ಬೆಂಗಳೂರಿನಲ್ಲಿ ಮೂರು ಆಸ್ಪತ್ರೆ ಅಲೆದರೂ ಸಿಗಲಿಲ್ಲ ಬೆಡ್; ಉಸಿರಾಡಲಾಗದೆ ನರಳಿ ಪ್ರಾಣಬಿಟ್ಟ ವ್ಯಕ್ತಿ
ಈ ವ್ಯಕ್ತಿಯನ್ನು ಮೊದಲು ಕೆ.ಸಿ.ಜನರಲ್ ಆಸ್ಪತ್ರೆಗೆ ಕಳಿಸಲಾಗಿತ್ತು. ಅಲ್ಲಿ ಬೆಡ್ ಇಲ್ಲವೆಂದು ವಾಪಸ್ ಕಳಿಸಲಾಯಿತು. ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದ ವ್ಯಕ್ತಿಗೆ ಅಲ್ಲಿಯೂ ನಿರಾಸೆಯೇ ಕಾದಿತ್ತು.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಿನೇದಿನೆ ಕೊರೊನಾ ಭೀಕರತೆ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ನರಳಿ, ಜೀವ ಬಿಡುತ್ತಿರುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಇದೀಗ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಇಂಥದ್ದೇ ಒಂದು ಮನಕಲಕುವ ಘಟನೆ ನಡೆದಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ, ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೆ ನರಳಿ ನರಳಿ ಜಯದೇವ ಆಸ್ಪತ್ರೆ ಎದುರು ಪ್ರಾಣಬಿಟ್ಟಿದ್ದಾರೆ. ಈ ವ್ಯಕ್ತಿಯನ್ನು ಮೊದಲು ಕೆ.ಸಿ.ಜನರಲ್ ಆಸ್ಪತ್ರೆಗೆ ಕಳಿಸಲಾಗಿತ್ತು. ಅಲ್ಲಿ ಬೆಡ್ ಇಲ್ಲವೆಂದು ವಾಪಸ್ ಕಳಿಸಲಾಯಿತು. ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದ ವ್ಯಕ್ತಿಗೆ ಅಲ್ಲಿಯೂ ನಿರಾಸೆಯೇ ಕಾದಿತ್ತು. ಉಸಿರಾಡಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದರೂ ಒಂದು ಬೆಡ್ ಸಿಗಲಿಲ್ಲ. ಹಾಗೆ, ಜಯದೇವ ಆಸ್ಪತ್ರೆಗೆ ಹೋದಾಗಲೂ ಸಹ ಅಲ್ಲಿನ ವೈದ್ಯರು ಬೆಡ್ ಇಲ್ಲವೆಂದು ಹೇಳಿದ್ದಾರೆ. ಸರಿಯಾದ ಸಮಯಕ್ಕೆ ಬೆಡ್ ಸಿಗದ ಕಾರಣ ವ್ಯಕ್ತಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ಹೆಚ್ಚುತ್ತಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಬೆಡ್ ಅಭಾವದ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಇದು ಜನರಲ್ಲಿ ಇನ್ನಷ್ಟು ಆತಂಕ ಹುಟ್ಟುಹಾಕಿದೆ.
ಇದನ್ನೂ ಓದಿ: ಲಾಕ್ಡೌನ್ ಮಾಡುವಂತೆ ಸರ್ಕಾರಕ್ಕೆ ನೇರ ಸಲಹೆ ನೀಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
ದೇಶದಲ್ಲಿ ಇಲ್ಲಿಯವರೆಗೆ 44 ಲಕ್ಷ ಡೋಸ್ ಲಸಿಕೆ ವ್ಯರ್ಥ; ಅತಿ ಹೆಚ್ಚು ಪೋಲಾಗಿದ್ದು ತಮಿಳುನಾಡಿನಲ್ಲಿ
A person died near Jayadeva Hospital due to not available of beds in bengaluru