ಡಿಜೆ ಹಳ್ಳಿ ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್
ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಡಿಜೆ ಹಳ್ಳಿ ಇನ್ಸ್ಪೆಕ್ಟರ್ ವಿರುದ್ಧ ಕೇಳಿಬಂದಿದೆ. 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದು, ಈ ಸಂಬಂಧ ಇದೀಗ ಮಹಿಳೆ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದಾರೆ. ಹಾಗಾದ್ರೆ, ಸಂತ್ರಸ್ತೆ ಮಾಡಿರುವ ಆರೋಪದಲ್ಲೇನಿದೆ?

ಬೆಗಳೂರು, (ಅಕ್ಟೋಬರ್ 22): ಡಿ.ಜೆ.ಹಳ್ಳಿ ಪೊಲೀಸ್ ಠಾಣೆ (DJ halli Police Inspector) ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಮಹಿಳೆ ಅತ್ಯಾಚಾರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ರಿಜಿಸ್ಟರ್ ಸುನಿಲ್ ಅವರು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ನ್ಯಾಯಕ್ಕಾಗಿ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದಾರೆ.
ಡಿ.ಜೆ.ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಸುನೀಲ್ ಅವರು ಮದುವೆ ಆಗುವುದಾಗಿ ನಂಬಿಸಿ ಒಂದು ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ ಕೊಡುಸ್ತೀನಿ, ಬ್ಯೂಟಿ ಪಾರ್ಲರ್ ಕೊಡಿಸುವುದಾಗಿ ಹೇಳಿ ತಮ್ಮ ಮನೆ ಹಾಗೂ ಹೋಟೆಲ್ ಗೆ ಕರೆಸಿ ಅತ್ಯಾಚಾರವೆಸಗಿದ್ದಾರೆ. ಪ್ರತಿಬಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡಿದ್ದು, ನಮ್ಮ ವಿಚಾರ ಯಾರಿಗಾದರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ನೋಡಿ: ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡ ಇನ್ಸ್ಪೆಕ್ಟರ್: ಪೊಲೀಸಪ್ಪನ ಕಾಮ ಪುರಾಣ ಬಟಾಬಯಲು
ಇನ್ನು ಇನ್ಸ್ಪೆಕ್ಟರ್ ಸುನಿಲ್ ಹಾಗೂ ಸಂತ್ರಸ್ತೆಯ ನಡುವಿನ ವಾಟ್ಸಪ್ ಚಾಟಿಂಗ್ ಬಯಲಿಗೆ ಬಂದಿದ್ದು, ಇದರಲ್ಲಿ ಇಬ್ಬರು ಅನ್ಯೋನ್ಯವಾಗಿ ಚಿನ್ನು ಮುದ್ದು ಎಂದು ಮೆಸೇಜ್ ಮಾಡಿದ್ದಾರೆ. ಅಲ್ಲದೇ ವಿಡಿಯೋ ಹಾಗೂ ವಾಯ್ಸ್ ಕಾಲ್ ಮಾಡಿದ್ದಾರೆ.
ಸದ್ಯ ಸಂತ್ರಸ್ತೆ ಮಹಿಳೆ, ಡಿಜಿ ಹಳ್ಳಿ ಇನ್ಸ್ಪೆಕ್ಟರ್ ಸುನಿಲ್ ವಿರುದ್ಧ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮೆಟ್ಟಿಲೇರಿದ್ದು, ಮುಂದೆ ಈ ಪ್ರಕರಣ ಯಾವ ಹಂತಕ್ಕೆ ತಲುಪಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:47 am, Wed, 22 October 25



