ಉಪಸಭಾಪತಿ ಧರ್ಮೇಗೌಡ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಆಗ್ರಹ

ಸಾಂವಿಧಾನಿಕ ಸಂಸ್ಥೆಗಳ ಸಮಗ್ರತೆ, ಅಧ್ಯಕ್ಷತೆ ವಹಿಸುವವರ ಸ್ವಾತಂತ್ರ್ಯ ಮತ್ತು ಘನತೆಗೆ ಕುಂದು ಬಾರದಂತೆ ಎಚ್ಚರಿಕೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಓಂ ಬಿರ್ಲಾ ಟ್ವೀಟ್ ಮಾಡಿದ್ದಾರೆ.

ಉಪಸಭಾಪತಿ ಧರ್ಮೇಗೌಡ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಆಗ್ರಹ
ಲೋಕಸಭಾ ಸ್ಪೀಕರ್ ಓಂ ಬಿರ್ಲಾ
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 30, 2020 | 4:14 PM

ದೆಹಲಿ: ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ನಿಧನಕ್ಕೆ ಲೋಕಸಭಾ ಸ್ಪೀಕರ್ ಓಂಬಿರ್ಲಾ ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಧರ್ಮೇಗೌಡ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

​ಅಂದು ಧರ್ಮೇಗೌಡ ಅಧ್ಯಕ್ಷತೆಯಲ್ಲಿ ವಿಧಾನ ಪರಿಷತ್​ ಕಲಾಪದ ವೇಳೆ ಗಲಾಟೆ ನಡೆದಿದ್ದು ದುರದೃಷ್ಟಕರ. ಪ್ರಜಾಪ್ರಭುತ್ವದ ಘನತೆಗೆ ತೀವ್ರವಾದ ಧಕ್ಕೆ. ಅವರ ಸಾವಿನ ಸುದ್ದಿ ಕೇಳಿ ನನಗೆ ತುಂಬ ನೋವಾಗಿದೆ. ಅವರ ಸಾವಿನ ವಿಚಾರದಲ್ಲಿ ಉನ್ನತ ಮಟ್ಟದ, ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಸಾಂವಿಧಾನಿಕ ಸಂಸ್ಥೆಗಳ ಸಮಗ್ರತೆ, ಅಧ್ಯಕ್ಷತೆ ವಹಿಸುವವರ ಸ್ವಾತಂತ್ರ್ಯ ಮತ್ತು ಘನತೆಗೆ ಕುಂದು ಬಾರದಂತೆ ಎಚ್ಚರಿಕೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿಯವರೂ ಸಹ ಧರ್ಮೇಗೌಡ ಅವರ ಸಾವಿನ ತನಿಖೆಯಾಗಬೇಕು ಎಂದು ಈಗಾಗಲೇ ಆಗ್ರಹಿಸಿದ್ದಾರೆ. ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದರೆ ನಂಬಲೂ ಸಾಧ್ಯವಿಲ್ಲ ಎಂದು ಹೇಳಿದ್ದರು.

ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿ ಹಳಿಯ ಮೇಲಿದ್ದರು.. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ರೈಲು ಚಾಲಕ

Published On - 4:13 pm, Wed, 30 December 20