ಶಾಂತಿನಗರದಲ್ಲಿ ಭೀಕರ ಅಪಘಾತ: ಬೈಕ್ ಸವಾರರ ಪಾಲಿಗೆ ಯಮನಾದ ಆ್ಯಂಬುಲೆನ್ಸ್
ವೇಗವಾಗಿ ಬಂದ ಆ್ಯಂಬುಲೆನ್ಸ್ ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಸ್ಥಳದಿಂದ ಆಂಬ್ಯುಲೆನ್ಸ್ ಚಾಲಕ ಪರಾರಿಯಾಗಿದ್ದಾನೆ.
ಬೆಂಗಳೂರು, ನವೆಂಬರ್ 02: ನಗರದ ಶಾಂತಿನಗರ ಬಸ್ ನಿಲ್ದಾಣ ಬಳಿ ಭೀಕರ ಅಪಘಾತ (Accident) ನಡೆದಿದ್ದು, ವೇಗವಾಗಿ ಬಂದ ಆ್ಯಂಬುಲೆನ್ಸ್ 2 ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತ ದುರ್ದೈವಿಗಳನ್ನ ಬೈಕ್ನಲ್ಲಿದ್ದ ಇಸ್ಮಾಯಿಲ್(40) ಮತ್ತು ಸಮೀನ ಬಾನು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೆಡ್ ಸಿಗ್ನಲ್ ಇದ್ದ ಕಾರಣ ನಿಂತಿದ್ದ ಬೈಕ್ ಸವಾರರಿಗೆ ರಿಚ್ಮಂಡ್ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. 50 ಮೀಟರ್ ದೂರ ಬೈಕ್ಗಳನ್ನ ಆಂಬ್ಯುಲೆನ್ಸ್ ಎಳೆದೊಯ್ದಿದ್ದು, ಬಳಿಕ ಪೊಲೀಸ್ ಚೌಕಿಗೆ ಗುದ್ದಿದೆ. ಅಪಘಾತ ಬಳಿಕ ಸ್ಥಳದಿಂದ ಆಂಬ್ಯುಲೆನ್ಸ್ ಚಾಲಕ ಪರಾರಿಯಾಗಿದ್ದಾನೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 02, 2025 06:35 AM