ಮೈಸೂರು: ಮಗಳ ಆತ್ಮಹತ್ಯೆಯಿಂದ ಮನನೊಂದ ತಂದೆ ಹೃದಯಾಘಾತದಿಂದ ಸಾವು

ಪಿಯು ಕಾಲೇಜು ಸೇರಿಸುವ ವಿಚಾರದಲ್ಲಿ ತಂದೆಯ ಜೊತೆ ಮುನಿಸಿಕೊಂಡಿದ್ದ ಬಾಂಧವ್ಯ ಬೆಳಗಿನ ಜಾವ ಮನೆಯಲ್ಲೇ ನೇಣಿಗೆ ಶರಣಾಗಿದ್ದಳು. ಮಗಳ ಸಾವನ್ನು ನೊಡಿದ್ದ ತಂದೆ ರಾಜು (65) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮೈಸೂರು: ಮಗಳ ಆತ್ಮಹತ್ಯೆಯಿಂದ ಮನನೊಂದ ತಂದೆ ಹೃದಯಾಘಾತದಿಂದ ಸಾವು
ಮಗಳು ಬಾಂಧವ್ಯ ಮತ್ತು ತಂದೆ ರಾಜು
TV9kannada Web Team

| Edited By: sandhya thejappa

Jun 20, 2021 | 2:35 PM

ಮಂಡ್ಯ: ಮಗಳ ಆತ್ಮಹತ್ಯೆಯಿಂದ ಮನನೊಂದಿದ್ದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದಲ್ಲಿ ನಡೆದಿದೆ. ಪಿಯು ಕಾಲೇಜು ಸೇರಿಸುವ ವಿಚಾರದಲ್ಲಿ ತಂದೆಯ ಜೊತೆ ಮುನಿಸಿಕೊಂಡಿದ್ದ ಬಾಂಧವ್ಯ ಬೆಳಗಿನ ಜಾವ ಮನೆಯಲ್ಲೇ ನೇಣಿಗೆ ಶರಣಾಗಿದ್ದಳು. ಮಗಳ ಸಾವನ್ನು ನೊಡಿದ್ದ ತಂದೆ ರಾಜು (65) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಸಾವು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಯಾಕನೂರು ಗ್ರಾಮದ ಕಾವ್ಯಾ ಎಂಬ ಗೃಹಿಣಿ ಸಾವನ್ನಪ್ಪಿದ್ದಾರೆ. 21 ವರ್ಷದ ಕಾವ್ಯಾ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದ ಕಾವ್ಯ, ತನ್ನ ಸಾವಿಗೆ ಅತ್ತೆಯೇ ಕಾರಣವೆಂದು ಹೇಳಿದ್ದಾರೆ. ಸಾಯುವುದಕ್ಕೂ ಮೊದಲು ಹೇಳಿಕೆ ನೀಡಿರುವ ಕಾವ್ಯಾ, ನನ್ನ ಪತಿ ತಪ್ಪು ಮಾಡಿಲ್ಲ. ಅವರಿಗೆ ಏನೂ ಮಾಡಬೇಡಿ ಎಂದಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ಕಾವ್ಯ

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ ಇದ್ದಕ್ಕಿದ್ದಂತೆ ಮಾನಸಿಕ ಅಸ್ವಸ್ಥ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕನ್ನಳ್ಳಿಮೋಳೆ ಗ್ರಾಮದಲ್ಲಿ ಸಂಭವಿಸಿದೆ. ಶಿವಣ್ಣ ಎಂಬಾತ ಇದ್ದಕ್ಕಿದ್ದಂತೆ ಕತ್ತು ಕುಯ್ದುಕೊಂಡಿದ್ದರು. ತಕ್ಷಣ ಆತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನ ಬರ್ಬರ ಕೊಲೆ ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿ ಆತನ ಕೈಗಳನ್ನು ಕಟ್ಟಿ ಹಾಕಿ ಶವಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಘಟನೆ ಕಲಬುರಗಿ ತಾಲೂಕಿನ ಅಷ್ಟಗಾ ಗ್ರಾಮದ ಬಳಿ ನಡೆದಿದೆ. 25 ವರ್ಷದ ಯುವಕನ ಕೈಗಳನ್ನು ಹಗ್ಗದಿಂದ ಕಟ್ಟಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಂಚಿದ್ದಾರೆ. ಮುಖ ಸುಟ್ಟು ಹೋಗಿದ್ದರಿಂದ ಯುವಕನ ಗುರತು ಪತ್ತೆಗಾಗಿ ಪೊಲೀಸರರಿಂದ ತನಿಖೆ ನಡೆಯುತ್ತಿದೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಕೊರೊನಾಗೆ ಬಲಿಯಾದವರ ಕುಟುಂಬಗಳಿಗೆ ಪರಿಹಾರ ಇಲ್ಲ; ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ

ಹಾಯಾಗಿದೆ ಪ್ರಯಾಣವೆನ್ನುತ್ತಾ.. ಮೆಟ್ರೋ ರೈಲಿನಲ್ಲಿ ಮಂಗನ ಸ್ಟಂಟ್​! ವಿಡಿಯೋ ನೋಡಿ

(A father has died of a heart attack after his daughter suicide in mandya)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada