4 ತಿಂಗಳ ಹಸುಗೂಸಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ತಾಯಿ; ಮಗುವಿನ ಆರೈಕೆ ಮಾಡಿ ಮಾನವೀಯತೆ ಮೆರೆದ ಆಶಾ ಕಾರ್ಯಕರ್ತೆ

ಬಾಹ್ಯ ಪರೀಕ್ಷಾರ್ಥಿಯಾಗಿರೋ ತಸ್ಲೀಮಾ ಮಕಾನದಾರ್, ಅತ್ತ ತಾಯಿ ಪರೀಕ್ಷೆ ಬರೆಯುತ್ತಿದ್ದರೆ ಇತ್ತ ಮಗುವಿನ ಆರೈಕೆಯನ್ನು ಆಶಾ ಕಾರ್ಯಕರ್ತೆ ಮಾಡಿದ್ದಾರೆ. ಆಶಾ ಕಾರ್ಯಕರ್ತೆ ಯಾದ ಉಮಾ ಶಾರದಹಳ್ಳಿ  ಮಗುವನ ಆರೈಕೆ ಮಾಡಿ ಮಾನವೀಯತೆ ಮೆರೆದಿದ್ದಾರೆ. 

4 ತಿಂಗಳ ಹಸುಗೂಸಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ತಾಯಿ; ಮಗುವಿನ ಆರೈಕೆ ಮಾಡಿ ಮಾನವೀಯತೆ ಮೆರೆದ ಆಶಾ ಕಾರ್ಯಕರ್ತೆ
ತಸ್ಲೀಮಾ ಮಕಾನದಾರ್ ಮತ್ತು ಆಶಾ ಕಾರ್ಯಕರ್ತೆ ಉಮಾ ಶಾರದಹಳ್ಳಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 28, 2022 | 2:12 PM

ವಿಜಯಪುರ: ನಾಲ್ಕು ತಿಂಗಳ ಹಸುಗೂಸಿನೊಂದಿಗೆ ಪರೀಕ್ಷಾ ಕೇಂದ್ರ (Exam Center) ಕ್ಕೆ ಪರೀಕ್ಷಾರ್ಥಿ ಮಹಿಳೆ ಆಗಮಿಸಿದ್ದಾರೆ. ಪರೀಕ್ಷಾ ಕೇಂದ್ರದ ಹೊರಗಡೆ ಆಶಾ ಕಾರ್ಯಕರ್ತೆ ಬಳಿ ಮಗುವನ್ನು ಬಿಟ್ಟು ಪರೀಕ್ಷೆಗೆ ತಾಯಿ ಹಾಜರಾಗಿದ್ದಾರೆ. ಮುದ್ದೇಬಿಹಾಳ ಪಟ್ಟಣದ ಅಭ್ಯುದಯ ಪರೀಕ್ಷಾ ಕೇಂದ್ರದಲ್ಲಿ ದೃಶ್ಯ  ಕಂಡು ಬಂದಿದೆ. ತಸ್ಲೀಮಾ ಮಕಾನದಾರ್ ತಮ್ಮ ನಾಲ್ಕು ತಿಂಗಳ ಮಗುವಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಪರೀಕ್ಷಾರ್ಥಿ. ಬಾಹ್ಯ ಪರೀಕ್ಷಾರ್ಥಿಯಾಗಿರೋ ತಸ್ಲೀಮಾ ಮಕಾನದಾರ್, ಅತ್ತ ತಾಯಿ ಪರೀಕ್ಷೆ ಬರೆಯುತ್ತಿದ್ದರೆ ಇತ್ತ ಮಗುವಿನ ಆರೈಕೆಯನ್ನು ಆಶಾ ಕಾರ್ಯಕರ್ತೆ ಮಾಡಿದ್ದಾರೆ. ಆಶಾ ಕಾರ್ಯಕರ್ತೆ ಯಾದ ಉಮಾ ಶಾರದಹಳ್ಳಿ  ಮಗುವಿನ ಆರೈಕೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಮೈಸೂರಿನಲ್ಲಿ ಪರೀಕ್ಷೆ (Exam) ಬರೆಯುವ ಸಂದರ್ಭದಲ್ಲಿ ಕುಸಿದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಘಟನೆ ಸಂಭವಿಸಿದ್ದು, ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿದ್ದಾಳೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ (SSLC Exam) ಆರಂಭವಾಗಿದೆ. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಪರೀಕ್ಷೆ ಬರೆಯಲಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾಳೆ. ಈ ವೇಳೆ ಪ್ರಶ್ನಿಸಿದಾಗ, ನನಗೆ ಶಿಕ್ಷಣ ಇಲಾಖೆಯ ಆದೇಶ ಗೊತ್ತಿಲ್ಲ. ನೋ ಐಡಿಯಾ ಎಂದಿದ್ದಾಳೆ. ಶಾಲೆಯಲ್ಲಿ ನಮಗೆ ಈ ಆದೇಶದ ಬಗ್ಗೆ ಹೇಳಿಲ್ಲ. ಹಿಜಾಬ್ ತೆಗೆಯಿರಿ ಅಂದರೆ ರಿಮೂವ್ ಮಾಡಿ ಹೋಗುತ್ತೇವೆ. ಇಲ್ಲ ಅಂದರೆ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ ಎಂದಿದ್ದಾಳೆ. ಹಿಜಾಬ್ ತಗಿಯೋಕೆ ಮನಸ್ಸಿಲ್ಲ. ಆದರೆ ಹಿಜಾಬ್ ತಗೆದು ಪರೀಕ್ಷಾ ಕೊಠಡಿಗೆ ಹೋಗಬೇಕಾಗಿದೆ. ಸರ್ಕಾರದ ನಿಯಮದಂತೆ ಹಿಜಾಬ್ ತಗೆದಿಟ್ಟು ಪರೀಕ್ಷೆ ಬರೆಯುವಂತೆ ಮಕ್ಕಳಿಗೆ ಹೇಳಿದ್ದೇವೆ. ಮಕ್ಕಳು ಕಷ್ಟಪಟ್ಟು ವರ್ಷಪೂರ್ತಿ ವಿದ್ಯಾಭ್ಯಾಸ ಮಾಡಿದ್ದಾರೆ. ಈಗ ಹಿಜಾಬ್ ತಗೆಯಲ್ಲ ಅಂದರೆ ಮಕ್ಕಳ ಭವಿಷ್ಯ ಹಾಳಾಗುತ್ತೆ. ಮನೆಯಿಂದ ಶಾಲೆಯವರೆಗೂ ಹಿಜಾಬ್ ಧರಿಸಿ ಬರುತ್ತೇವೆ ಅಂತ ವಿಜಯನಗರದಲ್ಲಿ ಪೋಷಕರು ಹೇಳಿದರು.

ಇದನ್ನೂ ಓದಿ:

‘ಮೈಸೂರು ಹುಲಿ’ ಬಿರುದು ಕೊಟ್ಟವರು ಯಾರು? ಇನ್ನು ಟಿಪ್ಪು ಸುಲ್ತಾನ್ ವೈಭವೀಕರಣ ಬೇಡ- ಸರ್ಕಾರಕ್ಕೆ ರೋಹಿತ್ ಚಕ್ರತೀರ್ಥ ಸಲಹೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್