ ಪಡೆದುಕೊಂಡ ಮದ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Apr 03, 2024 | 9:27 PM

ಚಾಮರಾಜನಗರ, ಮಾರ್ಚ್​ 03: ಮೈಸೂರು ಜಿಲ್ಲೆಯ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡಿನ ಯುಬಿ ತಯಾರಿಕಾ ಘಟಕದಲ್ಲಿ 98.56 ಕೋಟಿ ರೂ. ಮೌಲ್ಯದ ಬಿಯರ್ (beer) ಹಾಗೂ ಕಚ್ಚಾ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಅಧಿಕಾರಿಗಳ ಭರ್ಜರಿ‌ ಕಾರ್ಯಾಚರಣೆ ಮಾಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಕೋಟಿ ಕೋಟಿ ಮೊತ್ತದ ಮದ್ಯ ವಶಕ್ಕೆ ಪಡೆಯಲಾಗಿದೆ. 6.03 ಲಕ್ಷ ರೂ. ಬಿಯರ್ ಪೆಟ್ಟಿಗೆ, ಟ್ಯಾಂಕ್‌ನಲ್ಲಿದ್ದ 66.16 ಲಕ್ಷ ಲೀಟರ್ ಬಿಯರ್, 6.5 ಲಕ್ಷ ಕೆ.ಜಿ ಕಚ್ಚಾ ವಸ್ತು ಸೇರಿದಂತೆ 98.52 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ.

ಅಕ್ರಮವಾಗಿ ಸಂಗ್ರಹಿಸಿದ್ದ 7,000 ಬಿಯರ್ ರಟ್ಟಿನ ಪೆಟ್ಟಿಗೆಗಳು ಪತ್ತೆ ಆಗಿದ್ದು, ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಬಿಯರ್ ತಯಾರಿಸಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಸದ್ಯ 17 ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿ ಅಬಕಾರಿ ಪೊಲೀಸರಿಂದ ತನಿಖೆ ನಡೆಸಿದ್ದಾರೆ.

ಖಾಸಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ಜಪ್ತಿ

ಖಾಸಗಿ ವಾಹನದಲ್ಲಿ ಬ್ಯಾಂಕ್ ಸಿಬ್ಬಂದಿ ಅಕ್ರಮವಾಗಿ ಸಾಗಿಸುತ್ತಿದ್ದ 45 ಲಕ್ಷ ರೂ. ಹಣವನ್ನು ಚಿಕ್ಕಮಗಳೂರು ತಾಲೂಕಿನ ಮಾಚಗೊಂಡನಹಳ್ಳಿ ಬಳಿ ಜಪ್ತಿ ಮಾಡಲಾಗಿದೆ. ಸಿಸಿ ಕ್ಯಾಮರಾ, ಸೆಕ್ಯೂರಿಟಿ ಗಾರ್ಡ್‌ಗಳು ಇಲ್ಲದೆ ಚಿಕ್ಕಮಗಳೂರಿನಿಂದ ಕಡೂರಿಗೆ ಸಾಗಿಸುತ್ತಿದ್ದ 45 ಲಕ್ಷ ರೂ. ಹಣ ಮತ್ತು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಲಕ್ಷ 50 ಸಾವಿರ ರೂ. ಹಣ ವಶಕ್ಕೆ

ಕೋಲಾರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಲಕ್ಷ 50 ಸಾವಿರ ರೂ. ಹಣ ಹಾಗೂ ದ್ವಿಚಕ್ರ ವಾಹನವನ್ನ ಕೋಲಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಹಕ್ಕಿಪಿಕ್ಕಿ ಕಾಲೋನಿ ಬಳಿ ಚುನಾವಣೆ ಸಂಬಂಧ ನಿರ್ಮಾಣ ಮಾಡಲಾಗಿರುವ ಚೆಕ್ ಪೋಸ್ಟ್ನಲ್ಲಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 25 ಲಕ್ಷ ಹಣ, 199 LED ಟಿವಿ ವಶ

ಶಿಡ್ಲಘಟ್ಟ ಮೂಲದ ಗೋಪಾಲ ಎಂಬುವವರಿಗೆ ಸೇರಿದ ಹಣ ಹಾಗೂ ದ್ವಿಚಕ್ರ ವಾಹನ ಎನ್ನಲಾಗಿದೆ. ಅದರಲ್ಲೂ ಆಂಧ್ರದಲ್ಲೂ ವಿಧಾನಸಭೆ ಚುನಾವಣೆ ಹಿನ್ನಲೆ ಕಟ್ಟುನಿಟ್ಟಿನ ತಪಾಸಣೆ ಮಾಡುತ್ತಿರುವ ಅಂತರರಾಜ್ಯ ಚೆಕ್ ಪೋಸ್ಟ್ ನಲ್ಲಿ ಹಣ ಸೀಜ್ ಆಗಿದೆ. ಇನ್ನೂ ಮದನಪಲ್ಲಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಬುಡಗವಾರಪಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದ ಹಣ ಎನ್ನಲಾಗುತ್ತಿದ್ದು, ಇನ್ಸ್ಪೆಕ್ಟರ್ ಜಯಾನಂದ್ ನೇತೃತ್ವದಲ್ಲಿ ತಪಾಸಣೆ ವೇಳೆ ಹಣ ಸಿಕ್ಕಿ ಬಿದ್ದಿದೆ. ಇನ್ನೂ ರಾಯಲಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:18 pm, Wed, 3 April 24

ತಾಜಾ ಸುದ್ದಿ
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ