AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ: ವಿಕಲಚೇತನ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!

ಇತ್ತೀಚೆಗೆ ತಾಳ್ಮೆಯ ಕೊರತೆಯಿಂದಾಗಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಯಾವುದನ್ನು ಕೊಂಚ ತಾಳ್ಮೆಯಿಂದ ಹಿಂದೆ ಮುಂದೆ ಯೋಚನೆ ಮಾಡದೆ ಸಾವು ಒಂದೇ ಮಾರ್ಗ ಎಂದು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಯಾವುದೇ ಒಂದು ಸಣ್ಣ ಸಣ್ಣ ವಿಚಾರಕ್ಕೆ ಮನನೊಂದು ಪ್ರಾಣಕಳೆದುಕೊಳ್ಳುತ್ತಿದ್ದಾರೆ. ಅದರಂತೆ ತುಮಕೂರಿನಲ್ಲಿ ಓರ್ವ ಮಹಿಳೆ ತನ್ನಿಬ್ಬರ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮತ್ತೊಂದೆಡೆ ಚಿತ್ರದುರ್ಗದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ.

ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ: ವಿಕಲಚೇತನ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!
Woman Suicide With Her Two Children
ರಮೇಶ್ ಬಿ. ಜವಳಗೇರಾ
|

Updated on: Apr 03, 2025 | 10:37 PM

Share

ತುಮಕೂರು, (ಏಪ್ರಿಲ್ 03): ಸರ್ಕಾರಿ ನೌಕರನೋರ್ವ (government employee) ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನು ಸಹ ಆತ್ಮಹತ್ಯೆ (Suiicde) ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ಘಟನೆ ನಡೆದ 24 ಗಂಟೆಯಲ್ಲೇ ತುಮಕೂರಿನಲ್ಲಿ (Tumakuru) ಮಹಿಳೆಯೋರ್ವಳು(Woman) ತನ್ನಿಬ್ಬರು ಮಕ್ಕಳ ಜತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಯಿ ವಿಜಯಲಕ್ಷ್ಮೀ(45), ಮಗಳು ಚೂಡಾಮಣಿ(23), ಪುತ್ರ ನರಸಿಂಹರಾಜು(14) ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ಈ ದುರಂತ ನಡೆದಿದೆ.

ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರ ಭೇಟಿ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಘನಘೋರ ಕೃತ್ಯಕ್ಕೆ ಸಾಕ್ಷಿಯಾದ ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ

ಕಂದನ ರಕ್ಷಣೆಗೆ ತೆರಳಿದ ತಾಯಿಯೂ ಸಾವು

ಚಿತ್ರದುರ್ಗ: ಇನ್ನೊಂದೆಡೆ ಚಿತ್ರದುರ್ಗದ ತುಮಕೂರ್ಲಹಳ್ಳಿಯ ಮನೆಯೊಂದರಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ವಿದ್ಯುತ್ ತಂತಿ ಸ್ಪರ್ಶಿಸಿದ್ದ ಕಂದನ ರಕ್ಷಣೆಗೆ ತೆರಳಿದ ತಾಯಿಯೂ ಸಹ ದುರಂತ ಸಾವು ಕಂಡಿದ್ದಾಳೆ. ತಾಯಿ ಬೋರಮ್ಮ(25), ಪುತ್ರ ಪ್ರಣೀತ್(3) ಮೃತ ದುರ್ದೈವಿಗಳು. ಮೊದಲಿಗೆ ಮಗುವಿಗೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಅದನ್ನು ನೋಡಿ ರಕ್ಷಣೆಗೆಂದು ಹೋಗಿದ್ದಾಗ ತಾಯಿ ಬೋರಮ್ಮಳಿಗೂ ಸಹ ವಿದ್ಯುತ್​ ಸ್ಪರ್ಶಿಸಿದೆ. ಇದರಿಂದ ತಾಯಿ- ಮಗ ಮೃತಪಟ್ಟಿದ್ದಾರೆ. ಈ ಬಗ್ಗೆ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಹೆಂಡತಿ ಮೇಲಿನ ಸಿಟ್ಟಿಗೆ ವ್ಯಕ್ತಿಯೋರ್ವ ಅತ್ತೆ, ನಾದಿನಿ ಮತ್ತು ಮಗಳನ್ನು ಗುಂಡು ಹಾರಿಸಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಲ್ಲಿ ಭಯಾನಕ ಘಟನೆ ನಡೆದಿದ್ದು, ಈ ಘಟನೆಯಿಂದ ಇಡೀ ಊರಿಗೆ ಊರೇ ಬೆಚ್ಚಿಬಿದ್ದಿದೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?