ಇಬ್ಬರು ಪೊಲೀಸ್ ಇನ್ಸ್​ಪೆಕ್ಟರ್ ಅನುಮಾನಸ್ಪದ​​​ ಸಾವಿನ ಬೆನ್ನಲ್ಲೇ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯ ಆತ್ಮಹತ್ಯೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 07, 2024 | 9:13 PM

ವಿಜಯಪುರ ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಟಾಕ್ ರೂಮ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ಶಾಲಾ ಅವಧಿ ಮುಗಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಕಿರುಕುಳದಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆಂದು ಕುಟುಂಬಸ್ಥರಿಂದ ಆರೋಪಿಸಲಾಗಿದೆ. ಬಸವನಬಾಗೇವಾಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇಬ್ಬರು ಪೊಲೀಸ್ ಇನ್ಸ್​ಪೆಕ್ಟರ್ ಅನುಮಾನಸ್ಪದ​​​ ಸಾವಿನ ಬೆನ್ನಲ್ಲೇ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯ ಆತ್ಮಹತ್ಯೆ
ಇಬ್ಬರು ಪೊಲೀಸ್ ಇನ್ಸ್​ಪೆಕ್ಟರ್ ಅನುಮಾನಸ್ಪದ​​​ ಸಾವಿನ ಬೆನ್ನಲ್ಲೇ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯ ಆತ್ಮಹತ್ಯೆ
Follow us on

ವಿಜಯಪುರ, ಆಗಸ್ಟ್​ 07: ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಸಾಲು ಸಾಲು ಆತ್ಮಹತ್ಯೆಗಳು ನಡೆಯುತ್ತಿವೆ. ಯಾದಗಿರಿ ಪಿಎಸ್ಐ ಪರಶುರಾಮ ಅನುಮಾಸ್ಪದವಾಗಿ ಸಾವನ್ನಪ್ಪಿದ್ದರು. ಬಳಿಕ ಸಿಸಿಬಿ ಇನ್ಸ್​ಪೆಕ್ಟರ್​​ ತಿಮ್ಮೆಗೌಡ ಆತ್ಮಹತ್ಯೆಗೆ (suicide) ಶರಣಾಗಿದ್ದರು. ಇದೀಗ ಸರ್ಕಾರಿ ಶಾಲೆಯ ಸ್ಟಾಕ್ ರೂಮ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯ ಶವ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಮುಖ್ಯೋಪಾಧ್ಯಾಯ ಸಿ.ಎಸ್.ಹಡಪದ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. 2 ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿ.ಎಸ್.ಹಡಪದ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಶಾಲೆಯ ಎಸ್​ಡಿಎಂಸಿ ಅಧ್ಯಕ್ಷರ ಕಿರುಕುಳದಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ದೇಗುಲ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವು: ಸಿಎಂ ನೋಡಲು ಬಂದು ಶಾಕ್​ ಹೊಡೆಸಿಕೊಂಡ ಯುವಕ

ಸರ್ಕಾರಿ ನೌಕರರ ಸಂಘದಿಂದಲೂ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಕೆಎಸ್​ಆರ್​​ಟಿಸಿ ಬಸ್​ ಡಿಕ್ಕಿ: ಗರ್ಭಿಣಿ ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಕೆಎಸ್​ಆರ್​​ಟಿಸಿ ಬಸ್​ ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಬಳಿ ನಡೆದಿದೆ. ರಸ್ತೆ ದಾಟುವಾಗ ಬಸ್​ ಡಿಕ್ಕಿಯಾಗಿ ಗರ್ಭಿಣಿ ನಮಿತಾ(22) ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕಾಲೇಜು ಯುವತಿಯರೇ ಎಚ್ಚರ! ಸ್ನೇಹಿತನ ಜೊತೆಗಿನ ಫೋಟೋ ಹಿಡಿದು ಯುವತಿಗೆ ಬ್ಲಾಕ್ ಮೇಲ್ ಮಾಡಿದ ಸ್ನೇಹಿತ ಅರೆಸ್ಟ್

ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹಿಂದಿರುಗುವಾಗ ದುರಂತ ಸಂಭವಿಸಿದೆ. ಅಪಘಾತದ ನಂತರ ಕೆಎಸ್​​ಆರ್​ಟಿಸಿ ಬಸ್ ಬಿಟ್ಟು ಚಾಲಕ ಪರಾರಿ ಆಗಿದ್ದಾರೆ. ಈ ವೇಳೆ ಸ್ಥಳೀಯರು ಮತ್ತು ಮೃತಳ ಕುಟುಂಬಸ್ಥರು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಟ್ಟಿದ್ದು, ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.