AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು, ಕೈಕಾಲು ಛಿದ್ರಗೊಂಡ ಮಕ್ಕಳ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪೋಷಕರು

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಸಾರಿಗೆ ಬಸ್​, ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದುಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛಿದ್ರಗೊಂಡಿವೆ. ಮಕ್ಕಳ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ರಾಯಚೂರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು, ಕೈಕಾಲು ಛಿದ್ರಗೊಂಡ ಮಕ್ಕಳ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪೋಷಕರು
ರಾಯಚೂರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು, ಕೈಕಾಲು ಛಿದ್ರಗೊಂಡ ಮಕ್ಕಳ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪೋಷಕರು
ಭೀಮೇಶ್​​ ಪೂಜಾರ್
| Edited By: |

Updated on:Sep 05, 2024 | 8:03 PM

Share

ರಾಯಚೂರು, ಸೆಪ್ಟೆಂಬರ್​ 05: ಕೆಎಸ್​ಆರ್​ಟಿಸಿ ಬಸ್ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ (accident) ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್​​(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛಿದ್ರಗೊಂಡಿವೆ. ಪೋಷಕರು ಘಟನೆ ನಡೆದ ಸ್ಥಳಕ್ಕೆ ಬಂದು ರೋದಿಸಿದ್ದಾರೆ. ಮಕ್ಕಳ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: Black Day Of Raichur: ಮಾನ್ವಿ ಸ್ಕೂಲ್ ಬಸ್​ ಅಪಘಾತಕ್ಕೆ ರಸ್ತೆ ಗುಂಡಿಯೇ ವಿಲನ್

A terrible accident in Raichur

ಆಸ್ಪತ್ರೆಯತ್ತ ಮಕ್ಕಳ ಪೋಷಕರು ಆಗಮಿಸುತ್ತಿದ್ದು, ಐಸಿಯುನಲ್ಲಿ ಮಕ್ಕಳನ್ನ ತೋರಿಸುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪೋಷಕರೊಂದಿಗೆ ವಾಗ್ವಾದ ಉಂಟಾಗಿದೆ. ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದ್ದು, ಚಿಕಿತ್ಸೆ ಸ್ಪಂದಿಸುತ್ತಿರುವ ಮಕ್ಕಳಿನ್ನು ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದ್ದು, ಕೆಲವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.

ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಡಿಸಿ ಕೆ.ನಿತೇಶ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮ ಸಮೀಪ ನಡೆದಿದ್ದ ಅಪಘಾತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಯಗೊಂಡ ಮಕ್ಕಳ ಚಿಕಿತ್ಸೆಗೆ ತಲಾ 3 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ವೃತ್ತಿ ಜೀವನದ ಕೊನೆಯಲ್ಲಿ ಕ್ಯಾನ್ಸರ್ ಮಹಾಮಾರಿಯಿಂದ ಬಳಲುತ್ತಿದ್ದ ಮಹಿಳಾ ಪಿಎಸ್​​ಐ ಇನ್ನಿಲ್ಲ

ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಪಘಾತದಲ್ಲಿ ಸಮರ್ಥ್​​(7), ಶ್ರೀಕಾಂತ್(12) ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವು

ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹರಗುವಳ್ಳಿಯಲ್ಲಿ ನಡೆದಿದೆ. ಜ್ಯೂಸ್ ಬಾಟಲ್​ ಹಿಡಿದುಕೊಂಡು ಆಟವಾಡುತ್ತಿದ್ದಾಗ ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಮಗು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:28 pm, Thu, 5 September 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ