ಉಕ್ರೇನ್​ನಲ್ಲಿ ಸಿಲುಕಿಕೊಂಡ ಗದಗನ ವೈದ್ಯಕೀಯ ವಿದ್ಯಾರ್ಥಿ; ಮಗನನ್ನು ಸುರಕ್ಷಿತವಾಗಿ ಕರೆತರುವಂತೆ ಸರ್ಕಾರಕ್ಕೆ ಪೋಷಕರ ಮನವಿ

ಹೌದು ಉಕ್ರೇನ್ ಹಾಗೂ ರಷ್ಯಾ ದೇಶಗಳ ನಡುವೆ ಯುದ್ಧ ಆರಂಭವಾಗಿದ್ದು, ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಎಂ.ಬಿ.ವಿ.ಎಸ್ ವಿದ್ಯಾರ್ಥಿ ಮಹಾಗಣಪತಿ ಬಿಳಿಮಗ್ಗದ ಉಕ್ರೇನ್ ದೇಶದಲ್ಲಿ ಸಿಲುಕಿ ಹಾಕಿಕೊಂಡಿದ್ದಾನೆ.‌ ಪೋಷಕರು ಆತಂಕಗೊಂಡಿದ್ದಾರೆ.

ಉಕ್ರೇನ್​ನಲ್ಲಿ ಸಿಲುಕಿಕೊಂಡ ಗದಗನ ವೈದ್ಯಕೀಯ ವಿದ್ಯಾರ್ಥಿ; ಮಗನನ್ನು ಸುರಕ್ಷಿತವಾಗಿ ಕರೆತರುವಂತೆ ಸರ್ಕಾರಕ್ಕೆ ಪೋಷಕರ ಮನವಿ
ಮಹಾಗಣಪತಿ ಬಿಳಿಮಗ್ಗದ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 24, 2022 | 7:35 PM

ಗದಗ: ಆ ವಿದ್ಯಾರ್ಥಿ ಬಹಳ ಚೂರುಕ್ಕಾಗಿದ್ದ, ವೈದ್ಯನಾಗಬೇಕು ಎಂದು ಕನಸು ಕಂಡಿದ್ದ. ಹಾಗಾಗಿಯೇ ಆತನನ್ನು ದೂರದ ಉಕ್ರೇನ್ ದೇಶಕ್ಕೆ ವ್ಯಾಸಂಗ ಮಾಡಲು ಕಳುಹಿಸಿಕೊಡಲಾಗಿದೆ. ಆದ್ರೆ ಈವಾಗ ಆತನ ಕುಟುಂಬಸ್ಥರಲ್ಲಿ ಭಯ ಶುರುವಾಗಿದೆ. ಹೌದು ಉಕ್ರೇನ್ ಹಾಗೂ ರಷ್ಯಾ (Russia Ukraine War) ದೇಶಗಳ ನಡುವೆ ಯುದ್ಧ ಆರಂಭವಾಗಿದ್ದು, ಉಕ್ರೇನ್ ದೇಶಕ್ಕೆ ವ್ಯಾಸಂಗ ಮಾಡಲು ಹೋದ ವಿದ್ಯಾರ್ಥಿ ಕುಟುಂಬ ಮಗ ಸುರಕ್ಷಿತವಾಗಿ ಮನೆಗೆ ಬರಲಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಉಕ್ರೇನ್ ಹಾಗೂ ರಷ್ಯಾ ದೇಶಗಳ ನಡುವೆ ಯುದ್ಧ ಆರಂಭವಾಗಿದೆ. ದೇಶದಲ್ಲಿ ನಾಗರಿಕರು ಹಾಗೂ ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿ ಸಿಲುಕಿಕೊಂಡಿದ್ದಾರೆ. ಭಾರತ ದೇಶಕ್ಕೆ ಬರಬೇಕು ಎಂದ್ರೆ ನಾಗರಿಕ ವಿಮಾನಯಾನ ಬಂದ್ ಮಾಡಲಾಗಿದೆ. ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಎಂ.ಬಿ.ವಿ.ಎಸ್ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿ ಹಾಕಿಕೊಂಡಿದ್ದಾನೆ.‌

ಹೌದು ಮುಂಡರಗಿ ಪಟ್ಟಣದ ಮಹಾಗಣಪತಿ ಬಿಳಿಮಗ್ಗದ ಎನ್ನುವ ವಿದ್ಯಾರ್ಥಿ ಉಕ್ರೇನ್ ದೇಶದ ಕೀವ್ ರಾಜಧಾನಿಯ ಚೆರ್ನಿವಿಸ್ ನಗರದಲ್ಲಿ ಸಿಲುಕಿಕೊಂಡಿದ್ದಾರೆ. ಮಾರ್ಚ 01 ನೇ ತಾರೀಖು ತಾಯಿ ನಾಡಿಗೆ ವಾಪಾಸ್ಸ್ ಬರಬೇಕಾಗಿತ್ತು. ಆತನ ಆಗಮನಕ್ಕಾಗಿ ಟಿಕೇಟ್ ಬುಕ್ ಕೂಡಾ ಮಾಡಲಾಗಿತ್ತು. ಆದ್ರೆ ದಿಢೀರ್ ಯುದ್ದ ಆರಂಭವಾಗಿದ್ದು, ಮಹಾಗಣಪತಿ ಉಕ್ರೇನ್ ದೇಶದಲ್ಲಿ ಸಿಲುಕಿ ಹಾಕಿಕೊಂಡಿದ್ದಾನೆ. ಹೀಗಾಗಿ ಮಹಾಗಣಪತಿ ತಂದೆ ಕಾಶಿನಾಥ ಬಿಳಿಮಗ್ಗದ ಅವರಲ್ಲಿ ಆತಂಕ ಹೆಚ್ಚಾಗಿದೆ. ಮಗನನ್ನು ಸುರಕ್ಷಿತವಾಗಿ ಕರೆದುಕೊಂಡು ಬರುವಂತೆ ಸರ್ಕಾರಕ್ಕೆ ವಿದ್ಯಾರ್ಥಿ ತಂದೆ ಕಾಶಿನಾಥ ಬಿಳಿಮಗ್ಗದ ಮನವಿ ಮಾಡಿದ್ದಾರೆ.

ಕಾಶಿನಾಥ ಹಾಗೂ ಭಾಗ್ಯಲಕ್ಷ್ಮಿ ಬಿಳಿಮಗ್ಗದ ಅವರಿಗೆ ಇಬ್ಬರು ಗಂಡು ಮಕ್ಕಳು ಮಹಾಗಣಪತಿ ದೊಡ್ಡ ಮಗ, ಮುಂಡರಗಿ ಪಟ್ಟಣದ ಅನ್ನದಾನೇಶ್ವರ ಪಿಯು ಕಾಲೇಜಿನಲ್ಲಿ ಸೈನ್ಸ್ ಮಾಡಿ ಉತ್ತಮ ಅಂಕಗಳನ್ನು ಪಡೆದುಕೊಂಡು ಪಾಸ್ ಆಗಿದ್ದಾನೆ. ಉಕ್ರೇನ್ ದೇಶದ ಚೆರ್ನಿವೀಸ್ ನಗರದ ಬೋಕೋಮಿನಿನ್ ಸ್ಟೇಟ್ ಮೆಡಿಕಲ್ ವಿಶ್ವವಿದ್ಯಾಲಯದಲ್ಲಿ ಎಂಬಿವಿಎಸ್ ಓದುತ್ತಿದ್ದು, ಕಳೆದ ಒಂದುವರೆ ವರ್ಷಗಳಿಂದ ವ್ಯಾಸಂಗ ಮಾಡುತ್ತಿದ್ದಾನೆ. ಮಹಾಗಣಪತಿ ಅವರ ತಾಯಿ ಭಾಗ್ಯಲಕ್ಷ್ಮೀ ಕೂಡಾ 2021 ಅಗಸ್ಟ್ ತಿಂಗಳಲ್ಲಿ ನಿಧನ ಹೊಂದಿದ್ದಾರೆ. ಮಹಾಗಣಪತಿ ತಂದೆ ಕಾಶಿನಾಥ, ಅಜ್ಜಿ, ಇನ್ನೊರ್ವ ಸಹೋದರ ಹೈಸ್ಕೂಲ್ ನಲ್ಲಿ ಅಭ್ಯಾಸ ಮಾಡುತ್ತಿದ್ದಾನೆ. ಮಹಾಗಣಪತಿ ಒಳ್ಳೆಯ ವಿದ್ಯಾರ್ಥಿಯಾಗಿದ್ದ. ಇನ್ನೂ ಮಹಾಗಣಪತಿ ಕುಟುಂಬಸ್ಥರು ಮಹಾಗಣಪತಿ ಜೊತೆಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದು, ನಾವು ಸುರಕ್ಷಿತವಾಗಿ ಇದ್ದೇವೆ, ನೀವು ಭಯ ಪಡಬೇಡಿ ಎಂದು ಹೇಳಿದ್ದಾನೆ.‌ ಆದ್ರೆ ಪೋಷಕರು ಮಾತ್ರ ಆತಂಕದಲ್ಲಿ ಇದ್ದಾರೆ. ಹೀಗಾಗಿ ಆದಷ್ಟು ಬೇಗ ಉಕ್ರೇನ್ ದೇಶದಿಂದ‌ ಕರೆದುಕೊಂಡು ಬರುವಂತೆ ಸಂಬಧಿ ಬಸವರಾಜ್ ಮನವಿ ಮಾಡಿದ್ದಾರೆ. ಉಕ್ರೇನ್ ದೇಶದಲ್ಲಿ ಸಿಲಿಕಿಕೊಂಡ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರುವಂತೆ ಒತ್ತಾಯ ಮಾಡಲಾಗಿದೆ. ಕೇಂದ್ರ ಸರ್ಕಾರ ಕೂಡಾ ಭಾರತೀಯ ನಾಗರಿಕರು ಹಾಗೂ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕಾಗಿದೆ.

ಇದನ್ನೂ ಓದಿ:

Russia Ukraine War ಉಕ್ರೇನ್‌ನಲ್ಲಿ ಬಾಂಬ್ ಶೆಲ್ಟರ್‌ಗಳನ್ನು ಹೇಗೆ ಕಂಡುಹಿಡಿಯಲು ಗೂಗಲ್ ಮಾಡಿ ಎಂದ ಭಾರತೀಯ ರಾಯಭಾರ ಕಚೇರಿ

ವರದಿ: ಸಂಜೀವ ಪಾಂಡ್ರೆ ಟಿವಿ9 ಗದಗ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್