AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ, ಬಳ್ಳಾರಿಯಲ್ಲಿ ಬೀದಿನಾಯಿ ದಾಳಿಗೆ ಒಟ್ಟು ಮೂವರು ಮಕ್ಕಳ ಸಾವು: ಮತ್ತೆ ಗರಿಗೆದರಿದ ನಾಯಿ ನಿರ್ವಹಣೆ ಚರ್ಚೆ

ಇತ್ತೀಚೆಗೆ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಶಿವಮೊಗ್ಗ, ಬಳ್ಳಾರಿ ಸೇರಿದಂತೆ ಅನೇಕ ಕಡೆಗಳಲ್ಲಿ ಬೀದಿ ನಾಯಿಗಳ ದಾಳಿಗೆ ಅನೇಕ ಮಕ್ಕಳು ಮೃತಪಟ್ಟಿದ್ದಾರೆ.

ಶಿವಮೊಗ್ಗ, ಬಳ್ಳಾರಿಯಲ್ಲಿ ಬೀದಿನಾಯಿ ದಾಳಿಗೆ ಒಟ್ಟು ಮೂವರು ಮಕ್ಕಳ ಸಾವು: ಮತ್ತೆ ಗರಿಗೆದರಿದ ನಾಯಿ ನಿರ್ವಹಣೆ ಚರ್ಚೆ
ಬೀದಿ ನಾಯಿಗಳು
TV9 Web
| Edited By: |

Updated on: Dec 02, 2022 | 7:33 AM

Share

ಶಿವಮೊಗ್ಗ: ಬೀದಿ ನಾಯಿಗಳ ದಾಳಿಗೆ ಗಾಯಗೊಂಡಿದ್ದ 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ನಿನ್ನೆ(ಗುರುವಾರ) ನಡೆದಿದೆ. ಸೈಯದ್ ಮದನಿ ಎಂಬಾತನೇ ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. ಬುಧವಾರ(ನ.30) ಸಂಜೆ 4 ಗಂಟೆ ಸುಮಾರಿಗೆ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ತಂದೆಯನ್ನ ಹಿಂಬಾಲಿಸಿಕೊಂಡು ಹೋಗುವಾಗ 7 ರಿಂದ 8 ಬೀದಿ ನಾಯಿಗಳ ಹಿಂಡು ಬಾಲಕನ ಮೇಲೆ ದಾಳಿ ಮಾಡಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥತೆಯಿಂದ ಬಳಲಿದ ಬಾಲಕನನ್ನು ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೈಯದ್ ಮದನಿ ಸಾವನಪ್ಪಿದ್ದಾನೆ.

ಬಳ್ಳಾರಿಯ ಬಾದನಹಟ್ಟಿಯಲ್ಲೂ ಹುಚ್ಚುನಾಯಿ ದಾಳಿ, ಇಬ್ಬರು ಮಕ್ಕಳು ಬಲಿ

ಹುಚ್ಚುನಾಯಿ ಕಡಿತದಿಂದ (Dog Bite) ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ  ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 3 ವರ್ಷದ ಸುರಕ್ಷಿತಾ ಹಾಗೂ 7 ವರ್ಷದ ಶಾಂತಕುಮಾರ್ ಮೃತಪಟ್ಟ ದುರ್ದೈವಿ ಮಕ್ಕಳು. ಇಬ್ಬರು ಮಕ್ಕಳ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಮಕ್ಕಳನ್ನು ಹೊರಗೆ ಕಳುಹಿಸಲು ಗ್ರಾಮಸ್ಥರು ಹೆದರುತ್ತಿದ್ದಾರೆ.

ಮಕ್ಕಳು ಆಟವಾಡುತ್ತಿದ್ದಾಗ ದಾಳಿ ಮಾಡಿದ್ದ ನಾಯಿ, ಸುರಕ್ಷಿತಾಳ ಮುಖಕ್ಕೆ ಹಾಗೂ ಶಾಂತಕುಮಾರ್ ಕೈಗೆ ಕಚ್ಚಿತ್ತು. ಇದರಿಂದ ತೀವ್ರ ಗಾಯಗೊಂಡಿದ್ದ ಸುರಕ್ಷಿತಾ ನವೆಂಬರ್ 21ರಂದು ಮೃತಪಟ್ಟಿದ್ದಳು. ಚುಚ್ಚು ಮದ್ದು ಹಾಕಿದರೂ ಸಹ ಸುರಕ್ಷಿತಾ ಬದುಕುಳಿಯಲಿಲ್ಲ. ಇನ್ನು ಸಕಾಲಕ್ಕೆ ಚಿಕಿತ್ಸೆ ಪಡೆಯದ ಶಾಂತಕುಮಾರ್, ನವಂಬರ್ 22ರಂದು ಸಾವನ್ನಪ್ಪಿದ್ದಾನೆ. ಇದರಿಂದ ಗ್ರಾಮಸ್ಥರು ತಮ್ಮ ಮಕ್ಕಳನ್ನು ಹೊರಗಡೆ ಆಟವಾಡಲು ಬಿಡುತ್ತಿಲ್ಲ.

ಮಕ್ಕಳ ಸಾವಿನ ನಂತರ ಗ್ರಾಮಾಸ್ಥರು ನಾಯಿಯನ್ನು ಹೊಡೆದು ಕೊಂದಿದ್ದಾರೆ. ಇನ್ನು ವಿಷಯ ತಿಳಿದು ಗ್ರಾಮಕ್ಕೆ ಡಿ.ಎಚ್.ಓ ನೇತೃತ್ವದ ತಂಡ ಭೇಟಿ ನೀಡಿದ್ದು, ನಾಯಿಗಳಿಗೆ ವಾಕ್ಸಿನ್ ನೀಡಲು ಕ್ರಮಕೈಗೊಂಡಿದೆ. ಹಾಗೇ ನಾಯಿ ಕಡಿತ ಕಂಡು ಬಂದರೆ ಕೂಡಲೇ ಅಸ್ಪತ್ರೆಗೆ ದಾಖಲಿಸಲು ಜಾಗೃತಿ ಮೂಡಿಸಿದೆ.

ಇದನ್ನೂ ಓದಿ:‘Shocking News: ಆಟವಾಡುತ್ತಿದ್ದ 2 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ, ಕಚ್ಚಿ ಕೊಂದ ಬೀದಿ ನಾಯಿಗಳು!

ಇನ್ನು ಮೊದಲೆಲ್ಲಾ ಹೀಗೆ ಬೀದಿನಾಯಿಗಳ ಹಾವಳಿ ಹೆಚ್ಚಾದಾಗ ನಾಯಿಗಳನ್ನು ಹಿಡಿದು ಸಂತಾನಹರಣ, ಕಾಡಿಗೆ ಬಿಡುವುದು ಅಥವಾ ಸಾಯಿಸಲಾಗುತ್ತಿತ್ತು. ನಂತರದ ವರ್ಷಗಳಲ್ಲಿ ನಾಯಿಗಳನ್ನು ಕೊಲ್ಲಬಾರದು ಅಥವಾ ಹಿಂಸೆ ಮಾಡಬಾರದು ಎಂದು ಪ್ರಾಣಿದಯಾ ಸಂಘದವರು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ವಿರುದ್ದ ಪ್ರಕರಣ ದಾಖಲು ಮಾಡುವ ಭಯದಿಂದ ಯಾವುದೇ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳನ್ನು ಹಿಡಿಯುವ ಗೋಜಿಗೆ ಹೋಗುತ್ತಿಲ್ಲ ಎನ್ನುವುದು ಕೆಲವು ಅಧಿಕಾರಿಗಳು ಹೇಳುವ ಮಾತು.

ಇನ್ನಷ್ಟು ರಾಜ್ಯ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್