ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್​​​ಗೆ ಚಾಕುವಿನಿಂದ 10 ಬಾರಿ ಇರಿದ, ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಕೃತ್ಯ

ಸಾಮಾನ್ಯವಾಗಿ ಯಾವುದೇ ಒಂದು ಕಂಪನಿ ಸಡನ್ ಆಗಿ ಉದ್ಯೋಗದಿಂದ ತೆಗೆದು ಹಾಕಿದರೆ ನಾವೇನು ಮಾಡಬಹುದು ಅಳುತ್ತಾ ಕೂರಬಹುದು. ಸಂಸ್ಥೆಗೆ ಹಿಡಿಶಾಪ ಹಾಕುತ್ತಾ ಬೇರೆ ಉದ್ಯೋಗ ಹುಡುಕಲು ಶುರು ಮಾಡಬಹುದು. ಆದರೆ ಇಲ್ಲೊಬ್ಬ ಉದ್ಯೋಗಿ ತನ್ನನ್ನು ಕೆಲಸದಿಂದ ತೆಗೆದು ಹಾಕಿದ ಉದ್ಯೋಗಸಂಸ್ಥೆ ಮ್ಯಾನೇಜರ್​​​ ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಈ ಕೃತ್ಯ ಬೆಂಗಳೂರನ್ನೇ ಬೆಚ್ಚಿಬೀಳಿಸಿದೆ.

ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್​​​ಗೆ ಚಾಕುವಿನಿಂದ 10 ಬಾರಿ ಇರಿದ, ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಕೃತ್ಯ
ಆರೋಪಿ ಹನುಮಂತಪ್ಪ
Edited By:

Updated on: Mar 31, 2026 | 4:25 PM

ಬೆಂಗಳೂರು, (ಮಾರ್ಚ್ 31): ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್​​​ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ (Bengaluru) ತಿಗಳರಪಾಳ್ಯದಲ್ಲಿ ನಡೆದಿದೆ.  ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್(38) ಹತ್ಯೆಯಾದ ವ್ಯಕ್ತಿ. ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಉದ್ಯೋಗಿ ಯಾದಗಿರಿ ಮೂಲದ ಹನುಮಂತಪ್ಪ, ನಿನ್ನೆ (ಮಾರ್ಚ್ 30) ಮ್ಯಾನೇಜರ್ ರಾಹುಲ್ ಗೆ ಚಾಕುವಿನಿಂದ ಇರಿದಿದ್ದ. ಇದರಿಂದ ಗಾಯಗೊಂಡ ರಾಹುಲ್​ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮ್ಯಾನೇಜರ್ ರಾಹುಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಯಾದಗಿರಿ ಮೂಲದ ಹನುಮಂತಪ್ಪ ಎನ್ನುವಾತ ಬೆಂಗಳೂರಿನ ತಿಗಳರಪಾಳ್ಯದಲ್ಲಿರುವ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಎನ್ನುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಹನುಮಂತಪ್ಪನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಇದರಿಂದ ಕೋಪಗೊಂಡ ಹನುಮಂತಪ್ಪ, ನಿನ್ನೆ(ಮಾರ್ಚ್ 30) ಕಂಪನಿಯಲ್ಲಿದ್ದ ಮ್ಯಾನೇಜರ್ ರಾಹುಲ್​​ಗೆ ಸುಮಾರು 10 ಬಾರಿ ಚಾಕುವಿನಿಂದ ಇರಿದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ರಾಹುಲ್, ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ದುರದೃಷ್ಟವಶಾತ್, ಚಿಕಿತ್ಸೆ ಫಲಿಸದೇ ಮ್ಯಾನೇಜರ್ ರಾಹುಲ್ ಮಂಗಳವಾರ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ದುರಂತ ಸಾವು

ಮೃತ ರಾಹುಲ್ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸದ್ಯ  ರಾಜಗೋಪಾಲ್ ನಗರ ಪೊಲೀಸರು, ಯಾದಗಿರಿ ಮೂಲಕದ ಆರೋಪಿ ಹನುಮಂತಪ್ಪನನ್ನ ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Tue, 31 March 26

ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
Loading...
Unable to load recommendations.
Follow Us