ಕಾರವಾರ, ಮಾರ್ಚ್ 4: ಸೂಕ್ತ ಲಸಿಕೆ ಇಲ್ಲದ ಹಿನ್ನೆಲೆ ರಾಜ್ಯದ ಮಲೆನಾಡು, ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ (Kyasanur Forest Disease) ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇದರ ಮಧ್ಯೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನಿರ್ನಳ್ಳಿ ಗ್ರಾಮದ ರಸ್ತೆಯಲ್ಲಿ ಮಂಗನ ಮೃತ ದೇಹ ಪತ್ತೆ ಆಗಿದೆ. ಇದು ನಿರ್ನಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಮಂಗನ ಕಾಯಿಲೆಯಿಂದ ಜಿಲ್ಲೆಯಲ್ಲಿ ಎರಡು ತಿಂಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಇದುವರೆಗೂ 47 ಜನರಲ್ಲಿ ಮಂಗನ ಕಾಯಿಲೆ ಪತ್ತೆ ಆಗಿದೆ. ಇದೀಗ ಕೊಳೆತ ಸ್ಥಿತಿಯಲ್ಲಿ ಮಂಗನ ಮೃತ ದೇಹ ಪತ್ತೆ ಆಗಿದ್ದು, ಜನರಲ್ಲಿ ಆತಂಕ ಶುರಿವಾಗಿದೆ. ಸದ್ಯ ಮಲೆನಾಡಿನ ಜನ ಭಯದಲ್ಲೆ ಜೀವನ ಸಾಗಿಸುತ್ತಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ನಾಪತ್ತೆ ಆಗಿದ್ದ ಮಂಗನ ಕಾಯಿಲೆ ಇತ್ತೀಚೆಗೆ ಮತ್ತೆ ಪತ್ತೆ ಆಗಿ ವ್ಯಾಪಕವಾಗಿ ಪಸರಿಸ ತೊಡಗಿತ್ತು. ಈ ಹಿಂದೆ ಕಾಯಿಲೆ ಬಂದಾಗ ಇಷ್ಟೊಂದು ವೇಗವಾಗಿ ಪಸರಿಸರಲಿಲ್ಲ, ಆದರೆ ಈ ಸಲ ಮಳೆ ಕಡಿಮೆ ಆಗಿರುವುದರಿಂದ ಉಷ್ಣತೆಗೆ ರೋಗ ವೇಗವಾಗಿ ಹರಡುತ್ತಿದೆ ಎಂದು ತಜ್ಷರು ಹೇಳಿದ್ದರು.
ಜನವರಿ 18 ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪೂರ ತಾಲೂಕಿನ ಜಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಂದು ಮಂಗನ ಸಾವಿನಿಂದ ಆರಂಭವಾದ ಮಂಗನ ಕಾಯಿಲೆ. ಇದುವರೆಗೂ 47 ಜನರಿಗೆ ಅಂಟಿದ್ದೂ 24 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 13 ಜನ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗ ಅಂಟಿದ 37 ಜನರು ಔಟ್ ಆಫ್ ಡೆಂಜರ್ ಇದ್ದಾರೆ. ಆದರೆ ಈಗಾಗಲೇ ಲಸಿಕೆ ಇಲ್ಲದೆ ಜನ ಆತಂಕದಲ್ಲಿ ಜೀವನ ಕಳೆಯುತ್ತಿರುವ ಬೆನ್ನಲೆ ಸಿದ್ಧಾಪೂರ ತಾಲೂಕಿನ ಕಾಂಡಂಚಿನಲ್ಲಿ ಕಳೆದ ಕೆಲ ದಿನಗಳಲ್ಲಿ ಮೂರು ಮಂಗಗಳ ಸಾವು ಇನ್ನಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿತ್ತು.
ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ ಮೂರಕ್ಕೇರಿಕೆ
ಮಂಗನ ಕಾಯಿಲೆ ರೋಗ ತಡೆ ಗಟ್ಟಲು ಸೂಕ್ತ ಲಸಿಕೆ ಇಲ್ಲ. ಈ ಹಿಂದೆ ನೀಡಲಾಗುತಿದ್ದ ಲಸಿಕೆ ಪರಿಣಾಮಕಾರಿ ಅಲ್ಲ ಹಾಗೂ ಗುಣಮಟ್ಟದ ಕಾರಣ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ( CDSCO) ಹಿಂಪಡೆದಿತ್ತು. ಹೀಗಾಗಿ ಮಂಗನಕಾಯಿಲೆಗೆ ಲಸಿಕೆ ಸಹ ಇಲ್ಲದಿರುವುದರಿಂದ ಜಿಲ್ಲಾ ಆರೋಗ್ಯ ಇಲಾಖೆ ಸೊಳ್ಳೆ, ಉಣಗು, ತಿಗಣೆಗಳು ಕಚ್ಚದಂತೆ ತಡೆಯುವ ಡಿ.ಎಮ್.ಪಿ ಆಯಲ್ನನ್ನು ಮಾತ್ರ ಜನರಿಗೆ ನೀಡುವುದರ ಜೊತೆಗೆ ಅರಣ್ಯ ಪ್ರದೇಶಕ್ಕೆ ಹೆಚ್ಚಗೆ ಹೋಗದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆರೋಗ್ಯ ಇಲಾಖೆ ಮಾಡಿದೆ.
ಇದನ್ನೂ ಓದಿ: ಮಂಗನ ಕಾಯಿಲೆಗೆ ವೃದ್ಧ ಬಲಿ: ಆರೋಗ್ಯ ಇಲಾಖೆ ಹೈಅಲರ್ಟ್, ಮನೆ ಮನೆಗೆ ತೆರಳಿ ಔಷಧಿ ವಿತರಣೆ
ಹಿಂದೆ ಸರ್ಕಾರ ಮಂಗನಕಾಯಿಲೆಯಿಂದ ಮೃತರಾದ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿತ್ತು. ಇದರಂತೆ ಶಿವಮೊಗ್ಗ ಜಿಲ್ಲೆಯ ಮೃತರ ಕುಟುಂಬಕ್ಕೆ ಪರಿಹಾರ ನೀಡಿತ್ತು.ಆದರೇ ಉತ್ತರ ಕನ್ನಡ ಜಿಲ್ಲೆಯ ಮೃತರ ಕುಟುಂಬಕ್ಕೆ ಪರಿಹಾರ ಈವರೆಗೂ ಬಿಡುಗಡೆಯಾಗಿಲ್ಲ. ಇನ್ನು ವೈದ್ಯಕೀಯ ಮೂಲಭೂತ ವ್ಯವಸ್ಥೆ ಸಹ ಅಷ್ಟಕಷ್ಟೆ ಆಗಿದ್ದು ಸ್ಥಳೀಯ ಜನರು ಆರೋಗ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.