ಸ್ಕೂಟರ್ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್ನಿಂದ 20 ಅಡಿ ಕೆಳಗಿರುವ ರಸ್ತೆಗೆ ಬಿದ್ದು ಮೃತಪಟ್ಟ ಮಹಿಳೆ
ಮಂಗಳೂರಿನ ಹೊರವಲಯದಲ್ಲಿರುವ ತೊಕ್ಕೊಟ್ಟು ಫ್ಲೈಓವರ್ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಅಲ್ಲಿದ್ದವರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ.
ಮಂಗಳೂರು: ಕಾರೊಂದು ಡಿವೈಡರ್ ಹಾಕಿ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಫ್ಲೈಓವರ್ನಿಂದ ಹಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ವಾಸಂತಿ (50) ಮೃತ ಮಹಿಳೆಯಾಗಿದ್ದು, ಕಾರು ಸ್ಕೂಟರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಸುಮಾರು 20 ಅಡಿಯಷ್ಟು ಕೆಳಗೆ ಇರುವ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಇನ್ನು ಇವರ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಗಳೂರಿನ ಹೊರವಲಯದಲ್ಲಿರುವ ತೊಕ್ಕೊಟ್ಟು ಫ್ಲೈಓವರ್ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಅಲ್ಲಿದ್ದವರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್ಡೌನ್; ಪ್ರತಿಯೊಬ್ಬರೂ ಸಹಕರಿಸಬೇಕು ಎಂದ ಸಚಿವ ಶಿವರಾಮ ಹೆಬ್ಬಾರ್
ಕೊವಿಡ್ನಿಂದ ಗುಣಮುಖರಾದ ಎರಡೇ ದಿನಕ್ಕೆ ಗಾಯಕ ಅರಿಜೀತ್ ಸಿಂಗ್ ತಾಯಿ ನಿಧನ