ಅಪಘಾತದಲ್ಲಿ ಮೃತಪಟ್ಟ ಮೂವರು KSRTC ನೌಕರರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ವಿತರಣೆ

ಅಪಘಾತದಲ್ಲಿ ಮೃತಪಟ್ಟ ಕೆಎಸ್​ಆರ್​ಟಿಸಿಯ ಎಲ್ಲಾ ಸಿಬ್ಬಂದಿಗಳ ಕುಟುಂಬದ ಸದಸ್ಯರನ್ನು ಹೊಸ ವರ್ಷದ ಅಂಗವಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಗೌರವಿಸಿದರು. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ ಮಾಡಿದರು. ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು 12 ಸಿಬ್ಬಂದಿಯ ಅವಲಂಬಿತರಿಗೆ ತಲಾ 1 ಕೋಟಿ ರೂ. ಪರಿಹಾರದ ಮೊತ್ತವನ್ನು ಪಾವತಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟ ಮೂವರು KSRTC ನೌಕರರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ವಿತರಣೆ
ಅಪಘಾತದಲ್ಲಿ ಮೃತಪಟ್ಟ ಮೂವರು KSRTC ನೌಕರರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ವಿತರಣೆ
Follow us
TV9 Web
| Updated By: Rakesh Nayak Manchi

Updated on: Jan 01, 2024 | 3:29 PM

ಬೆಂಗಳೂರು, ಜ.1: ಅಪಘಾತದಲ್ಲಿ (Accident) ಮೃತಪಟ್ಟ ಕೆಎಸ್​ಆರ್​ಟಿಸಿ (KSRTC) ನೌಕರರ ಕುಟುಂಬದ ಸದಸ್ಯರನ್ನು ಹೊಸ ವರ್ಷದ ಅಂಗವಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ಇಂದು ಗೌರವಿಸಿದರು. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ ಮಾಡಿದರು. ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು 12 ಸಿಬ್ಬಂದಿಯ ಅವಲಂಬಿತರಿಗೆ ತಲಾ 1 ಕೋಟಿ ರೂ. ಪರಿಹಾರದ ಮೊತ್ತವನ್ನು ಪಾವತಿಸಲಾಗಿದೆ.

ಮೃತ ಅವಲಂಬಿತರ ಕುಟುಂಬದವರಿಗೆ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ. ಕೋಟಿ ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು‌ ನಡೆಸಬಹುದಾಗಿದೆ ಎಂದರು.

ಈ ಹಿಂದೆ ಅಪಘಾತ ಸೇರಿದಂತೆ ಇತರ ಕಾರಣಗಳಿಂದ ಮೃತಪಟ್ಟ ಕುಟುಂಬದವರಿಗೆ 3 ಲಕ್ಷ ರೂ.ಗಳನ್ನು ಮಾತ್ರ ನೀಡಲಾಗುತ್ತಿತ್ತು. ಸಾರಿಗೆ ಸುರಕ್ಷಾ ಅಪಘಾತ ವಿಮಾ ಪರಿಹಾರ ಯೋಜನೆ ನಿಗಮದಲ್ಲಿ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅದೇರೀತಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಹೆಚ್ಚಿನ ಮೊತ್ತದ ಆರ್ಥಿಕ ಪರಿಹಾರ ಒದಗಿಸುವ ಮೂಲಕ ಅವರ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ 50 ಲಕ್ಷ (ಯುನೈಟೆಡ್ ಇಂಡಿಯಾ ಇನ್ಸುರೆನ್ಸ್) ಹಾಗೂ SBI Corporate Salary Package ಅಡಿಯಲ್ಲಿ 50 ಲಕ್ಷ ರೂ. ನೀಡಲಾಗುತ್ತಿದೆ.

ಇದನ್ನೂ ಓದಿ: ಶಿವಮೊಗ್ಗ: ಬರ್ತ್‌ಡೇ ಆಚರಿಸಿಕೊಳ್ಳಲು ಬೈಕ್​ ಮೇಲೆ ತೆರಳುತ್ತಿದ್ದವರು ಅಪಘಾತಕ್ಕೆ ಬಲಿ

  • ಈ ಯೋಜನೆ ಅಡಿಯಲ್ಲಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟ ನೌಕರರ ನಾಮನಿರ್ದೇಶಿತರಿಗೆ ಒಟ್ಟು 1 ಕೋಟಿ ರೂ. ಅಪಘಾತ ವಿಮಾ ಮೊತ್ತವನ್ನು ನೀಡಲಾಗುತ್ತದೆ.
  • ಸಾರಿಗೆ ನಿಗಮಗಳಲ್ಲಿ ದೇಶದಲ್ಲಿಯೇ ಈ ಯೋಜನೆಯನ್ನು ಪ್ರಥಮ ಬಾರಿಗೆ ಕರಾರಸಾ ನಿಗಮದಲ್ಲಿ ಜಾರಿಗೊಳಿಸಲಾಗಿತ್ತು,‌ ನಂತರ ಇತರೆ ನಿಗಮಗಳಲ್ಲಿಯೂ ಜಾರಿಗೆಗೊಳಿಸಲಾಗಿದೆ.
  • ಈ ಯೋಜನೆ ಜಾರಿ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ.
  • ಇದುವರೆವಿಗೂ 9 ನೌಕರರ ಕುಟುಂಬದವರಿಗೆ ತಲಾ 1 ಕೋಟಿ ರೂ.ಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ.
  • ಇದೀಗ ಮೃತಪಟ್ಟ ಮೂವರು ನೌಕರರ ಅವಲಂಬಿತರಿಗೆ 1 ಕೋಟಿ ರೂ.ಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ.

ಮೃತಪಟ್ಟ ಸಿಬ್ಬಂದಿ ವಿವರ

ಮೈಸೂರು ವಿಭಾಗದ ವಿಜಯನಗರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಬಿ.ಎಂ ಪುಟ್ಟಸ್ವಾಮಿ ಅವರು 2023ರ ಜನವರಿ 25 ರಂದು ಬೈಕ್ ಮತ್ತು ಕಾರು ನಡುವಿನ ಅಪಘಾತದಲ್ಲಿ ಮೃತಪಟ್ಟಿದ್ದರು. ಪುಟ್ಟಸ್ವಾಮಿ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು. ಇವರು ಸಾರಿಗೆ ಇಲಾಖೆಯಲ್ಲಿ 26 ವರ್ಷಗಳ ಸೇವೆಯನ್ನು ಸಲ್ಲಿಸಿದ್ದು ಪತ್ನಿ ಹಾಗೂ ಮೂವರು ಮಕ್ಕಳನ್ನು ಹೊಂದಿದ್ದರು. ಇವರ ಕುಟುಂಬಕ್ಕೆ ಅಪಘಾತ ವಿಮಾ ಯೋಜನೆಯ 1 ಕೋಟಿ ರೂ. ಹಾಗೂ ಉಪದಾನ, ಭವಿಷ್ಯ ನಿಧಿ, ರಜೆ ನಗದೀಕರಣ, ನೌಕರರ ಕುಟುಂಬ ಕಲ್ಯಾಣ ಯೋಜನೆ, DRBF, ಗುಂಪು ವಿಮಾ ಯೋಜನೆ ಇತ್ಯಾದಿಗಳಿಂದ 18.74 ಲಕ್ಷ ರೂ. ವಿತರಿಸಲಾಗಿದೆ.

ಪುತ್ತೂರು ವಿಭಾಗದ ಧರ್ಮಸ್ಥಳ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಅಶೋಕ್ ಕುಮಾರ್, 2023ರ ಮೇ 24 ರಂದು ಅಪಘಾತದಲ್ಲಿ ಮೃತಪಟ್ಟಿದ್ದರು. ಅಶೋಕ್ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು. ಇವರು 12 ವರ್ಷಗಳ ಸೇವೆಯನ್ನು ಸಲ್ಲಿಸಿದ್ದು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಇವರ ಕುಟುಂಬಕ್ಕೆ ಅಪಘಾತ ವಿಮಾ ಯೋಜನೆಯ 1 ಕೋಟಿ ರೂ. ಹಾಗೂ ಉಪದಾನ, ಭವಿಷ್ಯ ನಿಧಿ, ರಜೆ ನಗದೀಕರಣ, ನೌಕರರ ಕುಟುಂಬ ಕಲ್ಯಾಣ ಯೋಜನೆ, DRBF, ಗುಂಪು ವಿಮಾ ಯೋಜನೆ ಇತ್ಯಾದಿಗಳಿಂದ 21.01 ಲಕ್ಷ ರೂ. ವಿತರಿಸಲಾಗಿದೆ.

ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-5ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ-ಕಂ-ನಿರ್ವಾಹಕ ರಮೇಶ ಜಿ. 2023ರ ಜೂನ್ 28 ರಂದು ಅಪಘಾತದಲ್ಲಿ ಮೃತಪಟ್ಟಿದ್ದರು. ಮಡಿಕೇರಿ-ಬೆಂಗಳೂರು ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಇವರು 20 ವರ್ಷಗಳ ಸೇವೆಯನ್ನು ಸಲ್ಲಿಸಿದ್ದು ಪತ್ನಿ ಹಾಗೂ ಒಬ್ಬ ಮಗನನ್ನು ಹೊಂದಿದ್ದರು. ಇವರ ಕುಟುಂಬಕ್ಕೆ 1 ಕೋಟಿ ರೂ. ಹಾಗೂ ಉಪದಾನ, ಭವಿಷ್ಯ ನಿಧಿ, ರಜೆ ನಗದೀಕರಣ, ನೌಕರರ ಕುಟುಂಬ ಕಲ್ಯಾಣ ಯೋಜನೆ, ಗುಂಪು ವಿಮಾ ಯೋಜನೆ ಇತ್ಯಾದಿಗಳಿಂದ 24.81 ಲಕ್ಷ ರೂ. ವಿತರಿಸಲಾಗಿದೆ.

ಪರಿಹಾರ ವಿತರಣೆ ಹಾಗೂ ಗೌರವ ಸಲ್ಲಿಕೆ ಸಮಾರಂಭದಲ್ಲಿ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿ ದೇವಿ ಕೆ., ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬ ವರ್ಗ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ