ರಾಮನಗರ: ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣು

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸಾಲದ ಸುಳಿಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಕ್ಕೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರಾಮನಗರ: ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣು
ರಾಮನಗರ: ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣು
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 10, 2024 | 9:06 PM

ರಾಮನಗರ, ಅಕ್ಟೋಬರ್​​ 10: ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ದಂಪತಿ (couple) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು(34) ಮತ್ತು ಲಕ್ಷ್ಮೀ(30) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರಾಜು ಹಾಗೂ ಲಕ್ಷ್ಮೀ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದರು. ಸದ್ಯ ದಂಪತಿ ಆತ್ಮಹತ್ಯೆಯಿಂದ ಮೂರು ವರ್ಷದ ಹೆಣ್ಣುಮಗು ಅನಾಥವಾಗಿದೆ. ಆತ್ಮಹತ್ಯೆ ರಾಜು ದಂಪತಿಯ ತಂದೆ, ತಾಯಿ ಧರ್ಮಸ್ಥಳಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: 2 ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಸುರಪುರ-ಹುನಗುಂದ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಪೀರಪ್ಪ ಮುದನೂರ(30), ಶರಣಪ್ಪ ಪರಸನಹಳ್ಳಿ(28) ಮೃತರು. ಸ್ಥಳಕ್ಕೆ ಕೆಂಭಾವಿ ಠಾಣೆ ಪಿಎಸ್​ಐ ಅಮೋಜ್ ಕಾಂಬಳೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸ್ಥಳದಲ್ಲೆ ಸಾವು

ಕಲಬುರಗಿ: ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಶಿವಪುತ್ರ ಹಾವಳಗಿ(32) ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಟ್ಯಾಂಕ್​ನಲ್ಲಿರುವ ನೀರು ಪರಿಶೀಲಿಸಲಿಸುತ್ತಿದ್ದ ವೇಳೆ ವಿದ್ಯುತ್​ ತಂತಿ ತುಳಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕಿಡಿಗೇಡಿಗಳ ಕ್ರೌರ್ಯಕ್ಕೆ ಮನೆ ಧ್ವಂಸ: ಬೀದಿಗೆ ಬಿದ್ದ ಮಹಿಳೆ​, ಆರೋಪಿಗಳು ಪರಾರಿ

ಮೃತ ಶಿವಪುತ್ರ ಕರಜಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರನಾಗಿದ್ದರು. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನುಮತಿ ಇಲ್ಲದೆ ಗ್ಯಾಸ್ ಬಳಕೆ ವಿಚಾರದಲ್ಲಿ ಗಲಾಟೆ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಅನುಮತಿ ಇಲ್ಲದೆ ಗ್ಯಾಸ್ ಬಳಸಿದ್ದಕ್ಕೆ ದೊಣ್ಣೆಯಿಂದ ಹೊಟ್ಟೆಗೆ ಹೊಡೆದು ಕಲಬುರಗಿ ಜಿಲ್ಲೆಯ ಕಾರ್ಮಿಕ ಅನಿಲ್(33) ಎಂಬಾತನನ್ನು ಕೊಲೆ ಮಾಡಿರುವಂತಹ ಘಟನೆ ಅಡಕಮಾರನಹಳ್ಳಿಯಲ್ಲಿ ನಡೆದಿದೆ. ಬಿಹಾರದ ವಿನೋದ್, ಚೇತನ್ ಸೇರಿದಂತೆ ನಾಲ್ವರಿಂದ ದುಷ್ಕೃತ್ಯವೆಸಗಲಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ ಮೇಲೆ ಪುಂಡರಿಂದ ಹಲ್ಲೆ: ರೌಡಿಶೀಟರ್ ಸೇರಿ ಮೂವರು ವಶಕ್ಕೆ

ಆರೋಪಿಗಳ ಅಡುಗೆ ಸಿಲಿಂಡರ್​ ಅನುಮತಿ ಇಲ್ಲದೆ ಬಳಸಿದ್ದಕ್ಕೆ ಅನಿಲ್​ನನ್ನು ಬರ್ಬರ ಹತ್ಯೆಗೈದು ಆರೋಪಿಗಳು ಎಸ್ಕೇಪ್​ ಆಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ