ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಬಂದ 55 ವರ್ಷದ ಕೋಲಾರದ ವ್ಯಕ್ತಿ

1993 ರಲ್ಲಿ ಕೆಲಸಕ್ಕೆ ಸೇರಿಕೊಂಡಾಗ ನಾಲ್ಕನೇ ತರಗತಿ ಪಾಸ್ ಆಗಿದ್ದರೆ ಕೆಲಸ ಸಿಗುತ್ತಿತ್ತು. ತದ ನಂತರ ಅಂದರೆ 1996 ನಂತರ ಪೊಲೀಸ್ ಪೇದೆ ಕೆಲಸಕ್ಕೆ ಸೇರಲು ಹತ್ತನೇ ತರಗತಿ ಉತ್ತೀರ್ಣ ಕಡ್ಡಾಯ ಮಾಡಿದ್ದಾರೆ.

ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಬಂದ 55 ವರ್ಷದ ಕೋಲಾರದ ವ್ಯಕ್ತಿ
ಪರೀಕ್ಷೆ ಬರೆಯಲು ಬಂದ 55 ವರ್ಷದ ಮಂಜುನಾಥ್
Follow us
| Edited By: sandhya thejappa

Updated on:Jul 19, 2021 | 11:31 AM

ಕೋಲಾರ: 55 ವರ್ಷದ ವೃದ್ಧನೊಬ್ಬ ಉತ್ಸಾಹದಿಂದ ಪರೀಕ್ಷೆ ಬರೆದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೊರೊನಾ ಆತಂಕದ ನಡುವೆ ಇಂದಿನಿಂದ ಎಸ್ಎಸ್ಎಲ್​ಸಿ ಪರೀಕ್ಷೆಗಳು ಆರಂಭವಾಗಿದೆ. ಈ ನಡುವೆ ಕೋಲಾರದ ಜೂನಿಯರ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 55 ವರ್ಷದ ವೃದ್ಧ ಉತ್ಸಾಹದಿಂದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ನಗರದ ಕುರುಬರ ಪೇಟೆ ನಿವಾಸಿ ಮಂಜುನಾಥ್ ಪರೀಕ್ಷೆ ಬರೆದ ವೃದ್ಧ. ಮಂಜುನಾಥ್ ಸದ್ಯ ಬೆಂಗಳೂರು ಶಸಸ್ತ್ರ ಪೊಲೀಸ್ ಮೀಸಲು ಪಡೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

1993 ರಲ್ಲಿ ಕೆಲಸಕ್ಕೆ ಸೇರಿಕೊಂಡಾಗ ನಾಲ್ಕನೇ ತರಗತಿ ಪಾಸ್ ಆಗಿದ್ದರೆ ಕೆಲಸ ಸಿಗುತ್ತಿತ್ತು. ತದ ನಂತರ ಅಂದರೆ 1996 ನಂತರ ಪೊಲೀಸ್ ಪೇದೆ ಕೆಲಸಕ್ಕೆ ಸೇರಲು ಹತ್ತನೇ ತರಗತಿ ಉತ್ತೀರ್ಣ ಕಡ್ಡಾಯ ಮಾಡಿದ್ದಾರೆ. ಹಾಗಾಗಿ ಮಂಜುನಾಥ್ ಎಷ್ಟು ವರ್ಷ ಸೇವೆ ಸಲ್ಲಿಸಿದರೂ ಕೂಡಾ ಅವರಿಗ ಪ್ರಮೋಷನ್ ಸಿಕ್ಕಿಲ್ಲ. ಈಗ ಅವರಿಗೆ ಪ್ರಮೋಷನ್ ಬೇಕೆಂದರೆ ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಮಾಡಬೇಕು. ಅದಕ್ಕಾಗಿ ಮಂಜುನಾಥ್ ಯಾವುದೇ ಸಂಕೋಚವಿಲ್ಲದೆ ಪರೀಕ್ಷೆ ಬರೆಯಲು ಇಂದು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ.

ಈ ಬಾರಿ ಹತ್ತನೇ ತರಗತಿ ಪಾಸ್ ಆದರೆ ಮಂಜುನಾಥ್ ಅವರಿಗೆ ಮುಖ್ಯ ಪೊಲೀಸ್ ಪೇದೆಯಾಗಿ ಪ್ರಮೋಷನ್ ಸಿಗಲಿದೆ. ಮಂಜುನಾಥ್ ಪರೀಕ್ಷೆ ಬರೆಯಲು ಬಂದಾಗ ಅಲ್ಲಿದ್ದ ಕೆಲವರು ಇವರನ್ನು ನೋಡಿ ಆಶ್ಚರ್ಯ ಪಟ್ಟರು. ಇವರು ಶಿಕ್ಷಕರೋ, ಇಲ್ಲಾ ಮುಖ್ಯ ಶಿಕ್ಷಕರೋ ಇರಬೇಕು ಎಂದುಕೊಂಡರು. ಆದರೆ ಅವರು ಒಬ್ಬ ವಿದ್ಯಾರ್ಥಿಯಂತೆ ಪರೀಕ್ಷೆ ಬರೆಯಲು ಕುಳಿತಾಗ ಆಶ್ಚರ್ಯಚಕಿತರಾಗಿ ನೋಡಿದರು.

ಮಂಜುನಾಥ್ ಅವರಿಗೆ ಮಕ್ಕಳು, ಮೊಮ್ಮಕ್ಕಳಿದ್ದಾರೆ. ಆದರೂ ಅವರು ಯಾವುದೇ ಬೇಸರ ಸಂಕೋಚವಿಲ್ಲದೆ ಇಂದು ಪರೀಕ್ಷೆ ಬರೆಯಲು ಬಂದಿದ್ದಾರೆ. ಇವರಲ್ಲದೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆಯ 51 ವರ್ಷದ ಅಶೋಕ್ ಎಂಬುವವರು ಪಂಚಾಯತಿಯಲ್ಲಿ ಕೆಲಸ ಮಾಡುತ್ತಿದ್ದು, ಇವರು ಕೂಡಾ ಹತ್ತನೇ ತರಗತಿ ಪರೀಕ್ಷೆ ಬರೆಯಲು ಬಂದಿದ್ದಾರೆ.

ಪರೀಕ್ಷೆ ಬರೆದ 32 ವರ್ಷದ ವ್ಯಕ್ತಿ 32 ವರ್ಷದ ವ್ಯಕ್ತಿಯೊಬ್ಬರು ಎಸ್​ಎಸ್​ಎಲ್​​ಸಿ ಪರೀಕ್ಷೆ ಬರೆಯಲು ಬೆಂಗಳೂರಿನ ಮಂಜುನಾಥ್ ನಗರದ ಗಂಗಮ್ಮ ತಿಮ್ಮಯ್ಯ ಶಾಲೆಯಲ್ಲಿರುವ ಕೊಠಡಿಗೆ ಬಂದಿದ್ದಾರೆ. ಪರೀಕ್ಷೆ ಬರೆಯಲು ಬಂದ ವ್ಯಕ್ತಿ ಐದು ವರ್ಷದಿಂದ ಪರೀಕ್ಷೆ ಬರೆದು ಫೇಲ್ ಆಗಿದ್ದಾರೆ. ಈ ಬಾರಿ ಚೆನ್ನಾಗಿದೆ. ಪಾಸ್ ಆಗುತ್ತೇನೆ ಅಂತ ಹೇಳಿದ್ದಾರೆ.

ಇದನ್ನೂ ಓದಿ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2021 ಜುಲೈ 20, ಸಂಜೆ 4.30ಕ್ಕೆ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್

SSLC Exam 2021; ಸುಗಮವಾಗಿ ಆರಂಭವಾದ ಎಸ್​ಎಸ್​ಎಲ್​ಸಿ ಪರೀಕ್ಷೆ, ಪರೀಕ್ಷಾ ಕೇಂದ್ರಗಳತ್ತ ಶಿಕ್ಷಣ ಸಚಿವರ ರೌಂಡ್ಸ್

(A 55year old man has come to write the SSLC exam in kolar)

Published On - 11:19 am, Mon, 19 July 21

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್