AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಿಜೆಪಿ ಎಂಪಿ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ: ದೂರು ದಾಖಲಿಸಿದ ಯುವತಿ

ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿಯೋರ್ವಳು ದೂರು ನೀಡಿದ್ದಾಳೆ. ಈ ಸಂಬಂಧ ಪೊಲೀಸರು ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ.

ಕರ್ನಾಟಕ ಬಿಜೆಪಿ ಎಂಪಿ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ: ದೂರು ದಾಖಲಿಸಿದ ಯುವತಿ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 17, 2023 | 10:25 AM

Share

ಬೆಂಗಳೂರು, (ನವೆಂಬರ್ 17): ಬಳ್ಳಾರಿ (Bellary) ಬಿಜೆಪಿ (BJP) ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಕೇಳಿಬಂದಿದೆ. ಮೈಸೂರಿನ(Myuru) ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ. ಹೌದು.. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿ ದೂರು ದಾಖಲಿಸಿದ್ದು, ಈ ದೂರಿ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಮೈಸೂರಿನ ಹೋಟೆಲ್​ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ರೆ, ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಮದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ ಕೇಸ್​ಗೆ ಬಿಗ್ ಟ್ವಿಸ್ಟ್: ಮಹಿಳೆಯ ಒಪ್ಪಿಗೆ ಮೇರೆಗೆ ಎಲ್ಲವೂ ನಡೆದಿದ್ಯಾ? ವಿಡಿಯೋ ವೈರಲ್

ಪಾರ್ಟಿಯೊಂದರಲ್ಲಿ ಸ್ನೇಹಿತರ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಆಕೆಗೆ ಮದುವೆಯಾಗುವುದಾಗಿ ನಂಬಿಸಿ ಕಳೆದ ಜನವರಿಯಲ್ಲಿ ಮೈಸೂರಿನ ಹೋಟೇಲ್ ನಲ್ಲಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ಮದುವೆ ಆಗುವಂತೆ ಯುವತಿ ಪಟ್ಟು ಹಿಡಿದಿದ್ದಕ್ಕೆ ಆಕೆಯಿಂದ ಅಂತರ ಕಾಪಾಡಿಕೊಳ್ಳಲು ಶುರುಮಾಡಿದ್ದಾರೆ. ಇದರಿಂದ ಬೇರೆ ದಾರಿ ಕಾಣದೇ ಯುವತಿ  ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.

ಇಬ್ಬರಿಗೂ ನೋಟಿಸ್

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ. ವಿಚಾರನೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ. ಇನ್ನು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಯುವತಿ ವಿರುದ್ಧ ರಂಗನಾಥ್ ಪ್ರತಿ ದೂರು

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾರೆ ಎಂದು ಯುವತಿ ದೂರು ದಾಖಲಿಸಿದ ಬೆನ್ನಲ್ಲೇ ಇತ್ತ ರಂಗನಾಥ್ ಸಹ ಪ್ರತಿದೂರು ದಾಖಲಿಸಿದ್ದಾರೆ. ​ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಿಸಿದ್ದು, ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ. ಅಲ್ಲದೇ 15 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಯುವತಿ ವಿರುದ್ಧ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ವಿಜಯನಗರ ಠಾಣೆ ಪೊಲೀಸರು ಬೆಂಗಳೂರು ಮೂಲದ ಯುವತಿ ಹಾಗೂ ಶ್ರೀನಿವಾಸ್ ಎನ್ನುವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಒಟ್ಟಿನಲ್ಲಿ ಯುವತಿ ಹಾಗೂ ರಂಗನಾಥ್​ ಪರಸ್ಪರ ದೂರು ದಾಖಲಿಸಿದ್ದು, ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ. ಇನ್ನು ಪೊಲೀಸರು ಈ ಪ್ರಕರಣದ ಸತ್ಯಾಸತ್ಯತೆಯನ್ನು ಕಂಡು ಹಿಡಿಬೇಕಿದೆ.

Published On - 10:19 am, Fri, 17 November 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ