AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಜಾತಿ ಗಣತಿ ಮಾಡುತ್ತಿದ್ದಾಗೇ ಶಿಕ್ಷಕ ಸಾವು, ಸಚಿವರ ಜನತಾ ದರ್ಶನದಲ್ಲಿ ASI ದುರಂತ ಅಂತ್ಯ

ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಮತ್ತೊಂದೆಡೆ ಬಳ್ಳಾರಿಯ ಹೊಸ ಡಿಸಿ ಕಚೇರಿ ಮುಂಭಾಗ ಸಚಿವರ ಜನತಾ ದರ್ಶನದ ವೇಳೆ ಕರ್ತವ್ಯದಲ್ಲಿದ್ದ ಎಎಸ್ಐ ದುರಂತ ಸಾವು ಕಂಡಿದ್ದಾರೆ. ಈ ಎರಡು ಪ್ರತ್ಯೇಕ ಘಟನೆ ವಿವರ ಇಲ್ಲಿದೆ.

ಪ್ರತ್ಯೇಕ ಘಟನೆ: ಜಾತಿ ಗಣತಿ ಮಾಡುತ್ತಿದ್ದಾಗೇ ಶಿಕ್ಷಕ ಸಾವು, ಸಚಿವರ ಜನತಾ ದರ್ಶನದಲ್ಲಿ ASI ದುರಂತ ಅಂತ್ಯ
Ramakrishan And Srinivas Rao
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ|

Updated on:Sep 29, 2025 | 7:05 PM

Share

ಚಿಕ್ಕಬಳ್ಳಾಪುರ(ಸೆಪ್ಟೆಂಬರ್ 29): ಜಾತಿ ಗಣತಿ (caste census) ಮಾಡುವ ವೇಳೆ ಶಿಕ್ಷಕರೊಬ್ಬರಿಗೆ ಹೃದಯಾಘಾತ ಸಂಭವಿಸಿ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ (chikkaballapur) ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಜಾತಿ ಗಣತಿಯ ಕರ್ತವ್ಯದಲ್ಲಿದ್ದ ಮುಖ್ಯ ಶಿಕ್ಷಕ ರಾಮಕೃಷ್ಣಪ್ಪ(57) ಮೃತ ದುರ್ದೈವಿ. ಚಿಂತಾಮಣಿ ತಾಲ್ಲೂಕಿನ ಬೂರಗಮಾಕಲಹಳ್ಳಿ ಗ್ರಾಮದ ನಿವಾಸಿಯಾಗಿರುವ ರಾಮಕೃಷ್ಣಪ್ಪ ಅವರು, ದಿಗವಕೋಟೆ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಾತಿ ಗಣತಿಯ ಕೆಲಸದಲ್ಲಿ ತೊಡಗಿದ್ದ ವೇಳೆ ಅವರಿಗೆ ದಿಢೀರ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಮುರಗಮಲ್ಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಆದರೆ, ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿ ನಗರದ ಡೆಕನ್ ಆಸ್ಪತ್ರೆಗೆ ರವಾನಿಸಲಾಗಿಯ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ರಾಮಕೃಷ್ಣಪ್ಪ ಅವರು ಡೆಕನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಯುವಕ ಅನುಮಾನಸ್ಫದ ಸಾವು

ಚಿಕ್ಕಬಳ್ಳಾಪುರ: ನಗರದ ಕಂದವಾರ ಕೆರೆ ಬಳಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. 3 ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ರಾಮಗಾನಪರ್ತಿ ಗ್ರಾಮದ ಗಣೇಶ್(23) ಎನ್ನುವ ಯುವಕನ ಶವ ಚಿಕ್ಕಬಳ್ಳಾಪುರ ನಗರದ ಕಂದವಾರ ಕೆರೆಯ ಬಳಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ರಸ್ತೆ ಗುಂಡಿ ಅವಾಂತರಕ್ಕೆ ವಿದ್ಯಾರ್ಥಿನಿ ಬಲಿ

ಸಚಿವರ ಜನತಾ ದರ್ಶನ ವೇಳೆ ಎಎಸ್ಐ ಸಾವು

ಇನ್ನು ಬಳ್ಳಾರಿಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರ ಜನತಾ ದರ್ಶನದ ವೇಳೆ ಕರ್ತವ್ಯದಲ್ಲಿದ್ದ ಎಎಸ್ಐ ಸಾವನ್ನಪ್ಪಿದ್ದಾರೆ. ಬಳ್ಳಾರಿಯ ಹೊಸ ಡಿಸಿ ಕಚೇರಿ ಮುಂಭಾಗ ನಡೆದಿದ್ದ ಜನತಾ ದರ್ಶನ ವೇಳೆ ಎಪಿಎಂಸಿ ಠಾಣೆಯ ಎಎಸ್ಐ ಶ್ರೀನಿವಾಸ ರಾವ್(54) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಕರ್ತವ್ಯದಲ್ಲಿದ್ದಾಗ ಲೋಬಿಪಿಯಿಂದ ಕುಸಿದುಬಿದ್ದಿದ್ದ ಶ್ರೀನಿವಾಸ ರಾವ್ ಅವರನ್ನು ಕೂಡಲೇ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆ, ಚಿಕಿತ್ಸೆ ಫಲಿಸದೆ ಎಎಸ್ಐ ಶ್ರೀನಿವಾಸ ರಾವ್ ಕೊನೆಯಸಿರೆಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Mon, 29 September 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ