AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿ ಬೆಟ್ಟದಲ್ಲಿ ಶೀಘ್ರವೇ ರೋಪ್‌ ವೇ: ಯಾವೆಲ್ಲಾ ವ್ಯವಸ್ಥೆಗಳು ಇರಲಿವೆ ಗೊತ್ತಾ?

Nandi Hills Rope Way: ಸೌಕರ್ಯ ಪ್ರಖ್ಯಾತ ಪ್ರವಾಸಿ ಸ್ಥಳ ನಂದಿ ಹಿಲ್ಸ್‌ ನಲ್ಲಿ ಬಹುನಿರೀಕ್ಷಿತ ರೋಪ್ ವೇ ನಿರ್ಮಾಣ ಕಾರ್ಯ ಶೀಘ್ರವೇ ಆರಂಭವಾಗಲಿದೆ. ಪಿಪಿಪಿ ಮಾದರಿಯಲ್ಲಿ ನಿರ್ಮಾಣಕ್ಕೆ ಸಹಿ ಹಾಕಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ. ಹಾಗಾದ್ರೆ, ಪ್ರವಾಸಿಗರಿಗೆ ಓಡಾಡಲು ರೋಪ್ ವೇ ಯಾವಾಗ ಸಿದ್ಧವಾಗಲಿದೆ? ಯಾವೆಲ್ಲಾ ವ್ಯವಸ್ಥೆ ಇರಲಿದೆ ಎನ್ನುವ ವಿವರ ಇಲ್ಲಿದೆ.

ನಂದಿ ಬೆಟ್ಟದಲ್ಲಿ ಶೀಘ್ರವೇ ರೋಪ್‌ ವೇ: ಯಾವೆಲ್ಲಾ ವ್ಯವಸ್ಥೆಗಳು ಇರಲಿವೆ ಗೊತ್ತಾ?
ನಂದಿ ಬೆಟ್ಟದಲ್ಲಿ ಶೀಘ್ರವೇ ಬರಲಿದೆ ಕೇಬಲ್ ಕಾರ್
ಭಾವನಾ ಹೆಗಡೆ
|

Updated on: Oct 14, 2025 | 3:30 PM

Share

ಚಿಕ್ಕಬಳ್ಳಾಪುರ,ಅಕ್ಟೋಬರ್ 14: ನಂದಿ ಬೆಟ್ಟಕ್ಕೆ (Nandi Hills) ಭೇಟಿ ನೀಡುವ ಪ್ರವಾಸಿಗರಿಗೆ ಶೀಘ್ರದಲ್ಲೇ ಆಕರ್ಷಕ ಕೇಬಲ್ ಕಾರ್ ಸವಾರಿ ಅನುಭವಿಸಲು ಅವಕಾಶ ಸಿಗಲಿದೆ. 2.9 ಕಿಲೋಮೀಟರ್ ಉದ್ದದ ರೋಪ್‌ ವೇ ಯೋಜನೆ (Ropeway Project) ಯಾವುದೇ ವಿಳಂಬವಿಲ್ಲದಿದ್ದರೆ, ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ ಆರಂಭದಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದ್ದು, 2027ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಅನುಮೋದನೆಗಾಗಿ ಕಾಯುತ್ತಿರುವ ಪ್ರವಾಸೋದ್ಯಮ ಇಲಾಖೆ

ಮೇಲಿನ ಟರ್ಮಿನಲ್‌ಗಾಗಿ ಅಗತ್ಯವಿರುವ ಸುಮಾರು 3.5 ಎಕರೆ ಖಾಸಗಿ ಭೂಮಿ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ನವೆಂಬರ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭೂಮಿಯನ್ನು ಹಸ್ತಾಂತರಿಸುವ ಸಾಧ್ಯತೆಯಿದೆ. ಕೆಳ ಟರ್ಮಿನಲ್‌ಗಾಗಿ ಭೂಮಿಯನ್ನು ಈಗಾಗಲೇ ಸ್ವಾಧೀನಪಡಿಸಲಾಗಿದೆ. ಉಳಿದ ಭೂಮಿಯನ್ನು ಪಡೆದ ನಂತರ ನಿರ್ಮಾಣ ಚುರುಕುಗೊಳ್ಳುವ ನಿರೀಕ್ಷೆಯಿದೆ.ಮೇಲ್ಭಾಗದ ಟರ್ಮಿನಲ್ ಸೈಟ್ ಭೂಮಿಯು ಖಾಸಗೀ ಮಾಲಿಕತ್ವದ್ದಾಗಿದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆಯೊಂದಿಗೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಡೈನಾಮಿಕ್ಸ್ ರೋಪ್‌ ವೇ ಪ್ರೈವೇಟ್ ಲಿಮಿಟೆಡ್ ವತಿಯಿಂದ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ನಿರ್ಮಾಣ ಕಾರ್ಯ ಮುಂದುವರಿಯುವ ಮೊದಲು ವಿವಿಧ ಸರ್ಕಾರಿ ಇಲಾಖೆಗಳಿಂದ ಹಲವಾರು ಅನುಮೋದನೆಗಳು ಬೇಕಾಗುತ್ತವೆ. ಇವುಗಳಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (KSPCB) ಪರಿಸರ ಅನುಮತಿಯೂ ತೆಗೆದುಕೊಳ್ಳಬೇಕಾಗುತ್ತದೆ.

ಈ ವರ್ಷದ ಅಂತ್ಯಕ್ಕೆ ರೋಪ್ ವೇ ಸಿವಿಲ್ ಕಾರ್ಯಾರಂಭ

ಎಲ್ಲವೂ ಯೋಜನೆಯಂತೆ ನಡೆದರೆ, ಈ ವರ್ಷದ ಅಂತ್ಯದ ವೇಳೆಗೆ ಅಥವಾ ಮುಂದಿನ ವರ್ಷದ ಆರಂಭದ ಸಮಯಕ್ಕೆ ಸಿವಿಲ್ ಕೆಲಸಗಳು ಪ್ರಾರಂಭವಾಗುವ ನಿರೀಕ್ಷೆಯಿದೆ. ನಿರ್ಮಾಣಕ್ಕೆ ಸುಮಾರು 18 ತಿಂಗಳುಗಳ ಕಾಲಮಿತಿ ನಿಗದಿಪಡಿಸಲಾಗಿದ್ದು, 2027 ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳುವ ಗುರಿಯನ್ನು ಹೊಂದಿದೆ. ದಶಕಗಳಿಂದ ಲಿಖಿತ ಸ್ವರೂಪದಲ್ಲೇ ಇದ್ದ 2.9 ಕಿಲೋಮೀಟರ್ ಉದ್ದದ ರೋಪ್‌ ವೇ, 2023 ರಲ್ಲಿ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಂಕುಸ್ಥಾಪನೆ ಮಾಡಿದ ನಂತರ ಅಂತಿಮವಾಗಿ ಪ್ರಗತಿ ಕಂಡಿತು.

ಕೆಳ ಟರ್ಮಿನಲ್‌ನಲ್ಲಿ 200 ಕಾರುಗಳು, 110 ದ್ವಿಚಕ್ರ ವಾಹನಗಳು ಮತ್ತು ಬಸ್‌ಗಳು, ವ್ಯಾನ್‌ಗಳಿಗಾಗಿ ಪಾರ್ಕಿಂಗ್ ವ್ಯವಸ್ಥೆ ಇರುವ ನಿರೀಕ್ಷೆಯಿದೆ. 600 ಜನರಿಗೆ ಅವಕಾಶ ಕಲ್ಪಿಸುವ ವಿಶಾಲ ಪ್ರದೇಶವೂ ಯೋಜನೆಯ ಭಾಗವಾಗಿದೆ. ಸುಮಾರು 50 ಕ್ಯಾಬಿನ್‌ಗಳೊಂದಿಗೆ ಕಾರ್ಯನಿರ್ವಹಿಸಲಿರುವ ಈ ರೋಪ್‌ ವೇ ಸವಾರಿಗೆ ಬೆಟ್ಟಗಳ ನೈಸರ್ಗಿಕ ಸೌಂದರ್ಯದ ನೋಟದ ಅವಕಾಶ ಕಲ್ಪಿಸಲಿದೆ. ಪ್ರವಾಸೋದ್ಯಮ ಮತ್ತು ಸಂಪರ್ಕಕ್ಕೆ ಉತ್ತೇಜನ ನೀಡುವ ಈ ಯೋಜನೆ, ನಂದಿ ಬೆಟ್ಟದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತಾ ಪ್ರವಾಸಿಗರಿಗೆ ಹೊಸ ಅನುಭವವನ್ನುನೀಡಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ