ಸೌದಿಯಲ್ಲಿ ಸಿಲುಕಿದ್ದ ದಾವಣಗೆರೆಯ ಮಹಿಳೆ ಮರಳಿ ಮನೆಗೆ
ದಾವಣಗೆರೆಯ ಆಜಾದ್ನಗರದ ಎರಡನೇ ಮುಖ್ಯರಸ್ತೆ, ಐದನೇ ಅಡ್ಡರಸ್ತೆಯ ನಿವಾಸಿ ಮಕ್ಬುಲ್ ಸಾಬ್ ಅವರ ಮಗಳು ಫೈರೋಜಾ ಮನೆಗೆ ವಾಪಸ್ಸಾಗಿದ್ದಾರೆ. ಮಕ್ಬುಲ್ ಸಾಬ್, ಜುಬೇದಾಬಿ ದಂಪತಿಗೆ ಏಳು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು.
ದಾವಣಗೆರೆ: ದುಡಿದು ಕುಟುಂಬ ನಿರ್ವಹಣೆ ಮಾಡಬೇಕು ಎಂಬ ಉದ್ದೇಶದಿಂದ ಮಹಿಳೆಯೊರ್ವಳು ಸೌದಿಗೆ ಹೋಗಿದ್ದಳು. ಬಹುತೇಕರು ಭಾರತದಿಂದ ಸಣ್ಣ ಪುಟ್ಟ ಕೆಲಸ ಹುಡುಕಿಕೊಂಡು ಸೌದಿ ಸೇರಿದಂತೆ ಬಹುತೇಕ ಕಡೆ ಹೋಗುತ್ತಾರೆ. ಆದರೆ ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಮಹಿಳೆಗೆ ಸಂಬಳ ನೀಡದೆ, ಊರಿಗೂ ಮರಳಲೂ ಬಿಡದೆ ಕೂಡಿಹಾಕಲಾಗಿತ್ತು. ಸೌದಿಯಲ್ಲಿರುವ ಕನ್ನಡಿಗರು ಮಾಡಿದ ಹೋರಾಟ, ಭಾರತ ಸರ್ಕಾರ ಮತ್ತು ಸೌದಿ ಅರೇಬಿಯಾ ಸರ್ಕಾರ ಸ್ಪಂದಿಸಿದ್ದರಿಂದ ಮಹಿಳೆ ಮರಳಿ ಮನೆ ಸೇರಿದ್ದಾಳೆ.
ದಾವಣಗೆರೆಯ ಆಜಾದ್ನಗರದ ಎರಡನೇ ಮುಖ್ಯರಸ್ತೆ, ಐದನೇ ಅಡ್ಡರಸ್ತೆಯ ನಿವಾಸಿ ಮಕ್ಬುಲ್ ಸಾಬ್ ಅವರ ಮಗಳು ಫೈರೋಜಾ ಮನೆಗೆ ವಾಪಸ್ಸಾಗಿದ್ದಾರೆ. ಮಕ್ಬುಲ್ ಸಾಬ್, ಜುಬೇದಾಬಿ ದಂಪತಿಗೆ ಏಳು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು. ಮೊದಲ ಮಗಳಾದ ಫೈರೋಜಾ ಬಾನುಗೆ 14 ವರ್ಷಗಳ ಹಿಂದೆ ಮದುವೆಯಾಗಿತ್ತು. ಮೂರು ಮಕ್ಕಳಾದ ಮೇಲೆ ಗಂಡನೂ ಬಿಟ್ಟುಹೋಗಿದ್ದ. ಹೊಟ್ಟೆಪಾಡಿಗಾಗಿ ಎರಡು ವರ್ಷಗಳ ಹಿಂದೆ ಸೌದಿ ಅರೇಬಿಯಾಕ್ಕೆ ಫೈರೋಜಾ ಬಾನು ಹೋಗಿದ್ದರು. ಬಳಿಕ ತಾಯಿ ಮೃತಪಟ್ಟಾಗ ನೋಡಲು ಕೂಡ ಕಳುಹಿಸಿಕೊಟ್ಟಿರಲಿಲ್ಲ. ವೇತನವನ್ನೂ ನೀಡಿರಲಿಲ್ಲ. ಅವರನ್ನು ಹೇಗಾದರೂ ಭಾರತಕ್ಕೆ ಕರೆಸಿ ಎಂದು ಆಕೆಯ ಸಹೋದರಿ ನಸ್ರೀನ್ ಬಾನು ಸರ್ಕಾರಕ್ಕೆ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ.
ರಿಯಾದ್ನಲ್ಲಿ ಇರುವ ಪಡುಬಿದ್ರಿಯ ಹಮೀದ್ ಸ್ಪಂದಿಸಿದ್ದರು. ಅವರಿಗೆ ದಮಾಮ್ನಲ್ಲಿ ಇರುವ ಕಲಬುರಗಿಯ ಯಾಸಿನ್ ಕೈ ಜೋಡಿಸಿದ್ದರು. ಈ ಇಬ್ಬರ ಪ್ರಯತ್ನದಿಂದ ಸೌದಿ ರಾಜಧಾನಿ ರಿಯಾದ್ನಿಂದ ಸುಮಾರು ಸಾವಿರ ಕಿಲೋಮೀಟರ್ ದೂರ ಇರುವ ಸಕಾಕಹಲ್ನಲ್ಲಿ ಫೈರೋಜಾ ಬಾನು ಇರುವುದು ಪತ್ತೆಯಾಗಿತ್ತು. ಸಕಾಕಹಲ್ನಲ್ಲಿ ಇರುವ ಕೇರಳದ ಸಲಿಂ ಎಂಬವರ ನೆರವು ಪಡೆದುಕೊಂಡು ಅಲ್ಲಿರುವ ಭಾರತದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿದ್ದರು. ಭಾರತದ ವಿದೇಶಾಂಗ ಸಚಿವಾಲಯದ ಗಮನಕ್ಕೂ ತಂದಿದ್ದರು. ಜೊತೆಗೆ ಅಲ್ಲಿ ಹ್ಯೂಮನ್ ರೈಟ್ಸ್ ಕಮಿಷನ್ನ ಗಮನಕ್ಕೆ ತರಲಾಗಿತ್ತು.
ಕೂಲಿ ಕೆಲಸ ಮಾಡಿ ಕುಟುಂಬ ನಿರ್ವಹಣೆಗೆ ಹೋಗಿದ್ದ ಮಹಿಳೆ ತಾನೇ ಸಂಕಷ್ಟದಲ್ಲಿ ಸಿಲುಕಿದ್ದಳು. ಸದ್ಯ ಹಲವಾರು ಜನರ ಸಹಕಾರದಿಂದ ಕಳೆದ ಮೂರು ದಿನಗಳ ಹಿಂದೆ ಮರಳಿ ಮನೆ ಬಂದಿದ್ದಾಳೆ.
ಇದನ್ನೂ ಓದಿ
ಚಿಕ್ಕಮಗಳೂರಿನಲ್ಲಿ ಅರ್ಚಕರಿಗೆ ಚಪ್ಪಲಿಯಿಂದ ಥಳಿತ!
ಕನ್ನಡ ಬಿಗ್ ಬಾಸ್ ಸೆಕೆಂಡ್ ಇನ್ನಿಂಗ್ಸ್ನಲ್ಲಿ ಮೊದಲು ಎಲಿಮಿನೇಟ್ ಆಗೋರು ಇವರೇನಾ?
(A Davanagere woman stranded in Saudi has returned home)
Published On - 3:30 pm, Sat, 26 June 21