ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು: ಮೂವರು ಅಧಿಕಾರಿಗಳು ಅಮಾನತು
ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿಯ ಮೂವರು ಅಧಿಕಾರಿಗಳ ಅಮಾನತು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಕರಣ ಸಂಬಂಧ ಡಿಸಿ ವರದಿ ಅಧರಿಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ನಿಯಮಿತವಾಗಿ ಕುಡಿಯುವ ನೀರಿನ ಟ್ಯಾಂಕರ್ ಸ್ವಚ್ಛಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಮೈಸೂರು, ಮೇ 23: ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು (contaminated water) ಸೇವಿಸಿ ಓರ್ವ ಸಾವು, 35ಕ್ಕೂ ಹೆಚ್ಚು ಜನ ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿಯ ಮೂವರು ಅಧಿಕಾರಿಗಳ ಅಮಾನತು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿಗೂ ಮುನ್ನ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಡಿಸಿ ವರದಿ ಅಧರಿಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
ನಿಯಮಿತವಾಗಿ ಕುಡಿಯುವ ನೀರಿನ ಟ್ಯಾಂಕರ್ ಸ್ವಚ್ಛಗೊಳಿಸಲು ಸೂಚಿಸಿದ್ದೇನೆ. ಕೆ.ಸಾಲುಂಡಿ ಗ್ರಾಮಕ್ಕೆ ಕಲುಷಿತ ನೀರು ಸರಬರಾಜು ಆಗಿದೆ. ಕುಡಿಯುವ ನೀರನ್ನು ಯಾರೂ ಟೆಸ್ಟ್ ಮಾಡಿಲ್ಲ, ಹೀಗಾಗಿ ಘಟನೆ ನಡೆದಿದೆ ಎಂದಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ 114 ಮಂದಿ ಅಸ್ವಸ್ಥ, ಮೂವರಿಗೆ ಕಾಲರ
ಸದ್ಯ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಕಲುಷಿತ ನೀರು ಸೇವಿಸಿ ಓರ್ವ ಸಾವು, 35ಕ್ಕೂ ಹೆಚ್ಚು ಜನ ಅಸ್ವಸ್ಥ ಕೇಸ್ಗೆ ಸಂಬಂಧ ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಒಂದೇ ಕುಟುಂಬದ ನಾಲ್ವರು ಸಾವು ಕೇಸ್: ಸ್ಥಳಕ್ಕೆ ಸಿಎಂ ಭೇಟಿ
ಮೈಸೂರಿನ ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣ ಹಿನ್ನೆಲೆ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಇದನ್ನೂ ಓದಿ: ಅಡುಗೆ ಅನಿಲ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರ ಸಾವು
ಬಳಿಕ ದುರಂತ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಸ್ಥಳೀಯ ಶಾಸಕ ತನ್ವೀರ್ ಸೇಠ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು. ಸಿಎಂ ಭೇಟಿ ಹಿನ್ನೆಲೆಯಲ್ಲಿ ಯರಗನಹಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:57 pm, Thu, 23 May 24