AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ: ಆಕ್ರಮ ಸಂಬಂಧಕ್ಕೆ ಒಪ್ಪದಕ್ಕೆ ಕೃತ್ಯ ಶಂಕೆ

ಮಹಿಳೆಯೋರ್ವಳು ಎರಡು ವರ್ಷದಿಂದ ಗಂಡನಿಂದ ದೂರವಾಗಿ ಮಗುವಿನೊಂದಿಗೆ ಪ್ರತ್ಯೇಕವಾಗಿ ವಾಸವಾಗಿದ್ದಳು. ಆದ್ರೆ ಆಕೆ ಮನೆಗೆ ಅಸಾಮಿಯೊಬ್ಬ ಎಂಟ್ರಿ ಕೊಟ್ಟು ಬಾಗಿಲು ಲಾಕ್ ಮಾಡಿದ್ದಾನೆ. ಎಷ್ಟು ಹೊತ್ತಾದರೂ ಬಾಗಿಲು ತೆಗೆದಿರಲಿಲ್ಲ. ಕೊನೆಗೆ ಬಾಗಿಲು ಓಪನ್ ಮಾಡಿದಾಗ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಅಷ್ಟಕ್ಕೂ ಮನೆಯಲ್ಲಿ ಸ್ಥಳೀಯರು, ಪೊಲೀಸರು ನೋಡಿದ್ದಾದರೂ ಏನೂ ಅಂತೀರಾ ಈ ಸ್ಟೋರಿ ನೋಡಿ.

ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ: ಆಕ್ರಮ ಸಂಬಂಧಕ್ಕೆ ಒಪ್ಪದಕ್ಕೆ ಕೃತ್ಯ ಶಂಕೆ
Suman And Madira Mandal
ರಾಮು, ಆನೇಕಲ್​
| Updated By: ರಮೇಶ್ ಬಿ. ಜವಳಗೇರಾ|

Updated on: Aug 06, 2025 | 9:30 PM

Share

ಆನೇಕಲ್, (ಆಗಸ್ಟ್ 06): ಸ್ನೇಹಿತನ (Friend)  ಹೆಂಡತಿಯನ್ನು ಹತ್ಯೆಗೈದು ಬಳಿಕ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಬಳಿಯ ತಿರುಪಾಳ್ಯದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಶ್ಚಿಮ ಬಂಗಾಳ ಮೂಲದ ಮಂದಿರಾ ಮಂಡಲ್ (27) ಎಂದು ಗುರುತಿಸಲಾಗಿದೆ. ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ಗಂಡನ ಸ್ನೇಹಿತ ಸುಮನ್ ‌ಮಂಡಲ್ ಎಂಬಾತನೇ ಮಂದಿರಾ ಮಂಡಲಳನ್ನ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಎಂಟು ವರ್ಷದ ಹಿಂದೆ ಬಿಜೋನ್ ಮಂಡಲ್ ಜೊತೆ ಮೃತ ಮಂದಿರಾ ಮದುವೆ ಆಗಿದ್ದು 6 ವರ್ಷದ ಗಂಡು ಇದೆ. ಆದ್ರೆ ಎರಡು ವರ್ಷದ ಹಿಂದೆ ಗಂಡನಿಂದ ದೂರವಾಗಿ ಇಲ್ಲಿನ ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ನಿನ್ನೆ ಎಂದಿನಂತೆ ಅಪಾರ್ಟ್ಮೆಂಟ್ನಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಬಂದಿದ್ದಳು. ಮಗು ಹೊರಗೆ ಆಟವಾಡುತ್ತಿತ್ತು. ಈ ನಡುವೆ ಆರೋಪಿ ಸುಮನ್ ಮನೆಗೆ ನುಗ್ಗಿ ಬಾಗಿಲು ಲಾಕ್ ಮಾಡಿದ್ದಾನೆ. ಕೆಲ ಹೊತ್ತಿನ ಬಳಿಕ ಮಗು ಬಾಗಿಲು ಬಡಿದಿದೆ ಆದ್ರೆ ಬಾಗಿಲು ತೆರೆಯಲಿಲ್ಲ. ಇನ್ನೂ ಆತಂಕಗೊಂಡ ಮಗು ಅಜ್ಜಿಗೆ ವಿಚಾರ ತಿಳಿಸಿದೆ. ಆಕೆ ಬಾಗಿಲು ಬಡಿದರು ಉತ್ತರವಿಲ್ಲ. ಕೊನೆಗೆ ಕಿಡಕಿ ತೆರೆದು ನೋಡಿದಾಗ ಆರೋಪಿ ಸುಮನ್ (28)ನೇಣಿಗೆ ಶರಣಾಗಿರುವುದು ಕಂಡಿದೆ.

ಇದನ್ನೂ ಓದಿ: ಪ್ರಿಯಕರನ ಜತೆ ಸೇರಿ ಪತಿಯ ಕೊಲೆ: ಬಳಿಕ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ ಪತ್ನಿ

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಗಿಲು ತೆರೆದು ಪರಿಶೀಲನೆ ವೇಳೆ ಒಂದು ಕೊಠಡಿಯಲ್ಲಿ ಮಂದಿರಾ ಮಂಡಲ್ ಕುತ್ತಿಗೆ ಸೀಳೆ ಹತ್ಯೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮತ್ತೊಂದು ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸುಮನ್ ಶವ ಪತ್ತೆಯಾಗಿದ್ದಾನೆ. ಕೊಲೆಯಾದ ಮಂದಿರಾ ಮಂಡಲ್ ಪತಿ ಬಿಜೋನ್ ಮಂಡಲ್ ಮತ್ತು ಸುಮನ್ ಮಂಡಲ್ ಸ್ನೇಹಿತರಾಗಿದ್ದು, ಎರಡು ವರ್ಷದಿಂದ ಅಂಡಮಾನ್ ನಲ್ಲಿ ಕೆಲಸ ಮಾಡುತ್ತಿದ್ದರು.

ಅದ್ರೆ ಹದಿನೈದು ದಿನಗಳ ಹಿಂದೆ ಆರೋಪಿ ಸುಮನ್ ಬೆಂಗಳೂರಿಗೆ ವಾಪಸ್ ಆಗಿದ್ದು, ತಿರುಪಾಳ್ಯದ ಪೋಷಕರ ಜೊತೆ ವಾಸವಾಗಿದ್ದು, ಕಾರ್ಖಾನೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಸಹ ಕೆಲಸಕ್ಕೆ ಹೋಗಲು ಬುತ್ತಿ ಸಹಿತ ನೇರವಾಗಿ ಮಂದಿರಾ ಮನೆಗೆ ಬಂದಿದ್ದು, ಅಕ್ರಮ ಸಂಬಂಧಕ್ಕೆ ಒಪ್ಪದ ಹಿನ್ನೆಲೆ ಆಕ್ರೋಶಗೊಂಡು ತರಕಾರಿ ಕತ್ತರಿಸುವ ಚಾಕುವಿನಿಂದ ಕುತ್ತಿಗೆ ಸೀಳಿ ಕೊಂದು ಬಳಿಕ ನೇಣಿಗೆ ಶರಣಾಗಿರುವ ಸಾಧ್ಯತೆ ‌ಇದೆ ಎಂದು ಶಂಕಿಸಲಾಗಿದೆ.

ಸದ್ಯ ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಒಟ್ಟಿನಲ್ಲಿ ಗಂಡನಿಂದ ಬೇರ್ಪಟ್ಟು ಬದುಕು ಕಟ್ಟಿಕೊಳ್ಳುವ ಧಾವಂತದಲ್ಲಿದ್ದ ಮೃತ ಮಂದಿರಾ ಮಂಡಲ್ ತನ್ನ ಪತಿ ಸ್ನೇಹಿತನಿಂದಲೇ ಬರ್ಬರವಾಗಿ ಹತ್ಯೆ ಆಗಿದ್ದು, ಆರೋಪಿ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೆ ಏನೂ ಅಪರಾಧ ಮಾಡದ ಪುಟ್ಟ ಮಗು ಅನಾಥವಾಗಿದ್ದು ಮಾತ್ರ ಬೇಸರದ ಸಂಗತಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ