AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಸಾವು | ಟ್ಯಾಂಕರ್-ಟಾಟಾ ಏಸ್ ನಡುವೆ ಅಪಘಾತ ಓರ್ವ ಸಾವು

ವಿಜಯಪುರದಲ್ಲಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಆತಹತ್ಯೆ‌ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. 

ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಸಾವು | ಟ್ಯಾಂಕರ್-ಟಾಟಾ ಏಸ್ ನಡುವೆ ಅಪಘಾತ ಓರ್ವ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:May 27, 2022 | 12:40 PM

Share

ವಿಜಯಪುರ: ವಿಜಯಪುರದಲ್ಲಿ (Vijayapura) ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಆತಹತ್ಯೆ‌ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ.  ಜಿಲ್ಲೆಯ ನಿಡಗುಂದಿ ತಾಲೂಕಿನ ವಂದಾಲ ಗ್ರಾಮದ ಬಳಿ ಘಟನೆ ನಡೆದಿದೆ. ಮೃತಪಟ್ಟ ಯುವಕನ ಹೆಸರು‌ ವಿಳಾಸ ಲಭ್ಯವಾಗಿಲ್ಲ. ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ಯಾಂಕರ್-ಟಾಟಾ ಏಸ್ ನಡುವೆ ಅಪಘಾತ ಓರ್ವ ಸಾವು

ಧಾರವಾಡ:  ಟ್ಯಾಂಕರ್-ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರು ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅರೇಕುರಹಟ್ಟಿ ಬಳಿ ನಡೆದಿದೆ.  ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಟ್ಯಾಂಕರ್ ಹುಬ್ಬಳ್ಳಿಯಿಂದ ಬಾಗಲಕೋಟ ಕಡೆಗೆ ಹೋಗುತ್ತಿತ್ತು.  ನರಗುಂದಿಂದ ಹುಬ್ಬಳ್ಳಿ ಕಡೆಗೆ  ಟಾಟಾ ಏಸ್  ಹೋಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನು ಓದಿ: ಕನ್ನಡ ಹಾಡು ಹಾಕಿದ್ದಕ್ಕೆ ಬೈಕ್ಗೆ ಬೆಂಕಿ ಹಚ್ಚಿ ಹಲ್ಲೆ ನಡೆಸಿ ಎಂಇಎಸ್ ಗೂಂಡಾಗಳ ಪುಂಡಾಟ; 10 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

ಮೈಸೂರು:  ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರದನಹಳ್ಳಿಯ ಸಂಘದ ಕಟ್ಟಡದಲ್ಲಿ ವೆಂಕಟೇಶ್(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿಯಲ್ಲಿ ಘಟನೆ ನಡೆದಿದೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಪೊಲೀಸರ ವಿಚಾರಣೆ ಅಂಜಿ ವ್ಯಕ್ತಿಯೋರ್ವ ಆತ್ಮಹತ್ಯೆ; ಪೊಲೀಸ ಠಾಣೆ ಎದುರು ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ಸಾವು

ಬೆಳಗಾವಿ:  ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಚಾಲಕ ಅದಗೊಂಡುಬಾಬು ಪಾಟೀಲ್‌(60), ಪತ್ನಿ ಛಾಯಾ(55) ಚಂಪಾತಾಯಿ ಮಗದುಮ್(80), ಮಹೇಶ್ ಪಾಟೀಲ್(23) ಮೃತ ದುರ್ದೈವಿಗಳು. ನಿಪ್ಪಾಣಿಯಿಂದ ಸ್ಥವನಿಧಿಗೆ ಮದುವೆಗೆ ತೆರಳುತ್ತಿದ್ದರು. ಬೆಳಗಾವಿಯಿಂದ ನಿಪ್ಪಾಣಿ ಕಡೆಗೆ ಲಾರಿ ಬರುತ್ತಿತ್ತು. ಈ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಗೆ  ಲಾರಿ ಡಿಕ್ಕಿ ಹೊಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ  ಅಪಘಾತ ಸಂಭವಿಸಿದೆ. ನಿಪ್ಪಾಣಿ ಶಹರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Fri, 27 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್