ಚುನಾವಣೆಗೂ ಮುನ್ನವೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನವೇ ಹಲವಾರು ಜಿಲ್ಲೆಗಳಲ್ಲಿ ಪೊಲೀಸರು ಅಪಾರ ಪ್ರಮಾಣದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಚುನಾವಣಾ ಅಕ್ರಮ ತಡೆಯಲು 42 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದು, ಒಂದೇ ದಿನ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.90 ಕೋಟಿ ಹಣ ಜಪ್ತಿ ಮಾಡಲಾಗಿದೆ.

ಚುನಾವಣೆಗೂ ಮುನ್ನವೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ವಶ
ಅಕ್ರಮ ಹಣ ವಶ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 24, 2023 | 11:24 AM

ಕಲಬುರಗಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ(Karnataka Assembly Election) ಮುನ್ನವೇ ಹಲವಾರು ಜಿಲ್ಲೆಗಳಲ್ಲಿ ಪೊಲೀಸರು ಅಪಾರ ಪ್ರಮಾಣದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಚುನಾವಣಾ ಅಕ್ರಮ ತಡೆಯಲು 42 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದು, ಒಂದೇ ದಿನ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.90 ಕೋಟಿ ಹಣ ಜಪ್ತಿಯಾಗಿದೆ. ಕಮಲಾಪುರ ತಾಲೂಕಿನ ಕಿಣ್ಣಿಸಡಕ್ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ 1.40 ಕೋಟಿ ಪತ್ತೆಯಾಗಿದ್ದು, ಜೇವರ್ಗಿ ಚೆಕ್​ಪೋಸ್ಟ್​ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಒಂದೇ ಒಟ್ಟು 1.90 ಕೋಟಿ ಹಣ ಪತ್ತೆಯಾಗಿರುವ ಬಗ್ಗೆ ಗುರುವಾರ ಕಲಬುರಗಿ ಉಪ ಪೊಲೀಸ್ ಆಯುಕ್ತ ಯಶವಂತ ವಿ.ಗುರುಕರ್​ ಮಾಹಿತಿ ನೀಡಿದ್ದಾರೆ.

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಗದನ್ನು ವಶಪಡಿಸಿಕೊಂಡ ಪೊಲೀಸರು

ಗದಗದಲ್ಲಿ ಬುಧವಾರ ಬೆಟಗೇರಿ ಪೊಲೀಸರು ಸೂಕ್ತ ದಾಖಲೆಗಳಿಲ್ಲದ ಕಾರಿನಲ್ಲಿ ಸಾಗಿಸುತ್ತಿದ್ದ ₹1.43 ಲಕ್ಷವನ್ನು ವಶಪಡಿಸಿಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಗದಗ ಪಟ್ಟಣ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ ₹15 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಬೆಳಗಾವಿಯಲ್ಲಿ ಬುಧವಾರ ಕಣಬರ್ಗಿ ಚೆಕ್‌ಪೋಸ್ಟ್‌ನಲ್ಲಿ ಸೂಕ್ತ ದಾಖಲೆಗಳಿಲ್ಲದೆ ₹9 ಲಕ್ಷ ನಗದು ವಶಪಡಿಸಿಕೊಂಡಿದ್ದು, ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೋಗುತ್ತಿದ್ದ ಕಾರನ್ನು ಪರಿಶೀಲಿಸಿದಾಗ ಲೆಕ್ಕಕ್ಕೆ ಸಿಗದ ನಗದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಕೋಲಾರದಲ್ಲಿ ಅಂತರ್​ರಾಜ್ಯ ಇರಾನಿ ಗ್ಯಾಂಗ್ ಸದಸ್ಯರುಗಳ ಬಂಧನ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶ

ಇನ್ನು ಚಿಕ್ಕಮಗಳೂರಿನಲ್ಲಿ ಮಾರ್ಚ್ 22 ರಂದು ಚಿಕ್ಕಮಗಳೂರಿನಿಂದ ತರೀಕೆರೆ ಕಡೆಗೆ ಸಾಗಿಸುತ್ತಿದ್ದ 9.3 ಕಿ.ಲೋಗ್ರಾಂ ಚಿನ್ನ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಗುರುವಾರ ತಿಳಿಸಿದ್ದಾರೆ. ಈ ವೇಳೆ ₹ 3 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದೆ. ಇನ್ನು ಜಿಲ್ಲಾಡಳಿತವು ಜಿಲ್ಲೆಯಾದ್ಯಂತ 18 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದೆ. ಇನ್ನು ಇಂದು ವಿಜಯಪುರದ ಚಡಚಣ ತಾಲೂಕಿನ ಕೊಂಕಣಗಾಂವ ಚೆಕ್ ಪೊಸ್ಟ್ನಲ್ಲಿ ದಾಖಲೆ ಇಲ್ಲದ 4.40 ಲಕ್ಷ ಹಣವನ್ನ ಪೊಲೀಸರು ಸೀಜ್ ಮಾಡಿದ್ದಾರೆ. ಹಣ, ಸಾಗಾಟಕ್ಕೆ ಬಳಸುತ್ತಿದ್ದ ಕಾರ್ ಹಾಗೂ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ಆರೋಪಿ ಬೀದರ್ ಮೂಲದ ಅನಿಲ್ ಕುಮಾರ ರಾಠೋಡ (35)ನನ್ನ ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಲ್ಲಿ ಕ್ಲಿಕ್ ಮಾಡಿ

Published On - 11:16 am, Fri, 24 March 23

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ