ಮಂಗನ ಕಾಯಿಲೆ ಉಲ್ಭಣ ಬೆನ್ನಲ್ಲೇ ಉತ್ತರ ಕನ್ನಡದಲ್ಲಿ ಕೋತಿ ಮೃತ ದೇಹ ಪತ್ತೆ: ಹೆಚ್ಚಿದ ಆತಂಕ

ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬೆನ್ನೆಲೆ ಜಿಲ್ಲೆಯ ಶಿರಸಿ ತಾಲೂಕಿನ ನಿರ್ನಳ್ಳಿ ಗ್ರಾಮದ ರಸ್ತೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಮೃತ ದೇಹ ಪತ್ತೆ ಆಗಿದೆ. ಇದು ನಿರ್ನಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಮಂಗನ ಕಾಯಿಲೆಯಿಂದ ಜಿಲ್ಲೆಯಲ್ಲಿ ಎರಡು ತಿಂಗಳಲ್ಲಿ ಮೂವರು ಮೃತಪಟ್ಟಿದ್ದಾರೆ.

ಮಂಗನ ಕಾಯಿಲೆ ಉಲ್ಭಣ ಬೆನ್ನಲ್ಲೇ ಉತ್ತರ ಕನ್ನಡದಲ್ಲಿ ಕೋತಿ ಮೃತ ದೇಹ ಪತ್ತೆ: ಹೆಚ್ಚಿದ ಆತಂಕ
ಮಂಗನ ಮೃತ ದೇಹ ಪತ್ತೆ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 04, 2024 | 4:30 PM

ಕಾರವಾರ, ಮಾರ್ಚ್​ 4: ಸೂಕ್ತ ಲಸಿಕೆ ಇಲ್ಲದ ಹಿನ್ನೆಲೆ ರಾಜ್ಯದ ಮಲೆನಾಡು, ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ (Kyasanur Forest Disease) ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇದರ ಮಧ್ಯೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನಿರ್ನಳ್ಳಿ ಗ್ರಾಮದ ರಸ್ತೆಯಲ್ಲಿ ಮಂಗನ ಮೃತ ದೇಹ ಪತ್ತೆ ಆಗಿದೆ. ಇದು ನಿರ್ನಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಮಂಗನ ಕಾಯಿಲೆಯಿಂದ ಜಿಲ್ಲೆಯಲ್ಲಿ ಎರಡು ತಿಂಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಇದುವರೆಗೂ 47 ಜನರಲ್ಲಿ ಮಂಗನ ಕಾಯಿಲೆ ಪತ್ತೆ ಆಗಿದೆ. ಇದೀಗ ಕೊಳೆತ ಸ್ಥಿತಿಯಲ್ಲಿ ಮಂಗನ ಮೃತ ದೇಹ ಪತ್ತೆ ಆಗಿದ್ದು, ಜನರಲ್ಲಿ ಆತಂಕ ಶುರಿವಾಗಿದೆ. ಸದ್ಯ ಮಲೆನಾಡಿನ ಜನ ಭಯದಲ್ಲೆ ಜೀವನ ಸಾಗಿಸುತ್ತಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ನಾಪತ್ತೆ ಆಗಿದ್ದ ಮಂಗನ ಕಾಯಿಲೆ ಇತ್ತೀಚೆಗೆ ಮತ್ತೆ ಪತ್ತೆ ಆಗಿ ವ್ಯಾಪಕವಾಗಿ ಪಸರಿಸ ತೊಡಗಿತ್ತು. ಈ ಹಿಂದೆ ಕಾಯಿಲೆ ಬಂದಾಗ ಇಷ್ಟೊಂದು ವೇಗವಾಗಿ ಪಸರಿಸರಲಿಲ್ಲ, ಆದರೆ ಈ ಸಲ  ಮಳೆ ಕಡಿಮೆ ಆಗಿರುವುದರಿಂದ ಉಷ್ಣತೆಗೆ ರೋಗ ವೇಗವಾಗಿ ಹರಡುತ್ತಿದೆ ಎಂದು ತಜ್ಷರು ಹೇಳಿದ್ದರು.

ಮೂರು ಮಂಗಗಳ ಸಾವು

ಜನವರಿ 18 ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪೂರ ತಾಲೂಕಿನ ಜಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಂದು ಮಂಗನ ಸಾವಿನಿಂದ ಆರಂಭವಾದ ಮಂಗನ ಕಾಯಿಲೆ. ಇದುವರೆಗೂ 47 ಜನರಿಗೆ ಅಂಟಿದ್ದೂ 24 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 13 ಜನ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗ ಅಂಟಿದ 37 ಜನರು ಔಟ್ ಆಫ್ ಡೆಂಜರ್ ಇದ್ದಾರೆ. ಆದರೆ ಈಗಾಗಲೇ ಲಸಿಕೆ ಇಲ್ಲದೆ ಜನ ಆತಂಕದಲ್ಲಿ ಜೀವನ ಕಳೆಯುತ್ತಿರುವ ಬೆನ್ನಲೆ ಸಿದ್ಧಾಪೂರ ತಾಲೂಕಿನ ಕಾಂಡಂಚಿನಲ್ಲಿ ಕಳೆದ ಕೆಲ ದಿನಗಳಲ್ಲಿ ಮೂರು ಮಂಗಗಳ ಸಾವು ಇನ್ನಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿತ್ತು.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಗನ ಕಾಯಿಲೆ ರೋಗ ತಡೆ ಗಟ್ಟಲು ಸೂಕ್ತ ಲಸಿಕೆ ಇಲ್ಲ. ಈ ಹಿಂದೆ ನೀಡಲಾಗುತಿದ್ದ ಲಸಿಕೆ ಪರಿಣಾಮಕಾರಿ ಅಲ್ಲ ಹಾಗೂ ಗುಣಮಟ್ಟದ ಕಾರಣ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ( CDSCO) ಹಿಂಪಡೆದಿತ್ತು. ಹೀಗಾಗಿ ಮಂಗನಕಾಯಿಲೆಗೆ ಲಸಿಕೆ ಸಹ ಇಲ್ಲದಿರುವುದರಿಂದ ಜಿಲ್ಲಾ ಆರೋಗ್ಯ ಇಲಾಖೆ ಸೊಳ್ಳೆ, ಉಣಗು, ತಿಗಣೆಗಳು ಕಚ್ಚದಂತೆ ತಡೆಯುವ ಡಿ.ಎಮ್.ಪಿ ಆಯಲ್​​ನನ್ನು ಮಾತ್ರ ಜನರಿಗೆ ನೀಡುವುದರ ಜೊತೆಗೆ ಅರಣ್ಯ ಪ್ರದೇಶಕ್ಕೆ ಹೆಚ್ಚಗೆ ಹೋಗದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆರೋಗ್ಯ ಇಲಾಖೆ ಮಾಡಿದೆ.

ಇದನ್ನೂ ಓದಿ: ಮಂಗನ ಕಾಯಿಲೆಗೆ ವೃದ್ಧ ಬಲಿ: ಆರೋಗ್ಯ ಇಲಾಖೆ ಹೈಅಲರ್ಟ್, ಮನೆ ಮನೆಗೆ ತೆರಳಿ ಔಷಧಿ ವಿತರಣೆ

ಹಿಂದೆ ಸರ್ಕಾರ ಮಂಗನಕಾಯಿಲೆಯಿಂದ ಮೃತರಾದ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿತ್ತು. ಇದರಂತೆ ಶಿವಮೊಗ್ಗ ಜಿಲ್ಲೆಯ ಮೃತರ ಕುಟುಂಬಕ್ಕೆ ಪರಿಹಾರ ನೀಡಿತ್ತು.ಆದರೇ ಉತ್ತರ ಕನ್ನಡ ಜಿಲ್ಲೆಯ ಮೃತರ ಕುಟುಂಬಕ್ಕೆ ಪರಿಹಾರ ಈವರೆಗೂ ಬಿಡುಗಡೆಯಾಗಿಲ್ಲ. ಇನ್ನು ವೈದ್ಯಕೀಯ ಮೂಲಭೂತ ವ್ಯವಸ್ಥೆ ಸಹ ಅಷ್ಟಕಷ್ಟೆ ಆಗಿದ್ದು ಸ್ಥಳೀಯ ಜನರು ಆರೋಗ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ