AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚ್ಚರಿ ಅನ್ನಿಸಿದರೂ ಸತ್ಯ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!

ಹಾಸ್ಟೆಲ್‌ನಲ್ಲಿ ಅಪ್ರಾಪ್ತ ಬಾಲಕಿಯರು ಅಥವಾ ವಿದ್ಯಾರ್ಥಿನಿಯರು ಮಗುವಿಗೆ ಜನ್ಮ ನೀಡುವಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಆಘಾತಕಾರಿ ಬೆಳವಣಿಗೆಯಾಗಿ ಹೊರಹೊಮ್ಮಿವೆ. ಇಂತಹ ಘಟನೆಗಳು ಹಾಸ್ಟೆಲ್ ಸಿಬ್ಬಂದಿ ಹಾಗೂ ಮಕ್ಕಳ ರಕ್ಷಣೆಯ ವ್ಯವಸ್ಥೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತವೆ. ಕೊಪ್ಪಳ, ಯಾದಗಿರಿ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ 9ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

ಅಚ್ಚರಿ ಅನ್ನಿಸಿದರೂ ಸತ್ಯ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!
ಪ್ರಾತಿನಿಧಿಕ ಚಿತ್ರ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Jun 12, 2026 | 3:21 PM

Share

ಕಾರವಾರ, (ಜೂನ್ 12): 9ನೇ ತರಗತಿ ವಿದ್ಯಾರ್ಥಿನಿಯೋರ್ವಳು (Student) ಹಾಸ್ಟೆಲ್​​​ನಲ್ಲಿ (Hostel) ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ  ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಚ್ಚರಿ ಅನ್ನಿಸಿದರೂ ಸತ್ಯ. ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್ಐ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮುಖ್ಯಾಂಶಗಳು

  • ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ
  • ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
  • ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿರುತ್ತಿದ್ದ 9 ನೇ ತರಗತಿ ವಿದ್ಯಾರ್ಥಿನಿ.
  • ಸದ್ಯ ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಶಿರಸಿ ತಹಶಿಲ್ದಾರ ಹಾಗೂ ಪಿಎಸ್ಐ ಭೇಟಿ

ಇದನ್ನೂ ಓದಿ: ಮಗುವಿಗೆ ಜನ್ಮ ನೀಡಿದ 9ನೇ ಕ್ಲಾಸ್ ಬಾಲಕಿ; ಹಾಸ್ಟೆಲ್​ನಲ್ಲಿದ್ದ ಬಾಲಕಿ ಗರ್ಭಿಣಿಯಾಗಿದ್ದು ಹೇಗೆ?

ಆಕೆ 9ನೇ ತರಗತಿ ಅಂದ್ರೆ ಏನೋ ಹದಿನಾಲ್ಕು ಹದಿನೈದು ವರ್ಷ ಇರಬಹುದು. ತಮ್ಮ ಮಗಳು ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದ್ರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೇರಿರುವ ಸುದ್ದಿ ಕೇಳಿ ಶಾಕ್​​​ ಆಗಿದ್ದಾರೆ. ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ, ಮೊನ್ನೆ ಅಷ್ಟೇ ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ ಮಗುವಿಗೆ ಜನ್ಮ ನೀಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಸದ್ಯ ಪೊಲೀಸರು ತನಿಖೆ ನಡೆಸಿದ್ದಾರೆ.

Published On - 3:15 pm, Fri, 12 June 26

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ