AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿಪಥ್ ಯೋಜನೆ ಖಂಡಿಸಿ ಜೂನ್ 20ರಂದು ಬೆಳಗಾವಿ ಬಂದ್​ಗೆ ಕರೆ!

ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಮುಂಬೈ ಹೆದ್ದಾರಿ ತಡೆದು ಧರಣಿ ನಡೆಸಲು ಯಮಕನಮರಡಿ ಮತ್ತು ಗೋಕಾಕ್ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಯುವಕರು ನಿರ್ಧಾರ ಮಾಡಿದ್ದಾರೆ.

ಅಗ್ನಿಪಥ್ ಯೋಜನೆ ಖಂಡಿಸಿ ಜೂನ್ 20ರಂದು ಬೆಳಗಾವಿ ಬಂದ್​ಗೆ ಕರೆ!
ಬೆಳಗಾವಿಯಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದಾರೆ
TV9 Web
| Updated By: sandhya thejappa|

Updated on:Jun 18, 2022 | 3:06 PM

Share

ಬೆಳಗಾವಿ: ಅಗ್ನಿಪಥ್ ಯೋಜನೆ (Agneepath Project) ಖಂಡಿಸಿ ಜೂನ್ 20ರಂದು ಬೆಳಗಾವಿ ಬಂದ್​ಗೆ ಕರೆ ನೀಡಲಾಗಿದೆ. ಬಂದ್ಗೆ ಕರೆ ನೀಡಿರುವ ಯುವಕರು, ಹೆದ್ದಾರಿ ತಡೆದು ಪ್ರತಿಭಟನೆ (Protest) ಮಾಡಲು ನಿರ್ಧರಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಮುಂಬೈ ಹೆದ್ದಾರಿ ತಡೆದು ಧರಣಿ ನಡೆಸಲು ಯಮಕನಮರಡಿ ಮತ್ತು ಗೋಕಾಕ್ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಯುವಕರು ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಟಿವಿ9ಗೆ ಹೇಳಿಕೆ ನೀಡಿರುವ ಶಾಸಕಿ ಅಂಜಲಿ ನಿಂಬಾಳ್ಕರ್, ಜೂನ್ 20ರಂದು ಬೆಳಗಾವಿ ಜಿಲ್ಲೆಯ ಖಾನಾಪುರ ಬಂದ್ಗೆ ಕರೆ ನೀಡಲಾಗಿದೆ. ಕೇಂದ್ರ ಸರ್ಕಾರ ಯಾವುದೇ ಉದ್ಯೋಗವನ್ನು ಸೃಷ್ಟಿಸುತ್ತಿಲ್ಲ. ಅಗ್ನಿಪಥ್ ಯೋಜನೆ ಜಾರಿಗೆ ತಂದು ನಮ್ಮ ತಾಲೂಕಿನ 3 ಸಾವಿರ ಯುವಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಯೋಜನೆ ಜಾರಿ ಆಗಲು ಬಿಡಲ್ಲ. ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ ಎಂದರು.

ಇಂದು ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್​ ಕಚೇರಿ ಮುಂದೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ. ಧರಣಿಯಲ್ಲಿ ಯುವಕರು ರಸ್ತೆಯಲ್ಲೇ ಡಿಪ್ಸ್​​ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಭಾಗಿಯಾಗಿದ್ದರು. ತಾಲೂಕು ಕ್ರೀಡಾಂಗಣದಿಂದ ತಹಶೀಲ್ದಾರ್​ ಕಚೇರಿವರೆಗೆ ಱಲಿ ನಡೆಸಿದರು. ಈ ಸಂದರ್ಭದಲ್ಲಿ ಯುವಕರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಧರಣಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ 1 ಡಿಎಸ್​ಪಿ, 4 ಸಿಪಿಐ, 4 ಪಿಎಸ್​ಐ, 50 ಸಿಬ್ಬಂದಿ, ಡಿಆರ್ ವ್ಯಾನ್ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ
Image
ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
Image
NEET PG 2022: ನೀಟ್ ಪರೀಕ್ಷೆ ಮುಂದೂಡಲು ಆರೋಗ್ಯ ಸಚಿವರಿಗೆ ಐಎಂಎ ಮನವಿ
Image
Sarkaru Vaari Paata Review: ಒಂದೊಳ್ಳೆಯ ಕಥೆಗೆ ಬೇಕಿತ್ತು ಇನ್ನಷ್ಟು ಒಳ್ಳೆಯ ಟ್ರೀಟ್​ಮೆಂಟ್
Image
ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಇದನ್ನೂ ಓದಿ: ವಿಶ್ವಪ್ರಸಿದ್ಧ ಮೈಸೂರು ಪಾಕನ್ನು ಪ್ರಧಾನಿ ಮೋದಿಯವರಿಗೆ ತಿನ್ನಿಸಿ ಅದರ ಇತಿಹಾಸ ತಿಳಿಸುವ ಆಸೆ ಅದನ್ನು ಕಂಡುಹಿಡಿದ ಕುಟುಂಬಕ್ಕಿದೆ

ರಾಯಚೂರಿನಲ್ಲಿ ಸರ್ಪಗಾವಲು: ಬಿಹಾರ್, ತೆಲಂಗಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರಿಂದ ರಾಯಚೂರು ನಗರ ರೈಲ್ವೆ ನಿಲ್ದಾಣದಲ್ಲಿ ಖಾಕಿಯಿಂದ ಸರ್ಪಗಾವಲು ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಭದ್ರತೆಗೆ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿ, ರೈಲು ನಿಲ್ದಾಣಕ್ಕೆ ಆಗಮಿಸುವ ಅನುಮಾನಾಸ್ಪದರ ಮೇಲೆ ನಿಗಾ ವಹಿಸಲಾಗಿದೆ.

ಪ್ರತಿಭಟನೆಗೆ ಮುಂದಾಗಿದ್ದ 230ಕ್ಕೂ ಹೆಚ್ಚು ಯುವಕರು ವಶಕ್ಕೆ: ಧಾರವಾಡದಲ್ಲೂ ಬಸ್ ಗಾಜು ಒಡೆದು ಧರಣಿ ನಡೆಸಲು ಮುಂದಾಗಿದ್ದ, 25ಕ್ಕೂ ಹೆಚ್ಚು ಯುವಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹು-ಧಾ ಪೊಲೀಸ್ ಕಮಿಷನರ್​​ ಲಾಬೂರಾಮ್, ಪ್ರಕರಣ ಸಂಬಂಧ ಒಟ್ಟು 30 ಜನರನ್ನು ವಶಕ್ಕೆ ಪಡೆಯಲಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sat, 18 June 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​