AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಬಂಡಾಯ ಅಭ್ಯರ್ಥಿ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್​​ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಿಕಾರಿಪುರದಲ್ಲಿ ಮಾ.24ರಂದು ನಿಯಮ ಮೀರಿ ಬೈಕ್‌ ರ್‍ಯಾಲಿ ನಡೆಸಿದ್ದರು. ಈ ಹಿನ್ನೆಲೆ ಚುನಾವಣಾಧಿಕಾರಿ ದೂರಿನ ಮೇರೆಗೆ ಈಶ್ವರಪ್ಪ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

ಶಿವಮೊಗ್ಗ ಬಂಡಾಯ ಅಭ್ಯರ್ಥಿ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು
K.S.ಈಶ್ವರಪ್ಪ
Basavaraj Yaraganavi
| Edited By: |

Updated on:Mar 27, 2024 | 9:30 PM

Share

ಶಿವಮೊಗ್ಗ, ಮಾರ್ಚ್​​ 27: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್​​ ಈಶ್ವರಪ್ಪ (KS Eshwarappa) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಿಕಾರಿಪುರದಲ್ಲಿ ಮಾ.24ರಂದು ನಿಯಮ ಮೀರಿ ಬೈಕ್‌ ರ್‍ಯಾಲಿ ನಡೆಸಿದ್ದರು. 10 ಬೈಕ್‌, ಒಂದು ಜೀಪ್‌ಗೆ ಮಾತ್ರ ಅನುಮತಿ ಪಡೆದಿದ್ದರು. ಆದರೆ ರ್‍ಯಾಲಿಯಲ್ಲಿ 50ಕ್ಕೂ ಹೆಚ್ಚು ಬೈಕ್‌ಗಳು, 4 ಕಾರು ಭಾಗಿ ಹಿನ್ನೆಲೆ ಚುನಾವಣಾಧಿಕಾರಿ ದೂರಿನ ಮೇರೆಗೆ ಈಶ್ವರಪ್ಪ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಬೈಕ್‌ಗಳ ಮೇಲೆ ಓಂ ಬಾವುಟ ಕಟ್ಟಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.

ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಬಿಡುಗಡೆ ಬೆನ್ನಲ್ಲೇ ಪಕ್ಷದೊಳಗೆ ಟಿಕೆಟ್ ವಂಚಿತರ ವಿರುದ್ಧ ಆಕ್ರೋಶ ಸ್ಫೋಟಗೊಂಡಿದೆ. ಅದ್ರಲ್ಲೂ ಪುತ್ರನಿಗೆ ಟಿಕೆಟ್ ಮಿಸ್ ಆದ್ಮೇಲೆ, ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಅಕ್ಷರಶಃ ಆಕ್ರೋಶ ಹೊರಹಾಕಿದ್ದರು. ತಮ್ಮ ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲು ಇತ್ತೀಚೆಗೆ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ನಡೆಸಿದ ಈಶ್ವರಪ್ಪ ಮಹತ್ವದ ನಿರ್ಣಯ ಕೈಗೊಂಡಿದ್ದರು. ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯೋದಾಗಿ ಘೋಷಿಸಿದ್ದರು. ಪ್ರಾಣಹೋದ್ರೂ ಮೋದಿ ವಿರುದ್ಧ ಹೋಗಲ್ಲ ಎನ್ನುತ್ತಲೇ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ್ದರು.

ಇದನ್ನೂ ಓದಿ: ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ: ವಿಜಯೇಂದ್ರ ಕ್ಷೇತ್ರದಲ್ಲಿ ಗುಡುಗಿದ ಕೆಎಸ್ ಈಶ್ವರಪ್ಪ

ಇನ್ನು ಟಿವಿ9 ಸಂದರ್ಶನದಲ್ಲಿ ಮಾತನಾಡಿರುವ ಈಶ್ವರಪ್ಪ ಮೋದಿ ಬಂದು ಹೇಳಿದ್ರು, ನಾನು ಹಿಂದೆ ಸರಿಯಲ್ಲ ಸ್ಪರ್ಧೆ ಮಾಡೇ ಮಾಡ್ತೀನಿ ಎಂದಿದ್ದರು. ಅಷ್ಟೇ ಅಲ್ಲ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಮತ್ತೆ ಗುಡುಗಿದ್ದಾರೆ. ಅತ್ತ ವಿಜಯೇಂದ್ರ, ಈಶ್ವರಪ್ಪ ಮಾತಿಗೆ ತಿರುಗೇಟು ನೀಡಿದ್ದರು.

ಇದನ್ನೂ ಓದಿ: ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್; ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧೆ ಖಚಿತ ಎಂದ ಈಶ್ವರಪ್ಪ

ಲೋಕಸಭೆ ಚುನಾವಣೆಗೆ ಈಗಾಗಲೇ ಮೂಹೂರ್ತ ಫಿಕ್ಸ್ ಆಗಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕಾಗಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಕಣಕ್ಕೆ ನಿಂತಿರುವುದು ಸದ್ಯ ಬಿಜೆಪಿ ಪಾಳಯದಲ್ಲಿ ಸಂಚಲ ಮೂಡಿಸಿದೆ. ಈಶ್ವರಪ್ಪ ಅವರ ನಡೆಯಿಂದ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಕುಟುಂಬಕ್ಕೆ ತೀವ್ರ ಮುಜುರವಾಗುತ್ತಿದೆ. ಅಷ್ಟಕ್ಕೂ ಈಶ್ವರಪ್ಪ ಅವರನ್ನು ಕಟ್ಟಿಹಾಕುವುದು ಹೇಗೆ ಅಂತಾ ರಾಜ್ಯ ಬಿಜೆಪಿ ನಾಯಕರು ತಲೆಯಲ್ಲಿ ಹುಳು ಬಿಟ್ಟಿಕೊಂಡಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:24 pm, Wed, 27 March 24

Follow Us
Basavaraj Yaraganavi
Basavaraj Yaraganavi
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ