
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ರುದ್ರನರ್ತನ ಮುಂದುವರಿದಿದ್ದು, ಇವತ್ತು ಇದುವರೆಗಿನ ದಾಖಲೆ ಮೀರಿ ಒಂದೇ ದಿನ 8,642 ಜನರಿಗೆ ಸೋಂಕು ತಗುಲಿದೆ. ಇದು ಇದುವರೆಗಿನ ಒಂದೇ ದಿನ ಅತಿ ಹೆಚ್ಚು ಕೊರೊನಾ ಸೋಂಕು ತಗುಲಿರೋ ದಾಖಲೆಯಾಗಿದೆ.
ಬೆಂಗಳೂರಿನಲ್ಲಿ ಕೂಡಾ ಕೊರೊನಾ ಸೋಂಕಿತರ ಇಂದಿನ ಸಂಖ್ಯೆ ದಾಖಲೆಯ2,804ರಷ್ಟಿದೆ. ಇದರೊಂದಿಗೆ ಬೆಂಗಳೂರಿನ 96,910 ಜನರು ಸೇರಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗ 2,49,590 ಕ್ಕೇರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇವತ್ತು ಒಂದೇ ದಿನ 126 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಈಗ 4,327 ರಷ್ಟಾಗಿದೆ. ಬೆಂಗಳೂರಲ್ಲಿಯೇ ಇವತ್ತು ಒಂದೇ ದಿನ 56 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಒಟ್ಟು ಸೋಂಕಿತರ ಪೈಕಿ 1,64,150 ಜನರು ಕೊರೊನಾದಿಂದ ಗುಣಮುಖರಾಗಿ ಡಿಸ್‌ಚಾರ್ಜ್ ಆಗಿದ್ದಾರೆ. 81,097ಜನರಿಗೆ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.