ಇಂದಿನ ರಾಜ್ಯ ಸಚಿವ ಸಂಪುಟದಲ್ಲಿ ಒಟ್ಟು 20 ನಿರ್ಣಯ: ಯಾವುವು? ಇಲ್ಲಿದೆ ವಿವರ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 20, 2024 | 4:27 PM

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜೂನ್ 20) ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಒಟ್ಟು 20 ವಿಷಯಗಳ ಮೇಲೆ ಚರ್ಚೆ ನಡೆದು ನಿರ್ಣಯ ಕೈಗೊಳ್ಳಲಾಗಿದೆ. ಸಂಪುಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್. ಕೆ ಪಾಟೀಲ್ ಅವರು 20 ವಿಷಯಗಳ ಮೇಲಿನ ಚರ್ಚೆ ಹಾಗೂ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಂದಿನ ರಾಜ್ಯ ಸಚಿವ ಸಂಪುಟದಲ್ಲಿ ಒಟ್ಟು 20 ನಿರ್ಣಯ: ಯಾವುವು? ಇಲ್ಲಿದೆ ವಿವರ
ಇಂದಿನ ರಾಜ್ಯ ಸಚಿವ ಸಂಪುಟದಲ್ಲಿ ಒಟ್ಟು 20 ನಿರ್ಣಯ: ಯಾವುವು? ಇಲ್ಲಿದೆ ವಿವರ
Follow us on

ಬೆಂಗಳೂರು, ಜೂನ್​ 20: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ಸಂಪುಟ ಸಭೆ ಮಾಡಲಾಗಿದೆ. ಸಭೆಯಲ್ಲಿ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ಸೇರಿದಂತೆ ಒಟ್ಟು 20 ವಿಷಯಗಳ ಮೇಲೆ ಚರ್ಚೆ ಮಾಡಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸಂಪುಟ ಸಭೆ ನಂತರ ಕಾನೂನು ಸಚಿವ ಹೆಚ್.ಕೆ.ಪಾಟೀಲ್ (HK Patil) 20 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ವಾಣಿಜ್ಯ ಕೈಗಾರಿಕೆ ಇಲಾಖೆ ಗೆ ಸಂಬಂಧಿಸಿದಂತೆ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ನೀಡಲಾಗಿದೆ. ನಿಷ್ಕ್ರಿಯವಾಗಿದ್ದ 1304 ಎಕರೆ ಪ್ರದೇಶದಲ್ಲಿ ಗಣಿ ಗುತ್ತಿಗೆ ಚಟುವಟಿಕೆ ಮುಂದುವರಿಸಲು ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಹಮತಿಸಿದೆ. ಗಣಿ ಚಟುವಟಿಕೆಗಳ ಪ್ರಾರಂಭಕ್ಕೆ ಅನುಮತಿ ನೀಡಲು ಸಂಪುಟ ಗ್ರೀನ್ ಸಿಗ್ನಲ್ ಸೂಚಿಸಿದೆ.

ಇದನ್ನೂ ಓದಿ: ರಾಜ್ಯ ನೌಕರರಿಗೆ ಗುಡ್ ನ್ಯೂಸ್, 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ಮುಂದಾದ ಸರ್ಕಾರ

ಟೇನಿಂಗ್ ಡಂಪ್ಸ್ ಬಳಸಿ ಗಣಿ ಚಟುವಟಿಕೆ ಮುಂದುವರಿಸಲು ಅವಕಾಶ ನೀಡಲಾಗಿದ್ದು, 2230 ಎಕರೆ ಭೂಮಿ ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ನೀಡಬೇಕು. 75.24 ಕೋಟಿ ರೂ. ಸರ್ಕಾರಕ್ಕೆ ಪಾವತಿ ಮಾಡುವುದು ಬಾಕಿ ಇದೆ. ಅದನ್ನೂ ಭರಿಸುವಂತೆ ಭಾರತ್ ಮೈನಿಂಗ್ಸ್​​ಗೆ ಸೂಚನೆ ನೀಡಲಾಗಿದೆ.

ವಿಶ್ವ ವಿದ್ಯಾಲಯಗಳ ಅಭಿವೃದ್ದಿಗೆ 297.77 ಕೋಟಿ ರೂ. ಬಿಡುಗಡೆಗೆ ಕ್ಯಾಬಿನೆಟ್ ಅನುಮೋದಿಸಲಾಗಿದೆ. ಶಿಕ್ಷಣ ಇಲಾಖೆಯ ಎಲ್ಲ ಸರ್ಕಾರಿ ಶಾಲೆ ಹಾಗೂ ಪದವಿ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ನಿರ್ಧಾರ ಮಾಡಲಾಗಿದ್ದು, 29.15 ಕೋಟಿ ರೂ. ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಉಚಿತ ನೀರಿನ ಸೌಲಭ್ಯ ಒದಗಿಸಲಾಗುತ್ತಿದೆ.

ಇದನ್ನೂ ಓದಿ: ಸಚಿವ ನಾಗೇಂದ್ರ ರಾಜಿನಾಮೆ ಬಳಿಕ ಕ್ರೀಡಾ, ಪರಿಶಿಷ್ಟ ಪಂಗಡಗಳ ಇಲಾಖೆ ಸಿಎಂ ಕೈಯಲ್ಲಿ, ಅಧಿಕಾರಿಗಳಿಗೆ ಸಿದ್ದರಾಮಯ್ಯ ಕ್ಲಾಸ್​​​

ಕೋಟಿ ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಉಚಿತ ನೀರಿನ ಸೌಲಭ್ಯ, ಕ್ರೈಸ್ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ. ರೋಟರಿ ಸಂಸ್ಥೆಗೆ ಇದರ ಜವಾಬ್ದಾರಿ ನೀಡಲಾಗಿದೆ.

ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬೆಳಗಾವಿ ಬಳಿಯಲ್ಲಿ ಬಡಾವಣೆ ನಿರ್ಮಾಣಕ್ಕೆ 137 ಕೋಟಿ ರೂ. ಅಂದಾಜು ವೆಚ್ಚಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.